ರಾಜ್ಯದಲ್ಲಿ ಕಾಡಾನೆಗಳ ಹಾವಳಿ ವಿಪರೀತವಾಗಿದೆ. ಅದರಲ್ಲಿಯೂ ಮಲೆನಾಡಿನ ಭಾಗದಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ವಿಪರೀತವಾಗಿದೆ.
Heavy Rain| ರಾಜ್ಯದ ವಿವಿಧೆಡೆ ಧಾರಾಕಾರ ಮಳೆ!
ಅಲ್ಲದೇ ಹಾಸನ ಸೇರಿದಂತೆ ಮಲೆನಾಡಿನ ವಿವಿಧ ಜಿಲ್ಲೆಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗುತ್ತಿದ್ದು, ಈ ಕುರಿತು ಚರ್ಚಿಸುವ ಉದ್ದೇಶದಿಂದ ಚುನಾಯಿತ ಪ್ರತಿನಿಧಿಗಳು ಮತ್ತು ಹಿರಿಯ ಅರಣ್ಯಾಧಿಕಾರಿಗಳ ನಿಯೋಗದೊಂದಿಗೆ ಶೀಘ್ರವೇ ಕೇಂದ್ರ ಸಚಿವರನ್ನು ಭೇಟಿ ಮಾಡಲಾಗುವುದು ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.
ರಾಜ್ಯದ ಏಳು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್!
ಸಕಲೇಶಪುರದಲ್ಲಿ ಮಾತನಾಡಿದ ಅವರು, ಮಲೆನಾಡು ಭಾಗದಲ್ಲಿ ವಾಸಿಸುತ್ತಿರುವವರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಕೇಂದ್ರಕ್ಕೆ ಅರಿವಿದೆ. ನಿಯೋಗವು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಗ್ರಾಮಸ್ಥರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಸ್ತೃತವಾಗಿ ಮಾಹಿತಿ ನೀಡಲಾಗುವುದು ಎಂದು ಹೇಳಿದರು.
ಮಾಂಡೌಸ್ ಚಂಡಮಾರುತ: ರಾಜ್ಯದ ವಿವಿಧ ಜಿಲ್ಲೆಯಲ್ಲಿ ಧಾರಾಕಾರ ಮಳೆ
ಆನೆಗಳನ್ನು ಆವಾಸಸ್ಥಾನಗಳಿಂದ ಹಿಡಿದು ಸ್ಥಳಾಂತರಿಸಲು ಕೇಂದ್ರದಿಂದ ಅನುಮತಿ ಸಿಗುವುದಿಲ್ಲ. ಆದರೆ ಅಪಾಯವನ್ನು ಎದುರಿಸಲು ಪರ್ಯಾಯ ಕ್ರಮಗಳನ್ನು ಸೂಚಿಸಬಹುದು ಎಂದು ಅವರು ತಿಳಿಸಿದರು.
ಇತ್ತೀಚೆಗೆ ಆಲೂರು ಮತ್ತು ಸಕಲೇಶಪುರ ತಾಲ್ಲೂಕಿನ ವಿವಿಧೆಡೆ ಆನೆ ಪೀಡಿತ ಪ್ರದೇಶಗಳಲ್ಲಿನ ಜನ ಮತ್ತು ವ್ಯವಸ್ಥೆಯ ಕುರಿತು ಸಮಗ್ರ ಅಧ್ಯಯನ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಿರಿಯ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ಕಳುಹಿಸಿದ್ದರು.
ತಂಡವು ಸಲ್ಲಿಸಿದ ವರದಿಯ ಆಧಾರದ ಮೇಲೆ ಸಿಎಂ ಆನೆಗಳ ಹಾವಳಿಯನ್ನು ಎದುರಿಸಲು ಕಾರ್ಯಪಡೆ ರಚಿಸಿದ್ದು, ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಪಡೆ ರೂಪಿಸಲಾಗಿದೆ.