1. ಸುದ್ದಿಗಳು

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಹೊಸ ದಾಖಲೆ

ರಾಜಕೀಯ ಪಕ್ಷವೊಂದರ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ರಾಜ್ಯದ ಸುಮಾರು 19000 ಕಡೆಗಳಲ್ಲಿ ಜೂಮ್‌ ತಂತ್ರಾಂಶದ ಮೂಲಕ ಆನ್ ಲೈನ್ ನಲ್ಲಿ ಪ್ರಸಾರಗೊಂಡ ಕಾರ್ಯಕ್ರಮವನ್ನು ಏಕಕಾಲದಲ್ಲಿ 40 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸುವ ಮೂಲಕ ದಾಖಲೆಯಾಯಿತು.

ಲಾಕ್ ಡೌನ್ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರರವರ ಪದಗ್ರಹಣ ಪ್ರತಿಜ್ಞಾ ಕಾರ್ಯಕ್ರಮ ವಿವಿಧ ಕಾರಣಗಳಿಂದ ಮುಂದೂಡಲಾಗಿತ್ತು. ಆದರೆ ಗುರುವಾರ ರಾಜ್ಯದ ಮೂಲೆ ಮೂಲೆಗಳಲ್ಲಿ ಏಕಕಾಲದಲ್ಲಿ ಯಾವೇದ ಗೊಜಲು ಗೊಂದಲಗಳಿಲ್ಲದೆ ಯಶಸ್ವಿಯಾಗಿ ನಡೆಯಿತು. ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಬೃಹತ್ ಸಮಾವೇಶದ ಬದಲು ಆನ್ ಲೈನ್ ಮೂಲಕ ಅಷ್ಟೇ ದೊಡ್ಡಮಟ್ಟದಲ್ಲಿ ಕಾರ್ಯಕ್ರಮವನ್ನು ಸಂಘಡಿಸಿದ ಡಿ.ಕೆ. ಶಿವಕುಮಾರ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ರಾಜ್ಯ ಸರ್ಕಾರ ಸೂಚಿಸಿದಂತೆ  ಸಾಮಾಜಿಕ ಅಂತರಕ್ಕೆ ಧಕ್ಕೆಯಾಗದೆ ನಿಯಮತಿ ಸಂಖ್ಯೆಯಲ್ಲಿ ನಿರ್ಧಿಷ್ಟ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ರಾಜ್ಯಾದ್ಯಂತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಲಕ್ಷಾಂತರ ಕಾರ್ಯಕರ್ತರು ಏಕಕಾಲಕ್ಕೆ ಪ್ರತಿಜ್ಞೆಕೈಗೊಂಡಿದ್ದು ಒಂದು ದಾಖಲೆಯಾಯಿತು.

ಕಾರ್ಯಕರ್ತರಲ್ಲದೆ, ಲಕ್ಷಾಂತರ ಜನ ಮನೆಯಲ್ಲಿಯೇ ಕುಳಿತು ಡಿಜಿಟಲ್‌ ಮಾಧ್ಯಮಗಳ ಮೂಲಕ ಕಾರ್ಯಕ್ರಮವನ್ನು ವೀಕ್ಷಿಸಿದರು. ನಗರದ ಬೀದಿ–ಬೀದಿಗಳಲ್ಲಿ ಕಾಂಗ್ರೆಸ್‌ ಬಾವುಟಗಳು, ಭಿತ್ತಿಪತ್ರಗಳು ರಾರಾಜಿಸಿದವು. ಬಿಬಿಎಂಪಿಯ ಕಾಂಗ್ರೆಸ್‌ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿ, ಎಲ್‌ಇಡಿ ಪರದೆಗಳನ್ನು ಹಾಕಿ ಹಾಗೂ ಕೆಲವೆಡೆ ಟಿವಿಗಳನ್ನು ಅಳವಡಿಸುವ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಿದ್ದರು. ಶಿವಕುಮಾರ್‌ ಅವರ ಸಾಧನೆಗಳನ್ನು ಬಿಂಬಿಸುವ ಆಡಿಯೊ–ವಿಡಿಯೊಗಳನ್ನು ಪ್ರದರ್ಶಿಸ‌ಲಾಯಿತು.

ಕಾರ್ಯಕ್ರಮ ನಡೆಯುತ್ತಿರುವ ವೇಳೆಯಲ್ಲಿ  ಎಐಸಿಸಿ ಮಾಜಿ ಅದ್ಯಕ್ಷ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಯವರು ಡಿ.ಕೆ. ಶಿವಕುಮಾರರವರಿಗೆ ಶುಭಾಷಯ ಕೋರಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೀರಿ ಎಂಬ ವಿಶ್ವಾಸ ತಮಗೆ ಇದೆ ಎಂದು ರಾಹುಲ್ ಗಾಂಧಿಯವರು  ಹೇಳಿದರು.

ಇದೇ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಅಧಿಕಾರಿ ಸ್ವೀಕರಿಸಿದ ನಂತರ ಜನರನ್ನುದ್ದೇಶಿಸಿ  ಡಿ.ಕೆ. ಶಿವಕುಮಾರ ಮಾತನಾಡಿ, ನನಗೆ ಯಾರು ಎಷ್ಟೇ ತೊಂದರೆ ಕೊಡಲಿ, ಆಮಿಷ ಒಡ್ಡಲಿ, ಕೇಸ್ ಹಾಕಲಿ, ಜೈಲಿಗೆ ಹಾಕಲಿ. ಯಾವುದಕ್ಕೂ ನಾನು ಬೆದರುವುದಿಲ್ಲ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನನ್ನ ಗುರಿ. ಅದಕ್ಕಾಗಿ ವಿಧಾನಸೌಧದ ಮೆಟ್ಟಿಲ ಕಲ್ಲಾಗುತ್ತೇನೆ. ನಾನು ಯಾರಿಗೂ ದ್ರೋಹ ಬಗೆದಿಲ್ಲ. ಹಲವು ತೊಂದರೆ ಅನುಭವಿಸಿದ್ದೇನೆ. ಅದೆಲ್ಲವೂ ಪಕ್ಷಕ್ಕಾಗಿ. ಯಾರಿಗಾ

ದರೂ ಅನ್ಯಾಯ ಮಾಡಿದ್ದರೆ ಶಿಕ್ಷೆ ಸ್ವೀಕರಿಸಲು ಸಿದ್ಧ’ ಎಂದರು.

Published On: 03 July 2020, 02:40 PM English Summary: D.K. shivakumar takes charge as kpcc president programme got record

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.