News

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಮೇಲೆ ಗುಂಡಿನ ದಾಳಿ!

04 November, 2022 9:55 AM IST By: Hitesh
Ex-Prime Minister of Pakistan Imran Khan shot!

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ದಕ್ಷಿಣ ಕೊರಿಯಾದತ್ತ 25 ಕ್ಷಿಪಣಿ ಉಡಾಯಿಸಿದ ಉತ್ತರ ಕೊರಿಯಾ!

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ತೆಹ್ರೀಕ್ ಇ ಪಾಕಿಸ್ತಾನ ಪಕ್ಷ  ಪ್ರಚಾರದಲ್ಲಿ ಪಾಲ್ಗೊಂಡಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಉದ್ದೇಶಪೂರ್ವಕವಾಗಿ ಇಮ್ರಾನ್‌ಖಾನ್‌ ಅವರನ್ನೇ ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ.

ರೈತರಿಗೆ ಸಿಹಿಸುದ್ದಿ: ಹಿಂಗಾರು; ಭತ್ತ ಖರೀದಿಯಲ್ಲಿ ಶೇ 12% ಹೆಚ್ಚಳ

ದಾಳಿಯಲ್ಲಿ ಸ್ವತಃ ಇಮ್ರಾನ್ ಖಾನ್ ಕೂಡ ಗಾಯಗೊಂಡಿದ್ದು, ಇನ್ನೂ ನಾಲ್ಕು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಪಾಕಿಸ್ತಾನದ ವಜೀರಾಬಾದ್‌ನ ಅಲ್ಲಾ ಹೋ ಚೌಕ್ ಸಮೀಪ ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಅವ್ರ ಕಂಟೈನರ್ ಮೇಲೆ  ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ.

ಈ ಗುಂಡಿನ ದಾಳಿಯಲ್ಲಿ ಇಮ್ರಾನ್ ಖಾನ್ ಬಲಗಾಲಿಗೆ ಗುಂಡು ತಗುಲಿದ್ದು, ಅವರನ್ನು ಕೂಡ ತೀವ್ರ ಭದ್ರತೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಸಹ ಬಂಧಿಸಿದ್ದು, ಅಜ್ಞಾತ ಸ್ಥಳದಲ್ಲಿ ದುಷ್ಕರ್ಮಿಯನ್ನು ಭದ್ರತಾ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.    

ಗುಂಡಿನ ದಾಳಿ ನಡೆಸುವುದಕ್ಕೆ ನಿಖರ ಕಾರಣ ಎನು ಎನ್ನುವುದು ಇಲ್ಲಿಯವರೆಗೆ ಪತ್ತೆ ಆಗಿಲ್ಲ.

ಶೆಹಬಾಜ್ ಷರೀಫ್ ಸರ್ಕಾರದ ವಿರುದ್ಧದ ಲಾಂಗ್ ಮಾರ್ಚ್ ಭಾಗವಾಗಿ ಪ್ರಧಾನಿ ಇಮ್ರಾನ್ ಖಾನ್ ಅವರು ಪ್ರತಿಭಟನಾ ರ್‍ಯಾಲಿ ನಡೆಸುವಾಗ ಘಟನೆ ಸಂಭವಿಸಿದೆ.  

ಇದನ್ನೂ ಓದಿರಿ: ದೇಶದ ವಿವಿಧೆಡೆ ಗೋಧಿ ಬೆಲೆ ಹೆಚ್ಚಳ: ಪ್ರತಿ ಕ್ವಿಂಟಾಲ್‌ಗೆ 900 ರೂ. ಏರಿಕೆ !   

ಇದರಲ್ಲಿ ಅವರು ಹೊಸ ಸರ್ಕಾರ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ.

ಜನರನ್ನು ಉದ್ದೇಶಿಸಿ ಮಾತನಾಡುವ ವೇಳೆ ಟ್ರಕ್ ಮೇಲೆ ನಿಂತಿದ್ದಾಗ ಶೂಟರ್ ಗುಂಡು ಹಾರಿಸಿದ್ದಾನೆ.

ಆರೋಪಿಯನ್ನು ಭದ್ರತಾ ಪಡೆಯ ಸಿಬ್ಬಂದಿ ಕೂಡಲೇ ಬಂಧಿಸಿದ್ದಾರೆ.

ಬಂಧಿತ ಆರೋಪಿಯು ನಾನು ಇಮ್ರಾನ್ ಖಾನ್‌ರನ್ನು ಕೊಲ್ಲುವ ಉದ್ದೇಶದಿಂದಲೇ ಬಂದಿದ್ದೆ ಎಂದು ತಪ್ಪೊಪ್ಪಿಗೆ ನೀಡಿದ್ದಾನೆ.

