News

ರಾಜ್ಯದಲ್ಲಿ ಆನೆ- ಮಾನವ ಸಂಘರ್ಷ: ಪರಿಹಾರ ಮೊತ್ತ ಎರಡು ಪಟ್ಟು ಹೆಚ್ಚಳ!

12 December, 2022 3:55 PM IST By: Hitesh
Elephant-human conflict in the state: The compensation amount has doubled!

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಮಾನವ ಹಾಗೂ ಆನೆ ದಾಳಿಗಳು ಹೆಚ್ಚಾಗುತ್ತಿದ್ದು, ಇದನ್ನು ತಪ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಈಗಾಗಲೇ ಎಲಿಫ್ಯಾಟ್‌ ಟಾಸ್ಕ್‌ ಪೋರ್ಸ್‌ ರಚನೆ ಮಾಡಿದೆ.

ಆಧಾರ್‌ ಕಾರ್ಡ್‌ನೊಂದಿಗೆ ಪಾನ್‌ ಕಾರ್ಡ್‌ ಜೋಡಣೆ ಕಡ್ಡಾಯ: ಮತ್ತೊಮ್ಮೆ ಗಡುವು!

ಇದೀಗ ಆನೆ- ಮಾನವ ಸಂಘರ್ಷದಿಂದ ಸಂಭವಿಸುವ ಹಾನಿಗೆ ಸಂಬಂಧಿಸಿದಂತೆ ನೀಡುವ ಪರಿಹಾರ ಮೊತ್ತವನ್ನು ಎರಡುಪಟ್ಟು ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಆನೆ-ಮಾನವ ಸಂಘರ್ಷಕ್ಕೆ ಸಂಬಂಧಿಸಿದಂತೆ ಹಾಸನ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.  

ಮಾಂಡೌಸ್‌ ಚಂಡಮಾರುತ ಪ್ರಭಾವ: ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!

Elephant-human conflict in the state: The compensation amount has doubled!

ಸರ್ಕಾರದ ಈ ತೀರ್ಮಾನದಿಂದ ರಾಜ್ಯದಲ್ಲಿ ಆನೆ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ ನೀಡಲಾಗುತ್ತಿದ್ದ ಪರಿಹಾರ ಮೊತ್ತವು 7.5 ಲಕ್ಷ ರೂಪಾಯಿಗಳಿಂದ 15 ಲಕ್ಷ ರೂಪಾಯಿಗಳಿಗೆ ಹೆಚ್ಚಳವಾಗಲಿದೆ.

ಇನ್ನು ಶಾಶ್ವತ ಅಂಗವಿಕಲತೆಗೆ ನೀಡುವ ಪರಿಹಾರವನ್ನೂ ಇದೇ ಸಂದರ್ಭದಲ್ಲಿ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ನೀಡುತ್ತಿದ್ದ ಪರಿಹಾರವನ್ನು 5 ಲಕ್ಷ ರೂಪಾಯಿಗಳಿಂದ ಇದೀಗ 10 ಲಕ್ಷ ರೂಪಾಯಿಗಳಿಗೆ ಹೆಚ್ಚಳ ಮಾಡಲಾಗಿದೆ. ಭಾಗಶಃ ಅಂಗವಿಕಲತೆಗೆ ನೀಡುವ ಪರಿಹಾರವನ್ನು 2.5 ಲಕ್ಷ ರೂಪಾಯಿಗಳಿಂದ 5 ಲಕ್ಷ ರೂ. ಗೆ, ಗಾಯಗೊಂಡವರಿಗೆ ನೀಡುವ ಪರಿಹಾರ ಮೊತ್ತ 30 ಸಾವಿರ ರೂ. ಗಳಿಂದ 60 ಸಾವಿರ ರೂ. ಗಳಿಗೆ, ಆಸ್ತಿ ಹಾನಿಗೆ ಪರಿಹಾರ ಮೊತ್ತ 10 ಸಾವಿರ ರೂ. ಗಳಿಂದ 20 ಸಾವಿರ ರೂ. ಗಳಿಗೆ ಹಾಗೂ ಜೀವ ಹಾನಿ ಅಥವಾ ಶಾಶ್ವತ ಅಂಗವಿಕಲತೆಯ ಪ್ರಕರಣಗಳಿಗೆ ನೀಡುವ ಕುಟುಂಬ ಮಾಸಾಶನದ ಮೊತ್ತ ಮಾಸಿಕ ರೂ. 2,000 ದಿಂದ 4,000 ರೂ. ಗಳಿಗೆ ಹೆಚ್ಚಿಸಲು ತೀರ್ಮಾನಿಸಲಾಯಿತು. ಇದಲ್ಲದೆ ಬೆಳೆಹಾನಿಗೆ ನೀಡುತ್ತಿರುವ ಪರಿಹಾರವನ್ನೂ ದ್ವಿಗುಣಗೊಳಿಸಲು ನಿರ್ಧರಿಸಲಾಯಿತು.

