1. ಸುದ್ದಿಗಳು

ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲು ಉದ್ಯೋಗ ಮೇಳ

Interview

ಲಾಕ್ಡೌನ್ ನಿಂದಾಗಿ ಉದ್ಯೋಗ ಕಳೆದುಕೊಂಡಿರುವ ಹಾಗೂ ಉದ್ಯೋಗಕ್ಕಾಗಿ ಕಾದು ಕುಳಿತಿರುವ ಅಭ್ಯರ್ಥಿಗಳಿಗಿಲ್ಲಿದೆ ಸಂತಸದ ಸುದ್ದಿ, ನೇರವಾಗಿ ಸಂದರ್ಶನಕ್ಕೆ ಬಂದು ಉದ್ಯೋಗಕ್ಕೆ ಸೇರಿಕೊಳ್ಳುವ ಸುವರ್ಣಾವಕಾಶವಿದೆ.

ಹೌದು  ಶಿವಮೊಗ್ಗ ಜಿಲ್ಲೆಯ ಹೆಸರಾಂತ ಕಂಪನಿಗಳು ಖಾಲಿ ಇರುವ ವಿವಿಧ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.  ಇದಕ್ಕಾಗಿ ವಾಕ್ ಇನ್ ಸಂದರ್ಶನ ಆಯೋಜಿಸಲಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬಹುದು.

ಇದನ್ನೂ ಓದಿ:ನಿರುದ್ಯೋಗಿಗಳಿಗೆ ಸಂತಸದ ಸುದ್ದಿ ಜನವರಿ 21 ರಂದು ಉದ್ಯೋಗ ಮೇಳ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಜನವರಿ 19 ರಂದು ಬೆಳಿಗ್ಗೆ 10ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ-ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಎನ್.ಸಿ.ಎಸ್.ಪಿ ಯೋಜನೆಯಡಿ ಉದ್ಯೋಗ ಮೇಳವನ್ನು ಏರ್ಪಡಿಸಿದೆ. ಈ ಉದ್ಯೋಗ ಮೇಳದಲ್ಲಿ 8ನೇ ತರಗತಿ,  ಎಸ್.ಎಸ್.ಎಲ್.ಸಿ.,  ಪಿ.ಯು.ಸಿ.,  ಐ.ಟಿ.ಐ., ಡಿಪ್ಲೋಮಾ,  ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿದ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡಾಟ ಮತ್ತು ಆಧಾರ್ ಕಾರ್ಡ್ ಪ್ರತಿ ಹಾಗೂ ಶೈಕ್ಷಣಿಕ ದಾಖಲಾತಿಗಳ ಜೆರಾಕ್ಸ್ ಪ್ರತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-255293, ಮೊ.8861890866, 9036067511/ 9535312531 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Published On: 13 January 2021, 01:15 PM English Summary: direct interview for job

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.