ಹನಿ ನೀರಾವರಿಗೆ ಶೇ. 90 ರಷ್ಟು ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನ
ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಲುವಾಗಿ ತೋಟಗಾರಿಕೆ ಇಲಾಖೆ ಹನಿ ನೀರಾವರಿ ಯೋಜನೆ ಅನುಷ್ಠಾನಗೊಳಿಸುತ್ತಿದ್ದು ಈ ಯೋಜನೆಯಡಿ ಸಹಾಯಧನ ಸೌಲಭ್ಯ ದೊರೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಸ್.ಕೇಶವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಯೋಜನೆಯಡಿ ಫಲಾನುಭವಿಗೆ ಗರಿಷ್ಠ 2 ಎಕರೆ ಪ್ರದೇಶದ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಅವಕಾಶವಿದೆ. ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90ರಷ್ಟು ಸಹಾಯಧನ ದೊರೆಯುತ್ತದೆ. ಆಸಕ್ತರು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಿ ಅರ್ಜಿ ಸಲ್ಲಿಸಲು ಕೋರಿದೆ.
ನಿಮ್ಮ ಬೆಂಬಲ ಸದಾ ಇರಲಿ
ನಮ್ಮ ಪತ್ರಿಕೆಯ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಭಾರತದ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಅಲ್ಪ ಕೊಡುಗೆಯೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
Share your comments