News

ಸುಕನ್ಯಾ ಸಮೃದ್ಧಿ ಯೋಜನೆ ಬಗ್ಗೆ ನಿಮಗೆ ಗೊತ್ತೇ? ಇಲ್ಲಿದೆ ಸಂಪೂರ್ಣ ಮಾಹಿತಿ

16 August, 2021 9:00 PM IST By:

ಕೇಂದ್ರ ಸರ್ಕಾರ ಈಗಾಗಲೇ ಹೆಣ್ಣು ಮಕ್ಕಳಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಸುಕನ್ಯಾ ಸಮೃದ್ಧಿ ಎನ್ನುವ ಯೋಜನೆಯೂ ಒಂದಾಗಿದೆ. ಹೆಣ್ಣುಮಕ್ಕಳ ಭವಿಷ್ಯವನ್ನು ಭದ್ರಪಡಿಸಲು ಪೋಷಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಹೆಚ್ಚಾಗಿ ಈ ಯೋಜನೆ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕೇಂದ್ರಿಕರಿಸಿದೆ.

ಕೇಂದ್ರ ಸರ್ಕಾರ ಈಗಾಗಲೇ ಹೆಣ್ಣು ಮಕ್ಕಳಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಸುಕನ್ಯಾ ಸಮೃದ್ಧಿ ಎನ್ನುವ ಯೋಜನೆಯೂ ಒಂದಾಗಿದೆ. ಹೆಣ್ಣುಮಕ್ಕಳ ಭವಿಷ್ಯವನ್ನು ಭದ್ರಪಡಿಸಲು ಪೋಷಕರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದ್ದು, ಹೆಚ್ಚಾಗಿ ಈ ಯೋಜನೆ ಅಪ್ರಾಪ್ತ ಹೆಣ್ಣು ಮಕ್ಕಳನ್ನು ಕೇಂದ್ರಿಕರಿಸಿದೆ.

ಹೌದು ಕೇಂದ್ರ ಸರ್ಕಾರವು ಪಿಎಂ ಕಿಸಾನ್ ಯೋಜನೆಯಡಿ ಸಿಗುವ 6 ಸಾವಿರ ರೂಪಾಯಿ ಹಣವನ್ನು 15 ವರ್ಷ ಜಮೆ ಮಾಡಿದರೆ ಸಾಕು, 21ನೇ ವರ್ಷಕ್ಕೆ ಮಗುವಿನ ಶಿಕ್ಷಣಕ್ಕೆ ಅಥವಾ ಮದುವೆಯ ಸಂದರ್ಭದಲ್ಲಿ  2.63 ಲಕ್ಷ ರೂಪಾಯಿ ಹಣ ಪಡೆಯಬಹುದು. ಅದು ಹೇಗೆ ಅಂದುಕೊಂಡಿದ್ದೀರಾ. ಇಲ್ಲಿದೆ ಸಂಪೂರ್ಣ ಮಾಹಿತಿ.

ಸುಕನ್ಯಾ ಸಮೃದ್ಧಿ ಯೋಜನೆಯಡಿಯಲ್ಲಿ ಇಬ್ಬರು ಪುತ್ರಿಯರ ಹೆಸರಿನ ಮೇಲೆ ಖಾತೆಯನ್ನು ತೆರೆಯಬಹುದು. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಈ ಮುಂಚೆ ಇದ್ದ 1000 ರೂಪಾಯಿ ವಾರ್ಷಿಕ ಕನಿಷ್ಠ ಕಂತಿನ ಮೊತ್ತವನ್ನು ಇತ್ತೀಚೆಗೆ 250 ಕ್ಕೆ ಇಳಿಸಲಾಗಿದೆ. ಖಾತೆದಾರರು ವರ್ಷಕ್ಕೆ ಕೇವಲ 250 ರೂಪಾಯಿ ಪಾವತಿಸುವ ಮೂಲಕ ಖಾತೆಯನ್ನು ಚಾಲ್ತಿಯಲ್ಲಿಡಬಹುದು.

ಸುಕನ್ಯಾ ಸಮೃದ್ಧಿ ಯೋಜನೆಯಡಿ ಪ್ರತಿವರ್ಷ 6 ಸಾವಿರ ರೂಪಾಯಿ ಜಮೆ ಮಾಡಿದರೆ 15 ವರ್ಷಗಳವರೆಗೆ 90 ಸಾವಿರ ರೂಪಾಯಿ ಆಗುತ್ತದೆ. ನಂತರ ಐದು ಆರು ವರ್ಷಗಳ ಕಾಲ ಕಟ್ಟಬೇಕಾಗಿಲ್ಲ. ಈ ಹಣಕ್ಕೆ ಒಟ್ಟು 1,73,725 ರೂಪಾಯಿ ಬಡ್ಡಿಯಾಗುತ್ತದೆ. ಜಮೆಮಾಡಿದ 90000 ಮತ್ತು ಬಡ್ಡಿ 1,73,725 ರೂಪಾಯಿ ಸೇರಿ ಒಟ್ಟು 2,63,723 ರೂಪಾಯಿ ಸಿಗುತ್ತದೆ. ಈ ಹಣಕ್ಕೆ ಆದಾಯ ತೆರಿಗೆ ಕಾಯ್ದೆ 1961 ರ 80 ಸಿ ಸೆಕ್ಷನ್ ಅಡಿ ತೆರಿಗೆ ವಿನಾಯಿತಿ ನೀಡಲಾಗಿದೆ.

ಸುಕನ್ಯಾ ಸಮೃದ್ಧಿ ಯೋಜನೆಯಡಿ ಪಾಲಕರು ಗರಿಷ್ಠ ಎರಡು ಖಾತೆಗಳನ್ನು ತೆರೆಯಬಹುದು. ಅಂದರೆ, ಪ್ರತಿ ಒಬ್ಬ ಮಗಳಿಗೆ ಒಂದು ಖಾತೆಯಂತೆ ಗರಿಷ್ಠ ಇಬ್ಬರು ಪುತ್ರಿಯರಿಗೆ ಖಾತೆ ತೆರೆಯಬಹುದು. ಒಂದು ವೇಳೆ ಮೊದಲ ಅಥವಾ ಎರಡನೆಯ ಹೆರಿಗೆಯಿಂದ ಅವಳಿ ಹೆಣ್ಣುಮಕ್ಕಳು ಜನಿಸಿದರೆ, ಈ ಯೋಜನೆಯು ಪೋಷಕರಿಗೆ ಮೂರನೇ ಖಾತೆ ತೆರೆಯಲು ಅನುವು ಮಾಡಿಕೊಡುಲಾಗುತ್ತದೆ.

ಸುಕನ್ಯಾ ಸಮೃದ್ಧಿ ಯೋಜನೆ ಅರ್ಹತಾ ಮಾನದಂಡ

ಹೆಣ್ಣು ಮಕ್ಕಳು ಮಾತ್ರ ಸುಕನ್ಯಾ ಸಮೃದ್ಧಿ ಖಾತೆಯನ್ನು ಹೊಂದಲು ಅರ್ಹರಾಗಿದ್ದಾರೆ ಖಾತೆ ತೆರೆಯುವ ಸಮಯದಲ್ಲಿ, ಹೆಣ್ಣು ಮಗುವಿಗೆ 10 ವರ್ಷಕ್ಕಿಂತ ಕಡಿಮೆ ಇರಬೇಕು. ಖಾತೆ ತೆರೆಯುವಾಗ, ಹೆಣ್ಣು ಮಗುವಿನ ವಯಸ್ಸಿನ ಪುರಾವೆ ಕಡ್ಡಾಯವಾಗಿದೆ.

ಅಂಚೆ ಕಚೇರಿ ಶಾಖೆಗಳಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಖಾತೆಯನ್ನು ತೆರೆಯಬಹುದು. ಅಥವಾ ದೇಶದ ಪ್ರಮುಖ ಬ್ಯಾಂಕ್ ಬ್ಯಾಂಕುಗಳಲ್ಲಿಯೂ ತೆರೆಯಬಹುದು. ಖಾತೆ ಆರಂಭಿಸುವ ಅರ್ಜಿ ಫಾರಂ - ಹೆಣ್ಣು ಮಗುವಿನ ಜನನ ಪ್ರಮಾಣ ಪತ್ರ - ಗುರುತಿನ ದಾಖಲೆ, ವಿಳಾಸದ ಪುರಾವೆ, ಪಾಲಕರ ಆಧಾರ್ ಕಾರ್ಡ್ ಹೆಚ್ಚಿನ ಮಾಹಿತಿಗಾಗಿ ಅಥವಾ ಸುಕನ್ಯಾ ಸಮೃದ್ಧಿ ಯೋಜನೆಯಡಿ ಮಗಳ ಹೆಸರಿನ ಮೇಲೆ ಖಾತೆ ತೆರೆಯಲು ನಿಮ್ಮೂರಿಗೆ ಬರುವ ಪೋಸ್ಟ್ ಮ್ಯಾನ್ ಗೆ ಕರೆ ಮಾಡಿ ಖಾತೆ ತೆರೆಯಬಹುದು. ಕೇಂದ್ರ ಸರ್ಕಾರ ದೇಶದಲ್ಲಿ ಹೆಣ್ಣು ಮಕ್ಕಳ ಭವಿಷ್ಯವನ್ನು ಭದ್ರಗೊಳಿಸುವ ಉದ್ದೇಶದಿಂದ ವಿಶಿಷ್ಟ ಯೋಜನೆಗಳನ್ನು ಜಾರಿಗೆ ತಂದಿದೆ.. ಹಾಗೆಯೇ ಈ ಯೋಜನೆಯಲ್ಲು ಹಲವಾರು ಜನರು ಸದುಪಯೋಗ ಮಾಡಿಕೊಂಡಿದ್ದಾರೆ.