ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯ ಕಾರಣದಿಂದ ಮೇ 27 ರಿಂದ 29ರ ವರೆಗೆ ಧಾರವಾಡದಲ್ಲಿ ನಡೆಯಬೇಕಿದ್ದ ಕೃಷಿ ಮೇಳವನ್ನು ಮುಂದೂಡಲಾಗಿದೆ ಎಂದು ಕೃಷಿ ವಿಶ್ವವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಇನ್ನಷ್ಟು ಓದಿರಿ: Rain Alert: ನಾಳೆ, ನಾಡಿದ್ದು ಕರ್ನಾಟಕದಲ್ಲಿ ಗುಡುಗು-ಮಿಂಚು ಸಮೇತ ಭಾರೀ ಮಳೆ ಸಾಧ್ಯತೆ..!
ರಾಜ್ಯ ಸರ್ಕಾರಿ ನೌಕರರಿಗೆ Good News: ವರ್ಷಾಂತ್ಯಕ್ಕೆ ದೊರೆಯಲಿದೆ ಕೇಂದ್ರ ಮಾದರಿ ವೇತನ! ಯಾವಾಗ ದೊರೆಯಲಿದೆ ಗೊತ್ತೆ?
ಬಂಗಾಳಕೊಲ್ಲಿಯಲ್ಲಿ ಉಂಟಾದ ಅಸಾನಿ ಚಂಡಮಾರುತದ ಪರಿಣಾಮದಿಂದ ಕಳೆದ ಎಂಟತ್ತು ದಿನಗಳಿಂದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಅಕ್ಕಪಕ್ಕದ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ.
ಈ ಕಾರಣದಿಂದ ಧಾರವಾಡದ ಕೃಷಿ ವಿಶ್ವ ವಿದ್ಯಾಲಯದ ಮುಖ್ಯ ಆವರಣದಲ್ಲಿ ದಿನಾಂಕ 27-29 ಮೇ, 2022 ರವರೆಗೆ ಕೃಷಿ ಮೇಳವನ್ನು ಆಯೋಜಿಸಲು ನಿರ್ಧರಿಸಲಾಗಿತ್ತು.
ಸದರಿ ಅವಧಿಯಲ್ಲಿನ ಹವಾಮಾನ ಮುನ್ಸೂಚನೆ ಹಾಗೂ ಈಗಾಗಲೇ ಸುರಿಯುತ್ತಿರುವ ಮಳೆ ಪ್ರಮಾಣದಿಂದ ಕೃಷಿ ಮೇಳವನ್ನು ಮುಂದೂಡಲಾಗಿದೆ ಎಂದು ತಿಳಿಸಿದೆ.
ಗುಡ್ ನ್ಯೂಸ್: ಸಾವಯವ ಕೃಷಿಕರಿಗೆ ಇಲ್ಲಿದೆ ಬರೋಬ್ಬರಿ ರೂ.50,000 ಸಬ್ಸಿಡಿ!
ರೈತರಿಗೆ ರೂ.1,25,000 ಭರ್ಜರಿ ಸಹಾಯಧನ: ವಿವಿಧ ಕೃಷಿ ಚಟುವಟಿಕೆಗೆ ಈ ಸಬ್ಸಿಡಿ!
ಈಗಾಗಲೇ ರೈತ ಬಾಂಧವರು ಬಿತ್ತನೆ ಪೂರ್ವದ ಹಾಗೂ ಬಿತ್ತನೆ ಚಟುವಟಿಕೆಗಳಲ್ಲಿ ಭರದಿಂದ ತೊಡಗಿಸಿಕೊಂಡಿರುವದು ಹಾಗೂ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ.
ಈ ಎಲ್ಲ ಕಾರಣದಿಂದ, ಮೇಲ್ಕಾಣಿಸಿದ ದಿನಾಂಕದಂದು ನಡೆಯಬೇಕಿದ್ದ ಕೃಷಿಮೇಳವನ್ನು ಮುಂದೂಡಲಾಗಿದೆ.
ರೈತರಿಗೆ ಸಿಹಿ ಸುದ್ದಿ: ಮಾರುಕಟ್ಟೆಯಲ್ಲಿ ಗೋಧಿಗೆ ಬಂಪರ್ ಬೆಲೆ: ರೈತರ ಮುಖದಲ್ಲಿ ನಗೆ!
Paddy: ಉತ್ತಮ ಇಳುವರಿ ನೀಡುವ ರೋಗ ನಿರೋಧಕ ಭತ್ತದ ತಳಿಗಳ ಕುರಿತು ಇಲ್ಲಿದೆ ಸಮಗ್ರ ಮಾಹಿತಿ…
ಮುಂಬರುವ ದಿನಗಳಲ್ಲಿ ಸೂಕ್ತ ಸಮಯ ನಿದಗಿಪಡಿಸಿ ಕೃಷಿ ಮೇಳವನ್ನು ಆಯೋಜಿಸಲಾಗುವುದು ಎಂದು ಧಾರವಾಡದ ಕೃಷಿ ವಿಶ್ವ ವಿದ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
Asani Cyclone ನ ಕಾರಣ ಕರ್ನಾಟದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ!
PM Sinchayi: ರೈತರಿಗೆ ಇಲ್ಲಿದೆ ಭರ್ಜರಿ ಸಬ್ಸಿಡಿ: ನೀರಾವರಿ ಯೋಜನೆಗೆ ಶೇ.90ರಷ್ಟು ಸಹಾಯಧನ