1. ಸುದ್ದಿಗಳು

ರಾಯಚೂರಿನಲ್ಲಿ ಕೃಷಿ ಇಲಾಖೆಯಿಂದ ಸಿರಿಧಾನ್ಯ ವಸ್ತು ಪ್ರದರ್ಶನ

Hitesh
Hitesh
Exhibition of Cereals by Agriculture Department at Raichur

ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಕೃಷಿಮೇಳದಲ್ಲಿ ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹಿಸುವ ಮತ್ತು  ಜಲಾನಯನ ಅಭಿವೃದ್ಧಿ ಮೂಲಕ ಬರಗಾಲ ತಡೆಯುವಿಕೆ ಸೇರಿದಂತೆ ಹಲವು ವಿಷಯಗಳ ಕುರಿತು ರೈತರಿಗೆ ಪರಿಚಯಿಸಲಾಯಿತು.  

18 ವರ್ಷದವರೂ ಇನ್ಮುಂದೆ ಮದ್ಯ ಖರೀದಿಸಬಹುದು: ಹೊಸ ಮದ್ಯದಂಗಡಿಗೂ ಅಸ್ತು!

ವಿಶ್ವಸಂಸ್ಥೆಯು 2023ನೇ ವರ್ಷವನ್ನು ಅಂತರರಾಷ್ಟ್ರೀಯ ಸಿರಿಧಾನ್ಯ ವರ್ಷವೆಂದು ಘೋಷಿಸಿದೆ. ಸಿರಿಧಾನ್ಯಗಳನ್ನು ಬೆಳೆಯುವುದು, ಬಳಸುವುದಕ್ಕೆ ಜನರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಮಾದರಿ ನಿರ್ಮಿಸಲಾಗಿದೆ ಎಂದು ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಆರ್‌.ದೇವಿಕಾ ತಿಳಿಸಿದರು.

ರಾಯಚೂರು ಜಿಲ್ಲೆಯಲ್ಲಿ ಈ ವರ್ಷ 500 ಹೆಕ್ಟೇರ್‌ನಲ್ಲಿ ಸಿರಿಧಾನ್ಯಗಳನ್ನು ರೈತರು ಬೆಳೆದಿದ್ದಾರೆ. ಮುಖ್ಯವಾಗಿ ಲಿಂಗಸುಗೂರು ಮತ್ತು ಸಿರವಾರ ತಾಲ್ಲೂಕುಗಳಲ್ಲಿ ಸಿರಿಧಾನ್ಯ ಬೆಳೆಯುತ್ತಿದ್ದಾರೆ. ನವಣೆ ಹೆಚ್ಚಿನ ಪ್ರಮಾಣದಲ್ಲಿದೆ. ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್‌ 6 ಸಾವಿರ ರೂಪಾಯಿ ಪ್ರೋತ್ಸಾಹಧನವನ್ನು ಸರ್ಕಾರ ನೀಡುತ್ತಿದೆ.

ಮಳೆನೀರನ್ನು ಸಂರಕ್ಷಣೆ ಮಾಡಿಕೊಂಡು ಸುಸ್ಥಿರ ಕೃಷಿ ಮಾಡುವ ವಿಧಾನವನ್ನು ಕಲಾಕೃತಿ ರೂಪದಲ್ಲಿ ನಿರ್ಮಿಸಲಾಗಿದೆ. ಗುಡ್ಡಗಾಡುಗಳಿಂದ ಮಳೆ ನೀರು ಕೆಳಭಾಗಕ್ಕೆ ಹರಿಯುವಾಗ ಮಣ್ಣು ಸಂರಕ್ಷಣೆ ಹೇಗೆ ಮಾಡಿಕೊಳ್ಳುವುದು, ಮಳೆ ನೀರು ಸಂಗ್ರಹಿಸುವ ವಿಧಾನಗಳನ್ನು ಈ ಮಾದರಿ ಮೂಲಕ ಮನವರಿಕೆ ಆಗುವಂತೆ ವ್ಯವಸ್ಥೆಯನ್ನು ಮಾಡಲಾಗಿದೆ.  

Weather Updates| ಉತ್ತರ ಭಾರತದಲ್ಲಿ ತೀವ್ರ ಚಳಿ: ಕಾನ್ಪುರದಲ್ಲಿ 98 ಜನ ಸಾವು !

ಚೆಕ್‌ಡ್ಯಾಂ ನಿರ್ಮಾಣ ಮಾಡುವುದು, ನಾಲಾ ಬದುಗಳನ್ನು ನಿರ್ಮಿಸುವುದು, ಕೃಷಿ ಹೊಂಡ ಮಾಡುವುದರಿಂದ ನೀರನ್ನು ಸಂರಕ್ಷಿಸಬಹುದು ಎಂಬ ಪ್ರಾತ್ಯಕ್ಷಿಕೆಗಳನ್ನು  ತೋರಿಸಲಾಗಿದೆ. ಮಳೆಯಾಶ್ರಿತ ಪ್ರದೇಶದ ರೈತರ ಆದಾಯವನ್ನು ಹೆಚ್ಚಿಸಲು, ಜಲಾನಯನ ಪ್ರದೇಶಗಳಲ್ಲಿ ಸ್ವಾಭಾವಿಕ ಸಂಪನ್ಮೂಲಗಳನ್ನು ನಿರ್ವಹಿಸುವ ವಿಧಾನಗಳನ್ನು ಮೇಳದಲ್ಲಿ ವಿವರಿಸಿರುವುದು ವಿಶೇಷವಾಗಿದೆ.  

ನೈಸರ್ಗಿಕ ವಿಧಾನಗಳನ್ನು ಅನುಸರಿಸಿ ಭೂಮಿಯ ಫಲವತ್ತತೆ ಕಾಪಾಡಿಕೊಳ್ಳುವುದು ಮತ್ತು ಈ ಮೂಲಕ ಕೃಷಿ ಇಳುವರಿಯನ್ನು ಹೆಚ್ಚಿಸಿಕೊಳ್ಳುವುದು. ಬರಡು ಭೂಮಿಯನ್ನು ಕೃಷಿ ಯೋಗ್ಯ ಭೂಮಿಯಾಗಿ ಪರಿವರ್ತಿಸುವುದು. ಒಟ್ಟಾರೆ ಮಳೆನೀರನ್ನು ಸಮರ್ಪಕವಾಗಿ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳುವುದು ಮತ್ತು ಭೂಮಿಯನ್ನು ದೀರ್ಘಕಾಲ ಕಾಪಾಡಿಕೊಳ್ಳುವ ಅಂಶಗಳನ್ನು ಈ ಜಲಾನಯನ ಮಾದರಿಯಲ್ಲಿ ತೋರಿಸಲಾಗಿದೆ.

pm kisan update| ಪಿ.ಎಂ ಕಿಸಾನ್‌ 13ನೇ ಕಂತಿಗೆ ಮೊದಲು ಈ ಅಪ್ಡೇಟ್‌ ಮಾಡಿ 

ಕೊಬ್ಬರಿ ಬೆಳೆಗಾರರಿಗೆ ಸ್ಪಂದಿಸಲು ನಾಫೆಡ್‌ ಕೇಂದ್ರ ಸ್ಥಾಪನೆ

ರಾಜ್ಯದಲ್ಲಿ ಕೊಬ್ಬರಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಶೀಘ್ರ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ (ಎನ್‌ಎಎಫ್‌ಇಡಿ–ನಾಫೆಡ್‌) ಕೇಂದ್ರ ಆರಂಭಿಸಲಿದೆ ಎಂದು ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಬೆಂಬಲ ಬೆಲೆಯ ಜೊತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹಧನ ಯೋಜನೆ ಅಡಿ ನಾಫೆಡ್‌, ಬೆಳೆಗಾರರಿಂದ ಕೊಬ್ಬರಿ ಖರೀದಿಸಲಿದೆ.  ಕೆಲವು ವರ್ಷಗಳಿಂದ ಕ್ವಿಂಟಲ್‌ಗೆ   15 ಸಾವಿರ ರೂಪಾಯಿ ಅಸುಪಾಸಿನಲ್ಲಿದ್ದ ಕೊಬ್ಬರಿ ದರ ಮೂರು ತಿಂಗಳಿನಿಂದ ಕುಸಿದಿದೆ. ಇದರಿಂದ ಬೆಳೆಗಾರರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಎರಡು ವರ್ಷದಿಂದ ಕೊಬ್ಬರಿ ಸಕಾಲದಲ್ಲಿ  ಬಾರದೇ ಹಸಿ ಅಂಶ ಉಳಿದುಕೊಂಡು ಬೆಳೆಗಾರರಿಗೆ ನಷ್ಟವಾಗುತ್ತಿದೆ. ಹೀಗಾಗಿ, ಆರ್ಥಿಕ ತಜ್ಞರೊಂದಿಗೆ ಅಧಿಕಾರಿಗಳು ಸಮಾಲೋಚನೆ ನಡೆಸಿದ ನಂತರ ಉಂಡೆ ಕೊಬ್ಬರಿ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ 11,750 ಸಾವಿರಕ್ಕೆ ನಿಗದಿಪಡಿಸಿದ್ದಾರೆ. ಇದರ ಜೊತೆಗೆ ರಾಜ್ಯ ಸರ್ಕಾರದ ಪ್ರೋತ್ಸಾಹಧನ ನೀಡಲಾಗುವುದು ಎಂದು ತಿಳಿಸಿದರು.   

ಚಿನ್ನದ ದರದಲ್ಲಿ ಮತ್ತೆ ಏರಿಕೆ, ಎಷ್ಟಿದೆ ಇಂದಿನ ಚಿನ್ನದ ದರ ?  

NAFED

ನಾಯಿಗೆ ಹುಲಿ ಬಣ್ಣ; ದಂಗಾದ ಜನ  

ಕೋತಿಗಳ ಉಪಟಳದಿಂದ ಬೆಳೆಗಳನ್ನು ರಕ್ಷಿಸಲು ಚಾಮರಾಜನಗರದ ಅಜ್ಜೀಪುರದ ರೈತ ಮಂಜು ಎಂಬವರು ಸಾಕು ನಾಯಿಗೆ ಹುಲಿಯ ಬಣ್ಣ ಬಳಿದು ಕೋತಿಗಳನ್ನು ಹೆದರಿಸಿ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಲಿಯ ವೇಷ ಧರಿಸಿರುವ ನಾಯಿಯ ಚಿತ್ರ ಹಾಗೂ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ತಾಲ್ಲೂಕಿನ ಅಜ್ಜೀಪುರದ ಹೊರವಲಯದಲ್ಲಿರುವ ತೋಟಗಳಿಗೆ ಕೋತಿಗಳ ಉಪಟಳ ವಿಪರೀತವಾಗಿದ್ದು, ಅವುಗಳನ್ನು ಕಾಯುವುದೇ ದೊಡ್ಡ ಸವಾಲಿನ ಕೆಲಸವಾಗಿತ್ತು. ಕೋತಿಗಳನ್ನು ಓಡಿಸಲು ಮಂಜು ಕಂಡುಕೊಂಡ ಉಪಾಯ ಫಲ ನೀಡುತ್ತಿದೆ.

ಜಮೀನಿನಲ್ಲಿ ಬೆಳೆದಿದ್ದ ಬೆಳೆ, ತೆಂಗಿನ ಕಾಯಿಗಳನ್ನು ಹಾಳು ಮಾಡುತ್ತಿದ್ದ ಕೋತಿಗಳು ಈಗ ನಾಯಿ ನೋಡಿ ಹೆದರಿ ದೂರ ಸರಿದಿವೆ. ಬೆಳೆ ರೈತನ ಕೈ ಸೇರುತ್ತಿದೆ.

ಕಾಡಿನ ಸಮೀಪದ ಜಮೀನುಗಳಲ್ಲಿ ನಾಯಿ ಓಡಾಡುತ್ತಿದ್ದು, ಹುಲಿ ವೇಷದ ನಾಯಿ ಕಂಡು ಬೆಚ್ಚಿಬಿದಿದ್ದಾರೆ. ನಂತರ ನಾಯಿಗೆ ಬಣ್ಣ ಬಳಿದಿರುವುದು ತಿಳಿದ ಮೇಲೆ ನಿಟ್ಟುಸಿರು ಬಿಟ್ಟಿದ್ದಾರೆ.  

Aadhaar Card| ಆಧಾರ್ ಕಾರ್ಡ್ ನವೀಕರಣ: UIDAI ಟೋಲ್ ಫ್ರೀ ಸಂಖ್ಯೆ ಪರಿಚಯ  

Published On: 12 January 2023, 11:37 AM English Summary: Exhibition of Cereals by Agriculture Department at Raichur

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.