News

ಸರ್ಕಾರಿ ನೌಕರಿ ನೀರಿಕ್ಷೆಯಲ್ಲಿರುವವರಿಗೆ ಬಂಪರ್‌: "ಮಿಷನ್‌ ಮೋಡ್‌"ನಲ್ಲಿ 10 ಲಕ್ಷ ಹುದ್ದೆಗಳ ನೇರ ನೇಮಕಾತಿಗೆ ಪಿಎಂ ಮೋದಿ ಆದೇಶ

14 June, 2022 2:49 PM IST By: Maltesh
PM Modi

ಮುಂದಿನ 1.5 ವರ್ಷದ ಅವಧಿಯಲ್ಲಿ ದೇಶಾದ್ಯಂತ ಖಾಲಿಯಿರುವ 10 ಲಕ್ಷ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳುವಂತೆ  ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಿದ್ದಾರೆ.

2014ರ ಲೋಕಸಭೆ ಚುನಾವಣೆಗೆ ಮುನ್ನ ತಾವು ಅಧಿಕಾರಕ್ಕೆ ಬಂದ ಬಳಿಕ ಪ್ರತಿ ವರ್ಷ ದೇಶದಲ್ಲಿ2 ಕೋಟಿ ಉದ್ಯೋಗ ಸೃಷ್ಠಿ ಮಾಡುವುದಾಗಿ ಹೇಳಿದ್ದ ನರೇಂದ್ರ ಮೋದಿ ಅವರ ಹೇಳಿಕೆ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದರು. ಇದೀಗ 2014ರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಸಚಿವಾಲಯ ಮತ್ತು ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಇಲಾಖೆಗಳಲ್ಲಿ ನೇರ ನೇಮಕಾತಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.

ಈ ಕಂಪನಿಯಲ್ಲಿ ತೂಕ ಇಳಿಸಿಕೊಂಡ್ರೆ ಅರ್ಧ ತಿಂಗಳ ಸಂಬಳ ಬೋನಸ್‌..!

WPI Inflation: ಗರಿಷ್ಠ ಮಟ್ಟಕ್ಕೆ ಸಗಟು ಹಣದುಬ್ಬರ..ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬಿಸಿ..

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಬಂದಿದೆ. ವಿವಿಧ ಸರ್ಕಾರಿ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಆಗಾಗ್ಗೆ ನವೀಕರಿಸಲಾಗಿದೆ.

"ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದ್ದಾರೆ ಮತ್ತು ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನಲ್ಲಿ ಸರ್ಕಾರವು ನೇಮಕಾತಿ ಮಾಡುವಂತೆ ಸೂಚನೆ ನೀಡಿದ್ದಾರೆ" ಎಂದು ಪ್ರಧಾನಿ ಕಾರ್ಯಾಲಯವು ಟ್ವೀಟ್‌ನಲ್ಲಿ ತಿಳಿಸಿದೆ.

ಈ ತಪ್ಪುಗಳನ್ನ ಮಾಡಿದ್ರೆ ನಿಮ್ಮ ಬ್ಯಾಂಕ್ ಅಕೌಂಟ್ ಕ್ಲೋಸ್ ಆಗೋದು ಫಿಕ್ಸ್..!

ಜೋರಾಗಿದೆ Hydroponic Farmingಗೆ ಬೇಡಿಕೆ..ಇಲ್ಲಿವೆ ಟಾಪ್‌ 5 ತರಕಾರಿಗಳು