Direct interview for job: ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಅರ್ಥಶಾಸ್ತ್ರ ವಿಭಾಗದಲಿ ಎಂಎಸ್ಸಿ ಪದವಿ ಪಡೆದಿರುವ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ನೇರ ಸಂದರ್ಶನಕ್ಕೆ ಕರೆಯಲಾಗಿದೆ.
ನೇಮಕಾತಿ ಬಯಸುವ ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಭಂದಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜೂನ್ 2 ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನಕ್ಕೆ ಡೀನ್ (ಕೃಷಿ) ಕಛೇರಿಯಲ್ಲಿ ಹಾಜರಿರಬೇಕೆಂದು ಕೃಷಿ ಮಹಾವಿದ್ಯಾಲಯದ ಡೀನ್ (ಕೃಷಿ) ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೇ.28 ರಂದು ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಕ್ಕಾಗಿ 6ನೇ ತರಗತಿ ಪ್ರವೇಶ ಪರೀಕ್ಷೆ
ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶಕ್ಕಾಗಿ 2023-24 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಮೇ.28 ರಂದು ಬೆಳಿಗ್ಗೆ 11 ರಿಂದ 12-30 ಗಂಟೆವರೆಗೆ 6ನೇ ತರಗತಿಯ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಯನ್ನು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಅಂಚಟಗೇರಿ ತಾ.ಹುಬ್ಬಳ್ಳಿ ಜಿ.ಧಾರವಾಡ ಇಲ್ಲಿ ನಡೆಸಲಾಗುವುದು.
ಆದ್ದರಿಂದ, ಅರ್ಜಿ ಸಲ್ಲಿಸಿದ ಎಲ್ಲಾ ವಿದ್ಯಾರ್ಥಿಗಳು ಮೇ.24 ರಿಂದ 27 ರೊಳಗಾಗಿ ಕಡ್ಡಾಯವಾಗಿ ಅಂಚಟಗೇರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪರೀಕ್ಷಾ ಪ್ರವೇಶ ಪತ್ರವನ್ನು ಪಡೆದುಕೊಂಡು ಮೇ.28 ರಂದು ಬೆಳಿಗ್ಗೆ 10 ಗಂಟೆಯೊಳಗಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
ಹೆಚ್ಚಿನ ಮಾಹಿತಿಗಾಗಿ ಹುಬ್ಬಳ್ಳಿ ಅಲ್ಪಸಂಖ್ಯಾತರ ವಸತಿ ಶಾಲೆ ಅಂಚಟಗೇರಿ ಮೊ.ಸಂ. 7337768683, 9448054139, 8310409724, 8497847789, 9880896219 ಸಂಪರ್ಕಿಸಬಹುದೆಂದು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೋಪಾಲ ಎಚ್.ಲಮಾಣಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು ರಂಗಾಯಣದಲ್ಲಿ ಒಂದು ವರ್ಷದ ರಂಗಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ
2023-24ನೇ ಸಾಲಿನ ಅರ್ಹ ಅಭ್ಯರ್ಥಿಗಳಿಗೆ ಕರ್ನಾಟಕ ಸರ್ಕಾರದಿಂದ ಮೈಸೂರಿನಲ್ಲಿ ಸ್ಥಾಪಿತವಾದ ರಂಗಾಯಣದಲ್ಲಿ ಒಂದು ವರ್ಷದ ರಂಗಶಿಕ್ಷಣ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ರಂಗ ತರಬೇತಿ ಸೇರಬಯಸುವರು ರಂಗಭೂಮಿಯ ಪ್ರಾಥಮಿಕ ಅನುಭವ ಹೊಂದಿರಬೇಕು, ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಅರ್ಜಿ ಸಲ್ಲಿಸಲು 18 ವರ್ಷದಿಂದ ಮತ್ತು 28 ವರ್ಷ ತುಂಬಿರಬೇಕು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಕಲ್ಪಿಸಿಕೊಡಲಾಗುವುದು. ಮತ್ತು ತಿಂಗಳಿಗೆ ರೂ.5,000/-ಗಳ ವಿದ್ಯಾರ್ಥಿ ವೇತನ ನೀಡಲಾಗುವುದು.
ರಂಗಶಿಕ್ಷಣ ಕೇಂದ್ರಕ್ಕೆ ಸೇರಬಯಸುವ ವಿದ್ಯಾರ್ಥಿಗಳು ಮೇ 15 ರಿಂದ ರಂಗಾಯಣ ವೆಬ್‍ಸೈಟ್ http://rangayanamysusore.karnataka.giv.in ನಲ್ಲಿ ಅರ್ಜಿ ಡೌನ್‍ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಉಪನಿರ್ದೇಶಕರು, ರಂಗಾಯಣ ಮೈಸೂರು ವಿಳಾಸಕ್ಕೆ ಜೂನ್ 5 ರೊಳಗೆ ಅಂಚೆ ಮೂಲಕ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ-0821-2512639, 9448938661, 9148827720, ಮತ್ತು 8867514311 ಸಂಪರ್ಕಿಸಬಹುದು ಎಂದು ರಂಗಾಯಣ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.