1. ಸುದ್ದಿಗಳು

Diesel ದರ R.25 ಏರಿಕೆ! ಎಲ್ಲೆಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?

Kalmesh T
Kalmesh T
Diesel rate R.25 rise! Where is the price of petrol and diesel?

ಪೆಟ್ರೋಲ್​-ಡೀಸೆಲ್​ ಬೆಲೆ ಬಿಡುಗಡೆ

ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. 

ಅಂತಾರಾಷ್ಟ್ರೀಯ ತೈಲ ದರವು ಶೇಕಡಾ 40 ರಷ್ಟು ಹೆಚ್ಚಳವಾಗಿದೆ. ಹೀಗಾಗಿ ಭಾರತದಲ್ಲಿ ಡೀಸೆಲ್ ಸಗಟು ಖರೀದಿ ದರ ಲೀಟರ್​ಗೆ 25 ರೂಪಾಯಿ ಹೆಚ್ಚಿಸಲಾಗಿದೆ. ಬಲ್ಕ್ ಆಗಿ, ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಇದು ಅನ್ವಯವಾಗಲಿದೆ. ಆದರೆ, ಜನಸಾಮಾನ್ಯರು ಸಣ್ಣ ಪ್ರಮಾಣದಲ್ಲಿ ಕೊಳ್ಳುವ ಡೀಸೆಲ್ ಬೆಲೆಯಲ್ಲಿ ಯಾವುದೇ ಹೆಚ್ಚಳ ಆಗಿಲ್ಲ. ಇಂದು (ಮಾರ್ಚ್  21, ಸೋಮವಾರ) ಇಂಧನಗಳ ದರದಲ್ಲಿ(Fuel Rate) ಯಾವುದೇ ಬದಲಾವಣೆಯಾಗಿಲ್ಲ. 

ಇದನ್ನು ಓದಿರಿ:

EPF ಖಾತೆದಾರರಿಗೆ Shock..! 2.50 ಲಕ್ಷ ಮೀರಿದ ಕೊಡುಗೆಗೆ ತೆರಿಗೆ

Edible oil prices Hike! Big Update! ಖಾದ್ಯ ತೈಲ ಬೆಲೆ ಲೀಟರ್‌ಗೆ ಸುಮಾರು 25 ರೂ. ಮತ್ತು ಬಾದಾಮಿ ಕೆಜಿಗೆ 20 ರಿಂದ 320 to 30 rs0 ರೂ. ತಲುಪಬಹುದು!

ಬೆಂಗಳೂರು ಮತ್ತು ಇತರೆ ನಗರಗಳಲ್ಲಿ ಎಷ್ಟು?

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ. ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95.41 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 109.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.14 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.40 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 91.59 ರೂಪಾಯಿ ಇದೆ.  ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ 104.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ಡೀಸೆಲ್ ದರ 89.79 ರೂಪಾಯಿ ನಿಗದಿಯಾಗಿದೆ.

ಇನ್ನಷ್ಟು ಓದಿರಿ:

ಲಾಭದಾಯಕ Ajola ಕೃಷಿ..! Smart ಕೃಷಿ ಮಾಡುವವರ ಗಮನಕ್ಕೆ.

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ:

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

ಮತ್ತಷ್ಟು ಓದಿರಿ:

36 Million ವರ್ಷ ಹಳೆಯ ತಿಮಿಂಗಲು ಪತ್ತೆ! ಇದರ Speciality ಏನು?

ಅಚ್ಚರಿ ಆದ್ರೂ ಸತ್ಯ: ಪೇಪರ್‌ Shortage ಅಂತಾ ಪರೀಕ್ಷೆ ಕ್ಯಾನ್ಸಲ್‌..! ಆತಂಕದಲ್ಲಿ 35 ಲಕ್ಷ ವಿದ್ಯಾರ್ಥಿಗಳು

Published On: 21 March 2022, 09:57 AM English Summary: Diesel rate R.25 rise! Where is the price of petrol and diesel?

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.