News

ಹನಿ ನೀರಾವರಿಗೆ ಶೇ. 90 ರಷ್ಟು ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನ

09 December, 2020 12:53 PM IST By:

ತೋಟಗಾರಿಕೆ ಬೆಳೆಗಳಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಸಲುವಾಗಿ ತೋಟಗಾರಿಕೆ ಇಲಾಖೆ ಹನಿ ನೀರಾವರಿ ಯೋಜನೆ ಅನುಷ್ಠಾನಗೊಳಿಸುತ್ತಿದ್ದು ಈ ಯೋಜನೆಯಡಿ ಸಹಾಯಧನ ಸೌಲಭ್ಯ ದೊರೆಯಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್  ತಾಲೂಕಿನ ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಸ್‌.ಕೇಶವಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯಡಿ ಫಲಾನುಭವಿಗೆ ಗರಿಷ್ಠ 2 ಎಕರೆ ಪ್ರದೇಶದ ಬೆಳೆಗಳಿಗೆ ಹನಿ ನೀರಾವರಿ ಅಳವಡಿಕೆಗೆ ಅವಕಾಶವಿದೆ. ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ 90ರಷ್ಟು ಸಹಾಯಧನ ದೊರೆಯುತ್ತದೆ. ಆಸಕ್ತರು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಿ ಅರ್ಜಿ ಸಲ್ಲಿಸಲು ಕೋರಿದೆ.