1. ಸುದ್ದಿಗಳು

ರಾಜ್ಯಕ್ಕೆ ಬರದ ಗರ: ಬರಗಾಲದ ವರದಿ ಶೀಘ್ರ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ

Hitesh
Hitesh
Drought not coming to the state: Drought report to be submitted to central government soon

ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಕನ್ನಡ ಅಗ್ರಿನ್ಯೂಸ್‌ ಪರಿಚಯಿಸಿದೆ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.

1. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ!
2. ನೆಟೆ ರೋಗ ಸಂತ್ರಸ್ತರಿಗೆ ಪರಿಹಾರ ಹಣ ಬಿಡುಗಡೆ: ಚೆಲುವರಾಯಸ್ವಾಮಿ
3. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ: ಐಎಂಡಿ ವರದಿ
4. ಬರಗಾಲದ ವರದಿ ಶೀಘ್ರ ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ
5. ಇಂದಿನಿಂದ ಭಾರತದಲ್ಲಿ ಅದ್ಧೂರಿ ಜಿ-20 ಶೃಂಗಸಭೆ
6. ಧಾರವಾಡದಲ್ಲಿ ಸುಸ್ಥಿರ ಕೃಷಿಗಾಗಿ ಸಿರಿಧಾನ್ಯ ಕೃಷಿ ಮೇಳ

ಸುದ್ದಿಗಳ ವಿವರ ಈ ರೀತಿ ಇದೆ. 

1. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶದ ಸಿಐಡಿ ಪೋಲಿಸರು

ತಡರಾತ್ರಿ ಆಂಧ್ರಪ್ರದೇಶದ ಕರ್ನೂಲ್‌ ಸಮೀಪದ ನಂದ್ಯಾಲದಲ್ಲಿ ಬಂಧಿಸಿದ್ದಾರೆ. ಕೌಶಾಲ್ಯಾಭಿವೃದ್ಧಿ ಯೋಜನೆಯ ಹಗರಣದಲ್ಲಿ

ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ ರೆಡ್ಡಿ ಹಾಗೂ ಚಂದ್ರಬಾಬು ನಾಯ್ಡು

ಅವರ ನಡುವೆ ನಿರಂತರವಾಗಿ ಮುಸುಕಿನ ಗುಡ್ಡಾಟ ನಡೆದಿತ್ತು.

2. ಉತ್ತರ ಕರ್ನಾಟಕದ ಕಲಬುರಗಿ, ವಿಜಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತೊಗರಿಬೆಳೆಯಲ್ಲಿ ಕಾಣಿಸಿಕೊಂಡಿದ್ದ

ನೆಟೆ ರೋಗದಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ ಪರಿಹಾರ ಮೊತ್ತವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ.

ನೆಟೆ ರೋಗ ಸಂತ್ರಸ್ತರಿಗೆ ಬಾಕಿಯಿದ್ದ 223 ಕೋಟಿ ರೂಪಾಯಿಗಳಲ್ಲಿ ಮೊದಲ ಹಂತದಲ್ಲಿ 74 ಕೋಟಿ ರೂ

ಹಾಗೂ ಎರಡನೇ ಹಂತದಲ್ಲಿ 74 ಕೋಟಿ ಬಿಡುಗಡೆ ಮಾಡಲಾಗಿದೆ.

ಬಾಕಿ ಇರುವ 75 ಕೋಟಿಯನ್ನು ಶೀಘ್ರ ಬಿಡುಗಡೆ ಮಾಡುವುದಾಗಿ ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
------------------
3. ಇನ್ನು ಎರಡು ದಿನ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ

ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶನಿವಾರ ಹಾಗೂ ಭಾನುವಾರ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೊಡಗು ಸೇರಿದಂತೆ

ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು,

ಸಂಜೆ ಅಥವಾ ರಾತ್ರಿ ವೇಳೆ ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. 
------------------ 

4.ರಾಜ್ಯದಲ್ಲಿ ಎದುರಾಗಿರುವ ಬರಗಾಲದ ವರದಿಯನ್ನಯ ಇಷ್ಟರಲ್ಲೇ ಕೇಂದ್ರ ಸರಕಾರಕ್ಕೆ ಕಳಿಸಲಾಗುವುದು ಎಂದು ಗೃಹಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.  

ಬರಗಾಲದ ವರದಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಶೀಘ್ರವೇ ಬರಗಾಲ ಘೋಷಣೆ ಮಾಡಲಾಗುವುದು.

ಸಚಿವ ಸಂಪುಟ ಉಪಪಸಮಿತಿಗೆ ಕೆಲವು ತಾಲೂಕುಗಳು ಮಾತ್ರ ಶಿಫಾರಸು ಮಾಡಿಲಾಗಿತ್ತು.

ಬರಗಾಲದ ಕುರಿತು ಮರು ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದ್ದಾರೆ ಎಂದಿದ್ದಾರೆ.  
------------------
5. ನವದೆಹಲಿಯಲ್ಲಿ ಇಂದಿನಿಂದ ಎರಡು ದಿನಗಳ ಜಿ-20 ಶೃಂಗಸಭೆ ನಡೆಯಲಿದೆ. ಪ್ರಮುಖ ವೇದಿಕೆಯಾಗಿರುವ ಭಾರತ ಮಂಟಪದಲ್ಲಿ ಶೃಂಗಸಭೆ ನಡೆಯಲಿದೆ.

ಈ ಶೃಂಗ ಸಭೆಯಲ್ಲಿ ಹಲವಾರು ದೇಶಗಳ ನಾಯಕರು ಭಾಗವಹಿಸಲಿದ್ದಾರೆ. ಎಲ್ಲ ನಾಯಕರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾಗತಿಸಲಿದ್ದು,

ಜಿ-೨೦ ಶೃಂಗಸಭೆಯ ಮೊದಲ ಅಧಿವೇಶನ ಪ್ರಾರಂಭವಾಗಲಿದೆ.
------------------
6. ಸುಸ್ಥಿರ ಕೃಷಿಗಾಗಿ ಸಿರಿಧಾನ್ಯಗಳು ಎನ್ನುವ ಧ್ಯೇಯದೊಂದಿಗೆ ಇಂದಿನಿಂದ ಮೂರು ದಿನಗಳ ಕಾಲ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ

ಕೃಷಿ ಮೇಳ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೇಳಕ್ಕೆ ಚಾಲನೆ ನೀಡಲಿದ್ದಾರೆ.  

---------------------- 

Photo Courtesy: Pexels

Published On: 09 September 2023, 05:10 PM English Summary: Drought not coming to the state: Drought report to be submitted to central government soon

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.