ಮಹಾಮಾರಿ ಕೊರೋನಾದ ಕಾರಣದಿಂದಾಗಿ ಶಾಲೆಗಳು ಬಂದಾಗಿ ಸುಮಾರು ಎಂಟರಿಂದ ಹತ್ತು ತಿಂಗಳ ಬಳಿಕ ಈಗಾಗಲೇ ಪ್ರಾರಂಭಗೊಂಡಿದ್ದು, ಪರೀಕ್ಷೆಗಳು ಯಾವಾಗ ಎಂಬುದಕ್ಕೆ ಸರ್ಕಾರ ಈಗ ತೆರೆಎಳೆದಿದೆ. ಮಾರ್ಚ್ ಎಪ್ರಿಲ್ ನಲ್ಲಿ ಪದವಿ ಸ್ನಾತಕೋತ್ತರ ಪದವಿ ಹಾಗೂ ಇಂಜಿನಿಯರ್ ಕೋರ್ಸುಗಳಿಗೆ ಪರೀಕ್ಷೆಗಳನ್ನು ನಡೆಸಲು ಸರ್ಕಾರ ತೀರ್ಮಾನಿಸಿದೆ.
ಮಾಹಿತಿ ನೀಡಿದಂತಹ ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವರಾದಂತಹ ಅಶ್ವಥನಾರಾಯಣ ರವರು ಮಾರ್ಚ್ ತಿಂಗಳಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನಡೆಸಲಾಗುವುದು ಹಾಗೂ ಎಪ್ರಿಲ್ ತಿಂಗಳಲ್ಲಿ ಒಂದು ಹಾಗೂ ಎರಡನೇ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲಾಗುವುದು ಎಂದು ಮಾಹಿತಿಯನ್ನು ನೀಡಿದರು.
ಈಗಾಗಲೇ ಪದವಿ ಕಾಲೇಜುಗಳು ಆರಂಭವಾಗಿವೆ, ಹಾಗಾಗಿ ಪರೀಕ್ಷೆಗಳನ್ನು ಆಫ್ ಲೈನ್ ನಲ್ಲಿ ನಡೆಸಲಾಗುವುದು ಎಂದು ಸಚಿವರು ದೃಢಪಡಿಸಿದರು. ಈಗಾಗಲೇ ಪರೀಕ್ಷೆಯನ್ನು ಮಾರ್ಚ್ ಹಾಗೂ ಏಪ್ರಿಲ್ ನಲ್ಲಿ ನಡೆಸಲು ನಿಗದಿಪಡಿಸಿದ್ದು ವೇಳಾಪಟ್ಟಿಯನ್ನು ಇನ್ನೇನು ಕೆಲವೇ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದರು. ಪರಿಸ್ಥಿತಿಗನುಗುಣವಾಗಿ ಮುಂದಿನ ಶೈಕ್ಷಣಿಕ ವರ್ಷದ ಆರಂಭವನ್ನು ಕೂಡ ಮಾಡಲಾಗುವುದು ಎಂದು ಹೇಳಿದರು.