ಹಾಸನ, ಮಡಿಕೇರಿ, ಮೈಸೂರು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆನೆ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಈಗಾಗಲೇ ಕಾರ್ಯಾರಂಭ ಮಾಡಿವೆ.

ಈ ಕಾರ್ಯಪಡೆಗಳಿಗೆ ಅಗತ್ಯ ಮಾನವ ಸಂಪನ್ಮೂಲ, ಉಪಕರಣಗಳು, ನಿಯಂತ್ರಣ ಕೊಠಡಿ ಹಾಗೂ ವಾಹನ ಸೌಲಭ್ಯಗಳನ್ನು ಒದಗಿಸಲಾಗಿದ್ದು, ಹಾಸನ ಜಿಲ್ಲೆಯಲ್ಲಿ ನಿಯಂತ್ರಣ ಕೊಠಡಿ ಸಂಖ್ಯೆ 9480817460 ಅಥವಾ ಸಹಾಯವಾಣಿ ಸಂಖ್ಯೆ 1926 ನ್ನು ಸಂಪರ್ಕಿಸಬಹುದು.

ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ನೀಡಿದ ವರದಿಯನ್ವಯ ಹಾಸನ ಪ್ರದೇಶದಲ್ಲಿ 65 ಆನೆಗಳಿದ್ದು, ಆಲೂರು-ಸಕಲೇಶಪುರ-ಬೇಲೂರು ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿವೆ. ಇವುಗಳನ್ನು ಹಂತ ಹಂತವಾಗಿ ಸ್ಥಳಾಂತರಿಸಲಾಗುವುದು. ಇನ್ನಷ್ಟು ಆನೆಗಳು ಬರದಂತೆ ತಡೆಗಟ್ಟಲು ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.  

ಮಾಂಡೌಸ್‌ ಚಂಡಮಾರುತ ಅಪಾರ ಬೆಳೆಹಾನಿ: ಸಂಕಷ್ಟದಲ್ಲಿ ರೈತರು!

ಸಭೆಯಲ್ಲಿ ನಿರ್ಧರಿಸಿರುವ ಪ್ರಮುಖ ಅಂಶಗಳು

* ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ) ಹಾಗೂ ಮುಖ್ಯ ವನ್ಯಜೀವಿ ಪಾಲಕರು ಸ್ಥಳೀಯ ಅಧಿಕಾರಿಗಳು, ಪರಿಸರ ವಿಜ್ಞಾನ ಕೇಂದ್ರ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳ ನೆರವಿನಿಂದ ಕಾರ್ಯಾಚರಣೆಯ ವಿಸ್ತೃತ ಯೋಜನೆಯನ್ನು ತಯಾರಿಸಲಿದ್ದು, ಸಕಲೇಶಪುರ-ಬೇಲೂರು ಪ್ರದೇಶದಲ್ಲಿ ಅತಿ ಹೆಚ್ಚು ತೊಂದರೆಗೆ ಕಾರಣವಾಗಿರುವ 8 ಆನೆಗಳ ಹಿಂಡನ್ನು ಆದ್ಯತೆಯ ಮೇರೆಗೆ ಸೆರೆ * ಸಮಸ್ಯೆ ಸೃಷ್ಟಿಸುವ ಗಂಡು ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ

*  ಚಲನವಲನಗಳ ಮೇಲೆ ನಿಗಾ ಇಡುವ ಮೂಲಕ ಮಾನವರಿಗೆ ಅವುಗಳಿಂದ ಹಾನಿಯಾಗುವುದನ್ನು ತಡೆ
* 23 ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಿ ಚಲನ ವಲನಗಳ ಮೇಲೆ  

* ಆನೆಗಳನ್ನು ಸೆರೆಹಿಡಿಯುವ ಕಾರ್ಯಾಚರಣೆ ಹಾಗೂ ಆನೆಗಳನ್ನು ಸ್ಥಳಾಂತರಿಸುವ ಕಾರ್ಯಾಚರಣೆಗೆ ನೆರವಾಗುವಂತೆ ಹಾಸನ ಅರಣ್ಯ ವಿಭಾಗದ ಕಟ್ಟೆಪುರ ಹಾಗೂ ಮೂಡಿಗೆರೆಯಲ್ಲಿ ಆನೆ ಶಿಬಿರ ಸ್ಥಾಪನೆ

* ಹಾಸನ ಜಿಲ್ಲೆ ಅರಣ್ಯ ಪ್ರದೇಶದಲ್ಲಿ 9.7 ಕಿ. ಮೀ. ನಷ್ಟು ರೈಲ್ವೆ ಹಳಿಯ ತಡೆಗೋಡೆ ನಿರ್ಮಿಸಲಾಗಿದ್ದು, ಈ ವರ್ಷ 11.5 ಕಿ.ಮೀ. ತಡೆಗೋಡೆ ನಿರ್ಮಾಣ ಪ್ರಗತಿಯಲ್ಲಿದೆ.

