1. ಸುದ್ದಿಗಳು

ರೈತರಿಗೆ ಸಿಹಿಸುದ್ದಿ: ಮಾಸಾಂತ್ಯದೊಳಗೆ “ರೈತ ಶಕ್ತಿ ಯೋಜನೆ”ಗೆ ಚಾಲನೆ! ಏನಿದರ ಲಾಭ ಗೊತ್ತೆ?

Kalmesh T
Kalmesh T
Drive for “Farmer Energy Project” by the end of the month

ರೈತ ಶಕ್ತಿ ಯೋಜನೆಗೆ ಶೀಘ್ರದಲ್ಲೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ.

ಇದನ್ನೂ ಓದಿರಿ: ರಾಜ್ಯದ 47.86 ಲಕ್ಷ ರೈತರಿಗೆ ಒಟ್ಟು ₹956.71 ಕೋಟಿ ಜಮಾ! ನಿಮ್ಮ ಖಾತೆಗೆ ಹಣ ಇನ್ನೂ ಬಂದಿಲ್ಲವೇ?

PM Kisan 11 ನೇ ಕಂತಿನ ಹಣ ನಿಮ್ಮ ಖಾತೆಗೆ ಇನ್ನೂ ಬಂದಿಲ್ಲವೇ? ಹಾಗಿದ್ದರೆ ಈಗಲೇ ಚೆಕ್‌ ಮಾಡಿ...

ರೈತ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದಾರೆ. ಏನೆಂದರೆ ಶೀಘ್ರದಲ್ಲೇ “ರೈತ ಶಕ್ತಿ ಯೋಜನೆಗೆ” ಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಸಿಎಂ ಬೊಮ್ಮಾಯಿ ಕೃಷಿ ಇಲಾಖೆಯ ಆಯವ್ಯಯ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, “ರಾಜ್ಯದಲ್ಲಿ ಮೇ 31ರ ಮಾಹಿತಿ ಪ್ರಕಾರ 1.26 ಲಕ್ಷ ಮೆಟ್ರಿಕ್ ಟನ್ ಡಿಎಪಿ (DAP) ಲಭ್ಯವಿದ್ದು, ಒಟ್ಟಾರೆ, 7.64 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯವಿದೆ.

ರಾಜ್ಯದ ಬೇಡಿಕೆ ಪೂರೈಸಲು ಯಾವುದೇ ಕೊರತೆ ಇಲ್ಲ. ಆದರೆ, ವ್ಯವಸ್ಥಿತವಾಗಿ ಅಗತ್ಯ ಆಧರಿಸಿ, ರಸಗೊಬ್ಬರ ಸಕಾಲದಲ್ಲಿ ಪೂರೈಸಲು ಹಿರಿಯ ಅಧಿಕಾರಿಗಳೇ ಮೇಲ್ವಿಚಾರಣೆ ನಡೆಸಿ, ಯಾವುದೇ ಕೃತಕ ಅಭಾವ ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು” ಎಂದು ಸೂಚನೆ ನೀಡಿದ್ದಾರೆ.

Asani Cyclone ನ ಕಾರಣ ಕರ್ನಾಟದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಸಾಧ್ಯತೆ!

PM Sinchayi: ರೈತರಿಗೆ ಇಲ್ಲಿದೆ ಭರ್ಜರಿ ಸಬ್ಸಿಡಿ: ನೀರಾವರಿ ಯೋಜನೆಗೆ ಶೇ.90ರಷ್ಟು ಸಹಾಯಧನ

ಬಿತ್ತನೆ ಬೀಜ ರಾಜ್ಯದಲ್ಲಿ 7.81 ಲಕ್ಷ ಕ್ವಿಂಟಾಲ್‍ ನಷ್ಟು ಲಭ್ಯವಿದ್ದು, ಬೇಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿಯೇ ಲಭ್ಯವಿದೆ. ಆದರೆ ನಕಲಿ ಬೀಜಗಳ ಹಾವಳಿಯನ್ನು ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು.

ಈ ಕುರಿತು ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಬೇಕು. ನಕಲಿ ಬೀಜ ಪೂರೈಕೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ 114.54 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದರೊಂದಿಗೆ ಕಂದಾಯ ಇಲಾಖೆ ಹಾಗೂ ಜಲ ಸಂಪನ್ಮೂಲ ಇಲಾಖೆಗಳಿಂದ, ಬಂಜರು ಭೂಮಿ ಹಾಗೂ ಸವಳು-ಜವಳು ಭೂಮಿಯ ಮಾಹಿತಿ ಪಡೆದು, ಈ ವರ್ಷ ಕನಿಷ್ಠ ತಲಾ ಒಂದು ಲಕ್ಷ ಹೆಕ್ಟೇರ್‍ ನಷ್ಟು ಬಂಜರು ಭೂಮಿ ಹಾಗೂ ಸವಳು-ಜವಳು ಭೂಮಿಯನ್ನು ಕೃಷಿಯೋಗ್ಯವಾಗಿ ಪರಿವರ್ತಿಸುವಂತೆ ಸೂಚಿಸಿದರು.

ಮಣ್ಣು ಪರೀಕ್ಷೆ ಮಾಡಿ ದುಪ್ಪಟ್ಟು ಲಾಭ ಪಡೆಯಿರಿ!

ರೈತರಿಗೆ ಗುಡ್ ನ್ಯೂಸ್: ಸರ್ಕಾರಿ ಭೂಮಿಯಲ್ಲಿ ಕೃಷಿ: ಕೃಷಿ ಆಕಾಂಕ್ಷಿಗಳಿಗೆ ವರದಾನ ಈ ಯೋಜನೆ

ಕೃಷಿ ಯಾಂತ್ರೀಕರಣ ಉತ್ತೇಜನಕ್ಕಾಗಿ ಪ್ರತಿ ಎಕರೆಗೆ 250 ರೂ. ನಂತೆ ಗರಿಷ್ಠ 5 ಎಕರೆಗೆ ಡೀಸೆಲ್ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಯನ್ನು ಈ ಮಾಸಾಂತ್ಯದೊಳಗೆ ಜಾರಿಗೊಳಿಸಲು ಸೂಚಿಸಿದರು.

ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐಎಸ್ ಎನ್ ಪ್ರಸಾದ್

ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾಧ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್, ಕೃಷಿ ಇಲಾಖೆ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Published On: 03 June 2022, 11:05 AM English Summary: Drive for “Farmer Energy Project” by the end of the month

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.