ಪಾಕಿಸ್ತಾನದ ಸ್ಥಳೀಯ ಮಾಧ್ಯಮಗಳ ಪ್ರಕಾರ, ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಮ್ರಾನ್ ಖಾನ್ ಅವರ ಪ್ರತಿಭಟನಾ

ರ್‍ಯಾಲಿಯಲ್ಲಿ ಅಪರಿಚಿತ ವ್ಯಕ್ತಿಯು ಮಾಜಿ ಪ್ರಧಾನಿಯನ್ನು ಕರೆದುಕೊಂಡು ಹೋಗುತ್ತಿದ್ದ ಟ್ರಕ್ ಮೇಲೆ ಗುಂಡು ಹಾರಿಸಿದ್ದಾನೆ.

ವಾರಪೂರ್ತಿ 12 ತಾಸು ದುಡಿಯಿರಿ ಎಂದ ಎಲಾನ್‌ ಮಸ್ಕ್‌!  

Ex-Prime Minister of Pakistan Imran Khan shot!

ಈ ವೇಳೆ ಅವರಿಗೆ ಬುಲೆಟ್ ತಾಗಿದ್ದು, ಖಾನ್ ಅವರ ಬಲಗಾಲಿಗೆ ಪೆಟ್ಟಾಗಿದೆ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿದೆ.

ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ನಾಯಕ ಫವಾದ್ ಚೌಧರಿ ಪ್ರಕಾರ ಇತರ ಮೂವರು ನಾಯಕರು ಗಾಯಗೊಂಡಿದ್ದಾರೆ.

 ಈ ಘಟನೆ ಪಂಜಾಬ್‌ನ ವಜೀರಾಬಾದ್‌ನ ಅಲ್ಲಾವಾಲಾ ಚೌಕ್ ಬಳಿ ನಡೆದಿದೆ.

ಲಾಹೋರ್‌ನಿಂದ ಅಕ್ಟೋಬರ್ 28 ರಂದು ಲಾಂಗ್ ಮಾರ್ಚ್ ಪ್ರಾರಂಭವಾಗಿದ್ದು, ನವೆಂಬರ್ 4 ರಂದು ರಾಜಧಾನಿ ಇಸ್ಲಾಮಾಬಾದ್ ಅನ್ನು ತಲುಪುವ ನಿರೀಕ್ಷೆ ಇತ್ತು.

ರ್‍ಯಾಲಿ ಒಂದು ವಾರದ ಅವಧಿಯಲ್ಲಿ ಸುಮಾರು 380 ಕಿ.ಮೀ ತಲುಪುತ್ತಿದೆ.

ಈ ಪ್ರತಿಭಟನಾ ರ್‍ಯಾಲಿಯನ್ನು ಪಾಕಿಸ್ತಾನದ ದೊಡ್ಡ ಸ್ವಾತಂತ್ರ್ಯ ಚಳುವಳಿ ಎಂದು ಇಮ್ರಾನ್ ಖಾನ್ ಹೇಳಿದ್ದು, ತಕ್ಷಣವೇ ಚುನಾವಣೆಗಳನ್ನು ಘೋಷಿಸಬೇಕು

ಎಂದು ಸರ್ಕಾರದ ಮೇಲೆ ಒತ್ತಡ ಹಾಕಲು ಮೆರವಣಿಗೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

ವಿದೇಶಿ ನಾಯಕರಿಂದ ಪಡೆದ ಉಡುಗೊರೆಗಳ ಮಾರಾಟದಿಂದ ಬಂದ ಹಣವನ್ನು ಬಚ್ಚಿಟ್ಟ ಆರೋಪದ ಮೇಲೆ ಪಾಕಿಸ್ತಾನದ ಚುನಾವಣಾ ಆಯೋಗವು ಖಾನ್ ಅವರನ್ನು ಐದು ವರ್ಷಗಳ ಕಾಲ ಸಾರ್ವಜನಿಕ ಹುದ್ದೆಯಿಂದ ಅನರ್ಹಗೊಳಿಸಿದೆ.

ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷವು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಇಮ್ರಾನ್‌ ಖಾನ್‌ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದೆ.

ಆದರೆ ಈ ದಾಳಿಯು ಪಾಕಿಸ್ತಾನದಲ್ಲಿ ಈಗಾಗಲೇ ಇರುವ ಘರ್ಷಣೆಯನ್ನು ಅಪಾಯಕಾರಿಯಾಗಿ ಹೆಚ್ಚಿಸುವ ಆತಂಕ ಪ್ರಾರಂಭವಾಗಿದೆ.

ಹೊಸ ಸರ್ಕಾರದ ವಿರುದ್ಧ ಇಮ್ರಾನ್ ಖಾನ್ ಬೆಂಬಲಿಗರು ಪ್ರತಿಭಟನೆ ನಡೆಸಲು ಪ್ರಾರಂಭಿಸಿದ್ದಾರೆ. ಈ ಘಟನೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ.    

ಪಂಜಾಬ್‌ನಲ್ಲಿ ಕಳೆ ಸುಡುತ್ತಿರುವ ರೈತರು; ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಳ!