1..
ಒಡಿಶಾ ಯುನಿವರ್ಸಿಟಿ ಆಫ್ ಅಗ್ರಿಕಲ್ಚರ್ ಆಂಡ್ ಟೆಕ್ನಾಲಜಿ ಮುಂದಾಳತ್ವದಲ್ಲಿ ಭುವನೇಶ್ವರದಲ್ಲಿ ಇಂದಿನಿಂದ ರೈತರ ಮೇಳ ಆರಂಭಗೊಳ್ಳುತ್ತಿದೆ. 2 ದಿನಗಳ ಕಾಲ ನಡೆಯುವ ಈ ಮೇಳವು ಒಡಿಶಾ ಯುನಿವರ್ಸಿಟಿ ಆಫ್ ಅಗ್ರಿಕಲ್ಚರ್ ಆಂಡ್ ಟೆಕ್ನಾಲಜಿ ಕ್ಯಾಂಪಸ್‌ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಮಾಧ್ಯಮ ಪಾಲುದಾರನಾಗಿ ಕೃಷಿ ಜಾಗರಣ ಭಾಗವಹಿಸುತ್ತಿದೆ.ಈ ಮೇಳದ ಮುಖ್ಯ ಉದ್ದೇಶ ಒಡಿಶಾದ ಕೃಷಿ ಮತ್ತು ರೈತರ ಕೌಶಲ್ಯ. ಹಾಗೂ ರೈತರು ಹೊಸ ಕೃಷಿ ಜ್ಞಾನ ಮತ್ತು ತಂತ್ರಗಳನ್ನು ಅಳವಡಿಸಿಕೊಂಡು ಕೃಷಿ ಕ್ಷೇತ್ರದಲ್ಲಿ ಅಭ್ಯುದಯವನ್ನು ಹೇಗೆ ತರಬಹುದು ಎಂಬುದರ ಕುರಿತು ರೈತ ಸಹೋದರ ಸಹೋದರಿಯರಿಗೆ ತರಬೇತಿ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ವಿಸಿ ಪಿ ಕೆ ರೌಲ್ ತಿಳಿಸಿದ್ದಾರೆ. ಇನ್ನು ಕೃಷಿ ಜಾಗರಣದ ಎಡಿಟರ್ ಇನ್ ಚೀಫ್ M C ಡೊಮಿನಿಕ್ ಕೂಡ ಈ ಮೇಳದಲ್ಲಿ ಭಾಗವಹಿಸಲಿದ್ದಾರೆ. ಪ್ರತಿ ಸ್ಟಾಲ್ ನಲ್ಲಿ ಕೃಷಿಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಪ್ರದರ್ಶಿಸಲಾಗುತ್ತಿದೆ. ಯಾವ ಕೃಷಿಗೆ ಯಾವ ಉಪಕರಣಗಳು ಬೇಕು, ಉತ್ತಮ ಕೃಷಿ ವಿಧಾನಗಳು ಇತ್ಯಾದಿಗಳ ಬಗ್ಗೆ ಕಲಿಯಲು ಮತ್ತು ತಮ್ಮ ಜ್ಞಾನವನ್ನು ಸುಧಾರಿಸಲು ಅವಕಾಶವನ್ನು ಪಡೆಯಬಹುದು ಎಂದು ವಿಸಿ ಪಿ ಕೆ ರೌಲ್ ಮಾಹಿತಿ ನೀಡಿದ್ದಾರೆ.
*-*-*--*-*-*--**-**-
7th pay commission 7ನೇ ವೇತನ ಆಯೋಗ ಅನುಷ್ಠಾನಕ್ಕೆ ಆಗ್ರಹಿಸಿ ಸರ್ಕಾರಿ ನೌಕರರಿಂದ ಮಾ. 1ರಿಂದ ಕೆಲಸಕ್ಕೆ ಗೈರು
2..
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಂದಾಯ ಇಲಾಖೆ ವತಿಯಿಂದ ಬಹುದೊಡ್ಡ ಖಾತಾ ಆಂದೋಲನವನ್ನು ಹಮ್ಮಿಕೊಂಡಿದೆ. ಈ ಕುರಿತು ಬಿಬಿಎಂಪಿಯ ವಿಶೇಷ ಆಯುಕ್ತರಾದ ಡಾ. ಆರ್.ಎಲ್ ದೀಪಕ್ ಅವರು ಮಾಹಿತಿ ನೀಡಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಸ್ವತ್ತುಗಳನ್ನು ನಗರ ಪಾಲಿಕೆ ವಹಿಗಳಲ್ಲಿ ದಾಖಲಿಸಿಕೊಂಡು ಆಸ್ತಿತೆರಿಗೆ ವ್ಯಾಪ್ತಿಗೆ ಒಳಪಡಿಸಲು. ಹಾಗೂ ಈ ಸಂಬಂಧ ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿಯನ್ನು ಒದಗಿಸಲು ಫೆಬ್ರವರಿ 27ರಿಂದ ಖಾತಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
*-*-*--*-*-*--**-**-
3..
ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಬರೋಬ್ಬರಿ 1.5 ಕೋಟಿ ರೂಪಾಯಿ ಮೌಲ್ಯದ ಅನಧಿಕೃತ ರಸಗೊಬ್ಬರ ಮತ್ತು ಕೀಟನಾಶಕಗಳನ್ನು ವಶಪಡಿಸಿಕೊಳ್ಳಲಾಗಿದೆ.ಒಂದು ವಾರದಲ್ಲಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ 1.5 ಕೋಟಿ ಮೌಲ್ಯದ ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಅನಧಿಕೃತ ಮತ್ತು ಕಡಿಮೆ ಗುಣಮಟ್ಟದ ಕೀಟನಾಶಕಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡುವುದರಿಂದ ಈ ಭಾಗದ ರೈತರಿಗೆ ಗಮನಾರ್ಹ ನಷ್ಟ ಉಂಟಾಗುತ್ತಿತ್ತು. ಇದನ್ನು ತಪ್ಪಿಸಲು ಇಲಾಖೆ ತನಿಖೆಯನ್ನು ಶುರು ಮಾಡಿತ್ತು. ಇದರ ಫಲವಾಗಿ ಬರೋಬ್ಬರಿ 1.5 ಕೋಟಿ ಮೌಲ್ಯದ ಅನಧಿಕೃತ ರಸಗೊಬ್ಬರ ಮತ್ತು ಕೀಟನಾಶಕವನ್ನ ವಶಕ್ಕೆ ಪಡಿಸಿಕೊಳ್ಳಲಾಗಿದೆ.
*-*-*--*-*-*--**-**-
PMKisanUpdate ಪಿ.ಎಂ ಕಿಸಾನ್ ಹಣ ಇದೇ ದಿನ ನಿಮ್ಮ ಖಾತೆಗೆ ಬರಲಿದೆ!
4..
ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ, ಮಡಿಕೇರಿ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಪದ್ಧತಿ ಅಳವಡಿಸಿದ ಸಾಮಾನ್ಯ ರೈತರಿಗೆ ಶೇ.75ರ ಸಹಾಯಧನ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತರಿಗೆ ಶೇ. 90 ರ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ರೈತರು ಸಮೀಪದ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಮಡಿಕೇರಿ, ಸೋಮವಾರಪೇಟೆ, ಪೆನ್ನಂಪೇಟೆಗೆ ಅಂಚೆ ಮೂಲಕ ಅರ್ಜಿ ಸಲ್ಲಿಸಿ ನೋಂದಾಣಿ ಮಾಡಿಕೊಳ್ಳಲು ಕೋರಿದೆ. ಹಾಗೂ ಸಹಾಯಧನ ಪಡೆಯಲು ಸಂಪೂರ್ಣ ಅರ್ಜಿಯನ್ನು ಸಂಬಂಧಪಟ್ಟ ತಾಲ್ಲೂಕು ತೋಟಗಾರಿಕೆ ಕಚೇರಿಗಳಿಗೆ ಮಾರ್ಚ್, 15 ರೊಳಗೆ ಸಲ್ಲಿಸಿ ಸಹಾಯಧನ ಪಡೆಯುವಂತೆ ತೋಟಗಾರಿಕೆ ಉಪ ನಿರ್ದೇಶಕರಾದ ನಾಯಕ್ ಅವರು ತಿಳಿಸಿದ್ದಾರೆ.
*-*-*--*-*-*--**-**-
5..
ಮಾ.11 ರಂದು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಐಐಟಿ ಕಟ್ಟಡ ಹಾಗೂ ರಾಜ್ಯದ ಹಾಗೂ ಕೇಂದ್ರದ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೊಳಿಸುವರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು. ಮುಮ್ಮಿಗಟ್ಟಿಯ ಐಐಟಿಯ ನೂತನ ಕಟ್ಟಡದ ನಿರ್ಮಾಣ ಹಂತದ ಕಾಮಗಾರಿಯನ್ನು ವೀಕ್ಷಿಸಿ, ಪರಿಶೀಲಿಸಿದ ಅವರು ಮಾತನಾಡುತ್ತಾ, ಶೀಘ್ರವೇ ಉಳಿದೆಲ್ಲ ಕೆಲಸವನ್ನು ಬೇಗನೆ ಮುಕ್ತಾಯಗೊಳಿಸುವಂತೆ ಐಐಟಿಯ ಕಟ್ಟಡ ನಿರ್ಮಾಣದ ಕಂಪನಿಯ ಸಿಇಓಗೆ ತಿಳಿಸಲಾಗಿದೆ ಎಂದರು.
*-*-*--*-*-*--**-**-
6..
2022-23ನೇ ಸಾಲಿನ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಹತ್ತನೆ ತರಗತಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ. ಕೊರೊನಾ ಕಾರಣದಿಂದ ಕಳೆದ ವರ್ಷ 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಇದೇ ಕೃಪಾಂಕವನ್ನು ಈ ವರ್ಷವೂ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಒಟ್ಟು ಕನಿಷ್ಠ ಅಂಕ ಗಳಿಸುವ ಎಸ್‍ಎಸ್ ಎಲ್‍ಸಿ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇ.5ರಷ್ಟು ಕೃಪಾಂಕವನ್ನು ನೀಡಲಿದೆ. ಕೊರೊನಾ ಕಾರಣದಿಂದ ಮಕ್ಕಳ ಶಿಕ್ಷಣದ ಮೇಲೆ ಉಂಟಾಗಿರುವ ಪರಿಣಾಮದಿಂದ ಮಕ್ಕಳು ಇನ್ನೂ ಪೂರ್ಣ ಚೇತರಿಕೆಯನ್ನು ಕಾಣದ ಕಾರಣ ಈ ವರ್ಷದಲ್ಲೂ ಅದನ್ನ ಮುಂದುವರೆಸಲು ನಿರ್ಧರಿಸಲಾಗಿದೆ.
*-*-*
1 ರಂದು ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಐಐಟಿ ಕಟ್ಟಡ ಹಾಗೂ ರಾಜ್ಯದ ಹಾಗೂ ಕೇಂದ್ರದ ಪ್ರಮುಖ ಯೋಜನೆಗಳ ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಗೊಳಿಸುವರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಅವರು ಹೇಳಿದರು. ಮುಮ್ಮಿಗಟ್ಟಿಯ ಐಐಟಿಯ ನೂತನ ಕಟ್ಟಡದ ನಿರ್ಮಾಣ ಹಂತದ ಕಾಮಗಾರಿಯನ್ನು ವೀಕ್ಷಿಸಿ, ಪರಿಶೀಲಿಸಿದ ಅವರು ಮಾತನಾಡುತ್ತಾ, ಶೀಘ್ರವೇ ಉಳಿದೆಲ್ಲ ಕೆಲಸವನ್ನು ಬೇಗನೆ ಮುಕ್ತಾಯಗೊಳಿಸುವಂತೆ ಐಐಟಿಯ ಕಟ್ಟಡ ನಿರ್ಮಾಣದ ಕಂಪನಿಯ ಸಿಇಓಗೆ ತಿಳಿಸಲಾಗಿದೆ ಎಂದರು.
*-*-*--*-*-*--**-**-
6..
2022-23ನೇ ಸಾಲಿನ ಮಾರ್ಚ್- ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ಹತ್ತನೆ ತರಗತಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ನೀಡಿದೆ. ಕೊರೊನಾ ಕಾರಣದಿಂದ ಕಳೆದ ವರ್ಷ 10 ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಲಾಗಿತ್ತು. ಇದೇ ಕೃಪಾಂಕವನ್ನು ಈ ವರ್ಷವೂ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಒಟ್ಟು ಕನಿಷ್ಠ ಅಂಕ ಗಳಿಸುವ ಎಸ್‍ಎಸ್ ಎಲ್‍ಸಿ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇ.5ರಷ್ಟು ಕೃಪಾಂಕವನ್ನು ನೀಡಲಿದೆ. ಕೊರೊನಾ ಕಾರಣದಿಂದ ಮಕ್ಕಳ ಶಿಕ್ಷಣದ ಮೇಲೆ ಉಂಟಾಗಿರುವ ಪರಿಣಾಮದಿಂದ ಮಕ್ಕಳು ಇನ್ನೂ ಪೂರ್ಣ ಚೇತರಿಕೆಯನ್ನು ಕಾಣದ ಕಾರಣ ಈ ವರ್ಷದಲ್ಲೂ ಅದನ್ನ ಮುಂದುವರೆಸಲು ನಿರ್ಧರಿಸಲಾಗಿದೆ.
*-*-*