1. ಸುದ್ದಿಗಳು

ಮೇ ತಿಂಗಳ ಪಡಿತರದಾರರಿಗೆ ಆಹಾರ ಧಾನ್ಯ ವಿತರಣೆ

ಕೋವಿಡ್-೧೯ರ ತುರ್ತು ಪರಿಸ್ಥಿತಿಯ ಹಿನ್ನೆಲೆಯಲ್ಲಿ ಎನ್.ಎಫ್.ಎಸ್.ಎ. ಹಾಗೂ ಪಿ.ಎಂ.ಜಿ.ಕೆ.ಎ.ವೈ. ಹಂಚಿಕೆಯಡಿ 2021ರ ಮೇ ಮಾಹೆಯಲ್ಲಿ ಕಲಬುರಗಿ ಜಿಲ್ಲೆಯ ಎಎವೈ/ ಅಂತ್ಯೋದಯ ಅನ್ನ,  ಬಿ.ಪಿ.ಎಲ್./ ಆದ್ಯತಾ ಹಾಗೂ ಎ.ಪಿ.ಎಲ್. (ಆದ್ಯತೇತರ) ಪಡಿತರ ಚೀಟಿ ಕಾರ್ಡುದಾರರಿಗೆ ಈ ಕೆಳಗಿನಂತೆ ಪಡಿತರ ಆಹಾರಧಾನ್ಯಗಳನ್ನು ವಿತರಿಸಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿಗಳಾದ ವಿ.ವಿ. ಜ್ಯೋತ್ಸ್ನಾ ಅವರು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಕೋವಿಡ್-19 ಸುರಕ್ಷತಾ ನಿಯಮಗಳನ್ನು ಪಾಲಿಸಿ, ಜನದಟ್ಟಣೆ ಉಂಟಾಗದAತೆ ಸಾಮಾಜಿಕ ಅಂತರ ಕಾಯ್ದುಕೊಂಡು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ ಪಡಿತರ ಆಹಾರ ಧಾನ್ಯವನ್ನು ಪಡೆಯಬೇಕೆಂದು ಡಿ.ಸಿ. ಅವರು ಮನವಿ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ 63,456 ಎಎವೈ ಪಡಿತರ ಚೀಟಿಗಳ 2,64,685 ಸದಸ್ಯರಿಗೆ ಮತ್ತು 4,91,275 ಪಿ.ಎಚ್.ಎಚ್. (ಬಿ.ಪಿ.ಎಲ್.) ಪಡಿತರ ಚೀಟಿಗಳ 16,69,514 ಸದಸ್ಯರಿಗೆ ಹಾಗೂ 18,209 ಎ.ಪಿ.ಎಲ್. (ವಿಲ್ಲಿಂಗ್‌ನೆಸ್) ಪಡಿತರ ಕಾರ್ಡುದಾರರಿಗೆ ಈ ಕೆಳಗಿನಂತೆ ಪಡಿತರ ಚೀಟಿಯನ್ನು ವಿತರಿಸಲಾಗುತ್ತದೆ.

ಎಎವೈ/ ಅಂತ್ಯೋದಯ ಅನ್ನ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ. ಯೋಜನೆಯಡಿ ಪ್ರತಿ ಪಡಿತರ ಚೀಟಿಗೆ 35  ಕೆ.ಜಿ. ಅಕ್ಕಿ ಮತ್ತು ಪಿ.ಎಂ.ಜಿ.ಕೆ.ಎ.ವೈ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ 5 ಕೆ.ಜಿ ಅಕ್ಕಿ  ಉಚಿತವಾಗಿ ವಿತರಿಸಲಾಗುತ್ತದೆ.

ಬಿಪಿಎಲ್/ ಆದ್ಯತಾ ಪಡಿತರ ಚೀಟಿದಾರರಿಗೆ ಎನ್.ಎಫ್.ಎಸ್.ಎ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಹಾಗೂ ಪಿ.ಎಂ.ಜಿ.ಕೆ.ಎ.ವೈ. ಯೋಜನೆಯಡಿ ಪ್ರತಿ ಪಡಿತರ ಚೀಟಿ ಸದಸ್ಯರಿಗೆ 5 ಕೆ.ಜಿ ಅಕ್ಕಿ (ಪ್ರತಿ ಸದಸ್ಯರಿಗೆ ಒಟ್ಟು 10 ಕೆ.ಜಿ ಅಕ್ಕಿ) ಹಾಗೂ ಪ್ರತಿ ಪಡಿತರ ಚೀಟಿಗೆ 2 ಕೆ.ಜಿ. ಗೋಧಿ ಉಚಿತವಾಗಿ ವಿತರಿಸಲಾಗುತ್ತದೆ. ಎಪಿಎಲ್ /ಆದ್ಯತೇತರ (Willingness ಏಕಸದಸ್ಯ ಇರುವ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ  ಮತ್ತು ಒಂದಕ್ಕಿAತ ಹೆಚ್ಚು ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ಪ್ರತಿ ಕೆ.ಜಿ.ಗೆ ದರ 15 ರೂ. ರಂತೆ ವಿತರಿಸಲಾಗುತ್ತದೆ.

   ಅಂತರರಾಜ್ಯ/ ಅಂತರ್‌ಜಿಲ್ಲೆ ಪೋರ್ಟೆಬಿಲಿಟಿ (Portability) ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Published On: 30 April 2021, 04:45 PM English Summary: Distribution of food grain to ration card holder

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.