* ಹೇಮಾವತಿ ಹಿನ್ನೀರಿನ ಉದ್ದಕ್ಕೂ 25 ಕಿ.ಮೀ. ನಷ್ಟು ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಪ್ರಾರಂಭ ಇದರಿಂದ ಕೊಡಗು ಕಡೆಯಿಂದ ಆನೆಗಳ ಸಂಚಾರಕ್ಕೆ ತಡೆ.

*  ಶಾಶ್ವತ ಕಾವಲುಗೋಪುರಗಳು, ಮೋಟರೈಸ್ಡ್ ಬೋಟ್‌ಗಳು, ನೈಟ್ ವಿಷನ್ ಬೈನಾಕ್ಯುಲರ್ ಗಳು, ಲಾಂಗ್ ರೇಂಜ್ ಸರ್ಚ್ ಲೈಟ್ ಗಳನ್ನು ಅಳವಡಿಕೆ.

* ಮಾನವ- ಆನೆ ಸಂಘರ್ಷ ನಿವಾರಣಾ ಸಮಿತಿಯನ್ನು ಹಾಸನ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚನೆ  

* ಹಾಸನ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳು ಈ ಸಮಿತಿ ಸದಸ್ಯರಾಗಿದ್ದು, ಹಾಸನದ ಡಿಸಿಎಫ್ ಇದರ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ರಸ್ತೆ ಬದಿ ಪೊದೆಗಳನ್ನು ತೆಗೆಯುವುದು, ಕಪ್ಪು ಸ್ಥಳಗಳಲ್ಲಿ ಬೀದಿ ದೀಪ ಅಳವಡಿಕೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದು

ಸೇರಿದಂತೆ ಪ್ರಮುಖ ವಿಷಯಗಳು ಸಮಿತಿಯ ಜವಾಬ್ದಾರಿಯಾಗಿರುತ್ತದೆ.

ಕೊಡಗು ಫೌಂಡೇಷನ್ ಮಾದರಿ

ಇನ್ನು ಕೊಡಗು ಫೌಂಡೇಷನ್ ಮಾದರಿಯಲ್ಲಿ ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಮಾನವ-ವನ್ಯಪ್ರಾಣಿ ಸಂಘರ್ಷ ತಪ್ಪಿಸುವ ಉದ್ದೇಶದಿಂದ ಒಂದು ನಿರ್ದಿಷ್ಟ ಫೌಂಡೇಷನ್ ಸ್ಥಾಪಿಸಲು ಉದ್ದೇಶಿಸಲಾಗಿದೆ.

* ರೈತರ ಭೂಮಿಯಲ್ಲಿ ಸೌರವಿದ್ಯುತ್ ಬೇಲಿ ನಿರ್ಮಿಸಲು ಶೇ. 50:50ರ ಅನುಪಾತದ ಯೋಜನೆಯ ಷರತ್ತನ್ನು ಸಡಿಲಿಸಿ, ವೈಯಕ್ತಿಕ ಬೇಲಿ ನಿರ್ಮಾಣಕ್ಕೆ ಸರ್ಕಾರದ ಪಾಲನ್ನು ಶೇ. 60ಕ್ಕೆ ಹೆಚ್ಚಿಸಲು ಹಾಗೂ ಅರಣ್ಯದ 5 ಕಿ.ಮೀ. ಸುತ್ತಳತೆಯ ಷರತ್ತನ್ನು ಸಡಿಲಿಸಲು ತೀರ್ಮಾನಿಸಲಾಯಿತು.

* ಅಲ್ಲದೇ ಅರಣ್ಯದ ಅಂಚಿನಲ್ಲಿ ಸಾಮೂಹಿಕ ಬೇಲಿ ನಿರ್ಮಿಸಲು ಅನುಮೋದನೆ ನೀಡಲಾಯಿತು.  

ಸಭೆಯಲ್ಲಿ ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ,ಅರಣ್ಯ , ಪರಿಸರ ಹಾಗೂ ವನ್ಯಜೀವಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಇದ್ದರು.