ಮಹದಾಯಿ ನದಿ ನೀರು ತಿರುವು ಯೋಜನೆ ವಿಚಾರದಲ್ಲಿ ಸರ್ಕಾರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಕರ್ನಾಟಕ ಕಳಸಾ-ಬಂಡೂರಿ ರೈತ ಹೋರಾಟ ಸಮಿತಿ ದೂರಿದೆ.
Weather Update: ರಾಜ್ಯದಲ್ಲಿ ಹೆಚ್ಚಾದ ಚಳಿ ವಾತಾವರಣ
ಅಲ್ಲದೇ ಯೋಜನೆಗೆ ಅನುಮೋದನೆ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹೋರಾಟಗಾರರು ಹಾಗೂ ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸರ್ಕಾರ ಈಗಾಗಲೇ ನೀಡಿರುವ ಭರವಸೆಯಂತೆ ಯೋಜನೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ವಿಫಲವಾದರೆ, ಪುನಃ ಆಂದೋಲನವನ್ನು ಪ್ರಾರಂಭಿಸಲಾಗುವುದು. ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು 2018 ರ ವಿಧಾನಸಭಾ ಚುನಾವಣೆಯ ಮೊದಲು ಯೋಜನೆಯನ್ನು ಶೀಘ್ರವಾಗಿ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಭರವಸೆ ಈಡೇರಿಸಲಿಲ್ಲ. ಅಧಿಕಾರಕ್ಕೆ ಬಂದ ನಂತರ ಏನನ್ನೂ ಮಾಡಲಿಲ್ಲ. ಬೊಮ್ಮಾಯಿ-ಜೋಶಿ ಜೋಡಿಯಲ್ಲೂ ಇದೇ ಮೋಸದ ಆಟ ನಡೆಯುತ್ತಿದೆ ಎಂದು ಸಮಿತಿ ಮುಖಂಡ ಕುಮಾರ ಹಕಾರಿ ಅವರು ಅಕ್ರೋಶ ವ್ಯಕ್ತಪಡಿಸಿದ್ದಾರೆ.
ದಾಖಲೆಗಳ ಸತ್ಯಾಸತ್ಯತೆಯನ್ನು ಪ್ರಶ್ನಿಸಿದ ಅವರು, ಯೋಜನೆ ಅನುಷ್ಠಾನದ ಬಗ್ಗೆ ಬಿಜೆಪಿ ನಾಯಕರು ಸುಳ್ಳುಗಳನ್ನು ಹರಡುತ್ತಿದ್ದಾರೆ. ಈ ಬಾರಿ ಜನರನ್ನು ಯಾಮಾರಿಸಲು ಸಾಧ್ಯವಿಲ್ಲ ಎಂದಿದ್ದಾರೆ. ನಾಯಕ ಸಿದ್ದು ತೇಜಿ ಮಾತನಾಡಿ, 2018ರಲ್ಲಿಯೇ ನ್ಯಾಯಮಂಡಳಿಯು ಮಹದಾಯಿ ನದಿ ನೀರಿನಲ್ಲಿ ರಾಜ್ಯದ ಪಾಲಿನ ಪಾಲನ್ನು ನೀಡಿತ್ತು. ಆದರೆ, ಸುದೀರ್ಘ ನಾಲ್ಕು ವರ್ಷಗಳ ಕಾಲ ಕೇಂದ್ರ ಮತ್ತು ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ನಾಲ್ಕು ವರ್ಷಗಳ ಕಾಲ ನಿದ್ರೆ ಮಾಡುತ್ತಿದ್ದವು.
Nandini and Amul| ನಂದಿನಿ ಮತ್ತು ಅಮುಲ್ ಬ್ರ್ಯಾಂಡ್ ವಿಲೀನಕ್ಕೆ ವಿರೋಧ
ಇದೀಗ ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿದ್ದಂತೆ ಎಚ್ಚರಗೊಂಡಿದ್ದಾರೆ. ನಾವು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿಲ್ಲ, ಆದರೆ, ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕೆಂಬುದನ್ನು ಬಯಸುತ್ತಿದ್ದೇವೆಂದು ಎಂದು ಹೇಳಿದರು. ಯೋಜನೆಯ ಅನುಷ್ಠಾನ ಪ್ರಾರಂಭಿಸಲು ರಾಜ್ಯ ಸರ್ಕಾರಕ್ಕೆ ಒಂದು ತಿಂಗಳ ಗಡುವು ನೀಡಲಾಗುವುದು. ಈ ಅವಧಿಯ ಒಳಗಾಗಿ ಯೋಜನೆ ಜಾರಿ ಮಾಡಬೇಕು. ಇಲ್ಲದಿದ್ದರೆ, ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
Share your comments