News

ಬಂಗಾಳಕೊಲ್ಲಿಯಲ್ಲಿ ಡಿ.7ಕ್ಕೆ ವಾಯುಭಾರ ಕುಸಿತ: ಧಾರಾಕಾರ ಮಳೆ ಸಾಧ್ಯತೆ

28 November, 2022 6:13 PM IST By: Hitesh
Depression in Bay of Bengal on December 7: Heavy rain likely

ಬಂಗಾಳಕೊಲ್ಲಿಯಲ್ಲಿ ಡಿ.7ಕ್ಕೆ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಆಂಧ್ರಪ್ರದೇಶ,

ತಮಿಳುನಾಡು ಹಾಗೂ ಕರ್ನಾಟಕದ ಕೆಲವು ಆಯ್ದ ಭಾಗದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿನ್ನದ ಬೆಲೆಯಲ್ಲಿ ಅಲ್ಪ ಬದಲಾವಣೆ, ಇಂದಿನ ಚಿನ್ನದ ಬೆಲೆ ಎಷ್ಟಿದೆ ?

ಇನ್ನು ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ಮಲೆನಾಡು,

ಕರಾವಳಿ, ಉತ್ತರ ಕರ್ನಾಟಕದ ಕೆಲವೆಡೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಹಗುರ ಅಥವಾ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.

ಉಳಿದಂತೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

Heavy Rain| ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ,

ಮಂಡ್ಯ, ಮೈಸೂರು ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ

PmKisan | ಪಿ.ಎಂ ಕಿಸಾನ್‌ ಸಮ್ಮಾನ್‌ 13ನೇ ಕಂತಿನ ಹಣಕ್ಕೆ ಕ್ಷಣಗಣನೆ!

Depression in Bay of Bengal on December 7: Heavy rain likely

ರಾಜ್ಯದ ಸಮತಟ್ಟದ ಪ್ರದೇಶಗಳಲ್ಲಿ ಅತೀ ಕನಿಷ್ಠ ಉಷ್ಣಾಂಶ 14 ಡಿಗ್ರಿ ಸೆಲ್ಸಿಯಸ್‌ ಬೀದರ್‌ನಲ್ಲಿ ದಾಖಲಾಗಿದೆ.

ಮುಂದಿನ 24 ಗಂಟೆಗಳ ಕಾಲ ಮಳೆಯಲ್ಲಿ ಯಾವುದೇ ಗಣನೀಯ ಬದಲಾವಣೆಗಳು ಇಲ್ಲ.

ಮೀನುಗಾರರಿಗೆ ವಿಶೇಷವಾದ ಎಚ್ಚರಿಕೆಯನ್ನು ನೀಡಿಲ್ಲ.

ಇನ್ನು ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದ್ದು,

ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್‌

ಹಾಗೂ ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.