ರಾಜ್ಯದಲ್ಲಿ ಕಳೆದ 15 ದಿನಗಳಿಂದಲೂ ಮಳೆ ಆಗಿತ್ತು. ಇದರಿಂದ ಬೇಸಿಗೆ ಕಾಲದಲ್ಲೂ ಮಳೆಗಾಲದ ಅನುಭವ ಉಂಟಾಗಿತ್ತು. ಇದೀಗ ಬಿಸಿಲಿನ ಝಳ ಹೆಚ್ಚಳವಾಗಿದೆ.
ಕಳೆದ ಎರಡು ತಿಂಗಳಿಂದ ರಾಜ್ಯದಲ್ಲಿ ಭಾರೀ ಮತ್ತು ಸಾಧಾರಣ ಮಳೆ ಆಗುತ್ತಿದ್ದು, ಬೇಸಿಗೆಯ ಬಿಸಿಲಿನ ಝಳ ಕಡಿಮೆ ಆಗಿತ್ತು.
ವಾಸ್ತವದಲ್ಲಿ ಮಳೆಗಾಲವೇ ಪ್ರಾರಂಭವಾಗಿದೆ ಎನ್ನುವಂತಹ ವಾತಾವರಣ ರಾಜ್ಯದ ಹಲವು ಭಾಗದಲ್ಲಿ ನಿರ್ಮಾಣವಾಗಿತ್ತು.
ಆದರೆ, ಸೋಮವಾರದಿಂದ ರಾಜ್ಯದಲ್ಲಿ ಮಳೆ ಪ್ರಮಾಣದಲ್ಲಿ ಇಳಿಕೆ ಕಂಡಿದ್ದು, ಬಿಸಿಲಿನ ಝಳ ತೀವ್ರವಾಗಿ ಹೆಚ್ಚಳವಾಗಿದೆ.
ಇನ್ನು ರಾಜ್ಯದಾದ್ಯಂತ ಒಣಹವೆ ಮುಂದುವರಿದಿದ್ದು, ಕೆಲವು ಪ್ರದೇಶಗಳಲ್ಲಿ ಮಾತ್ರ ಅಲ್ಪ ಪ್ರಮಾಣದಲ್ಲಿ ಮಳೆ ಆಗಿರುವುದು ವರದಿ ಆಗಿದೆ.
ರಾಜ್ಯದ ಅತೀ ಗರಿಷ್ಠ ಉಷ್ಣಾಂಶವು 40.2 ಡಿಗ್ರಿ ಸೆಲ್ಸಿಯಸ್ ಕಲಬುರಗಿಯಲ್ಲಿ ದಾಖಲಾಗಿರುವುದು ವರದಿ ಆಗಿದೆ.
ಮುಂದಿನ 24 ಗಂಟೆಗಳು: ಇನ್ನು ಮುಂದಿನ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು,
ಚಿಕ್ಕಮಗಳೂರು ಮತ್ತು ಮೈಸೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಅಲ್ಲದೇ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಮುಂದಿನ 48 ಗಂಟೆ: ಮುಂದಿನ 48 ಗಂಟೆಯ ಅವಧಿಯಲ್ಲಿ ದಕ್ಷಿಣ ಒಳನಾಡಿನ ಚಮರಾಜನಗರ,
ಕೊಡಗು, ಚಿಕ್ಕಮಗಳೂರು, ಮಂಡ್ಯ ಮತ್ತು ಮೈಸೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.
ಉಳಿದಂತೆ ಭಾರೀ ಮಳೆಯ ಮುನ್ನೆಚ್ಚರಿಕೆಯನ್ನು ನೀಡಿಲ್ಲ.
ಗುಡುಗು ಮುನ್ನೆಚ್ಚರಿಕೆಯನ್ನು ನೀಡಿಲ್ಲ.
ಇನ್ನು ಮುಂದಿನ 24 ಗಂಟೆಯ ಅವಧಿಯಲ್ಲಿ ರಾಜ್ಯದ ಹವಾಮಾನದಲ್ಲಿ ಯಾವುದೇ ಗಮನಾರ್ಹ ಬದಲಾವಣೆಗಳು ಕಂಡುಬಂದಿಲ್ಲ.
ಮುಂದಿನ 24 ಗಂಟೆ ಬೆಂಗಳೂರಿನಲ್ಲಿ ಹವಾಮಾನ: ಮುಂದಿನ 24 ಗಂಟೆಯ ಅವಧಿಯಲ್ಲಿ ಬೆಂಗಳೂರು ನಗರ ಪ್ರದೇಶದಲ್ಲಿ ಸಾಮಾನ್ಯವಾಗಿ
ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರುವ ಬಹಳಷ್ಟು ಸಾಧ್ಯತೆಗಳು ಇವೆ.
Pic Credits: pexels
Share your comments