1. ಸುದ್ದಿಗಳು

ರಾಜ್ಯದಲ್ಲಿ ಸಾವಯವ ಕೃಷಿ ವಿಶ್ವ ವಿದ್ಯಾಲಯ ಸ್ಥಾಪನೆಗೆ ಚಿಂತನೆ: ಕೃಷಿ ಸಚಿವ ಬಿ.ಸಿ. ಪಾಟೀಲ್

B. C patil

ಗುಜರಾತ್, ಛತ್ತಿಸಗಢ್ ರಾಜ್ಯಗಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಚಿಂತನೆ ನಡೆದಿದೆ ಎಂದು  ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಅವರು ವಿಕಾಸಸೌಧದಲ್ಲಿ ಸಾವಯವ ಕೃಷಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ದೇಶದಲ್ಲಿ ಈಗಾಗಲೇ ಗುಜರಾತ್‌ ಮತ್ತು ಛತ್ತಿಸ್‌ಗಢ ಸಾವಯವ ಕೃಷಿ ವಿಶ್ವವಿದ್ಯಾಲಯವಿದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಸಹ  ಸಾವಯವ ಕೃಷಿ ವಿಶ್ವವಿದ್ಯಾಲಯದ ಮಾದರಿಯನ್ನೇ ಅನುಸರಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಆರೋಗ್ಯದ ದೃಷ್ಟಿಯಿಂದ ಹೆಚ್ಚು ದಿನ ಸಾವಯವ ಕೃಷಿ ಉತ್ಪನ್ನಗಳಿಗೆ ಮೊರೆ ಹೋಗುತ್ತಿದ್ದಾರೆ. ಆದ್ದರಿಂದ ಸಾವಯವ ಕೃಷಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುವುದು. ಶಿವಮೊಗ್ಗದಲ್ಲಿ ಸಾವಯವ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಬಗ್ಗೆ ಸಾವಯವ ಸಮಿತಿ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.

ಇತ್ತೀಚೆಗೆ ರಾಸಾಯನಿಕ ಗೊಬ್ಬರ ಬಳಸಿ ಆರೋಗ್ಯ ಕೆಡಿಸಿಕೊಳ್ಳಲಾಗುತ್ತಿದೆ. ಹೆಚ್ಚು ಇಳುವರಿ ಪಡೆಯುವ ಧಾವಂತದಲ್ಲಿ ರಾಸಾಯನಿಕ ಬಳಕೆ ಹೆಚ್ಚಾಗುತ್ತಿದೆ. ಹಾಗಾಗಿ ಆರೋಗ್ಯದ ಸಮಸ್ಯೆ ಕಾಡುತ್ತದೆ. ಕೃಷಿಗೆ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕ ಮತ್ತು ರಸಗೊಬ್ಬರಗಳನ್ನು ಬಳಸುವುದರಿಂದ ಆರೋಗ್ಯಕರ ಉತ್ಪನ್ನಗಳನ್ನು ಪಡೆಯಲು ಸಾಧ್ಯವಿಲ್ಲ. ರಾಸಾಯನಿಕ ಬಳಕೆ ಹೆಚ್ಚಿದಷ್ಟು ಭೂಮಿಯ ಪೋಷಕಾಂಶ ಕುಗ್ಗುವುದರ ಜೊತೆಗೆ ರೈತನಿಗೂ ಮತ್ತು ಅದನ್ನು ಸೇವನೆ ಮಾಡುವ ಗ್ರಾಹಕರ ಮೇಲೂ ದುಷ್ಪರಿಣಾಮ ಬೀರುತ್ತದೆ ಎಂದರು.

ಭೂಮಿಗೆ ವಿಷ ಹಾಕಬಾರದು ಎಂಬ ಸಂಕಲ್ಪ ತೊಟ್ಟು ಸಾವಯವದತ್ತ ರೈತರು ಮುಖ ಮಾಡಬೇಕು. ಒಂದು ಜಿಲ್ಲೆ ಒಂದು ಉತ್ಪನ್ನದಡಿ ಸಿರಿಧಾನ್ಯ ಮತ್ತು ಸಾವಯವ ಪದಾರ್ಥಗಳ ಸಂಸ್ಕರಣೆ ಮಾರುಕಟ್ಟೆ ವಿಸ್ತರಣೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ತಿಳಿಸಿದರು.

Published On: 12 February 2021, 10:13 AM English Summary: establishment of organic agricultural university

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.