ರಾಜ್ಯದಲ್ಲಿ ಲಿಥಿಯಂ-ಐಯಾನ್ ಸೆಲ್ ಉತ್ಪಾದನೆಗಾಗಿ 6,000 ಸಾವಿರ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು Exide Industries ಮುಂದೆ ಬಂದಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ತಿಳಿಸಿದ್ದಾರೆ.
ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ Exide Industries ನ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
Exide Industries ಬಂಡವಾಳ ಹೂಡಿಕೆ ಮಾಡುತ್ತಿರುವ ಪರಿಣಾಮ ರಾಜ್ಯದಲ್ಲಿ ಒಟ್ಟು 1200 -1400 ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಇದು ಸುಧಾರಿತ ಕೋಶ ರಸಾಯನಶಾಸ್ತ್ರ ತಂತ್ರಜ್ಞಾನಕ್ಕಾಗಿ ಭಾರತದ ಅತಿದೊಡ್ಡ ಗಿಗಾ ಕಾರ್ಖಾನೆಗಳಲ್ಲಿ ಒಂದಾಗಿದೆ ಎಂದು ಚಕ್ರವರ್ತಿ ಹೇಳಿದರು.
ಇದನ್ನು ಓದಿರಿ: ಗುಡ್ ನ್ಯೂಸ್: ಹೈನುಗಾರರಿಗೆ ಕ್ರೆಡಿಟ್ ಕಾರ್ಡ್! ದೇಶದಲ್ಲೆ ಮೊದಲು
Navy Recruitment : 12ನೇ ತರಗತಿ ಪಾಸ್ ಆದವರಿಗೆ ನೇಮಕಾತಿ..69,000 ವರೆಗೆ ಸಂಬಳ
ಎಕ್ಸೈಡ್ ಇಂಡಸ್ಟ್ರೀಸ್ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯವಿಮಾನ ನಿಲ್ದಾಣದ ಬಳಿಯ ಹರಳೂರು ಕೈಗಾರಿಕಾ ಪ್ರದೇಶದಲ್ಲಿ 80 ಎಕರೆ ಭೂಮಿಯನ್ನು ಕೋರಿದೆ.
ಕಂಪನಿಗೆ ಎಲ್ಲಾ ರೀತಿಯ ಸರಕಾರ ಸಹಕಾರ ನೀಡುವುದಾಗಿ ಹೇಳಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ನಿರಾಣಿ ಅವರು ಈ ಯೋಜನೆಯು ಶೀಘ್ರ ಕಾರ್ಯಗತಗೊಳ್ಳಲಿ ಎಂದು ಹಾರೈಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರವು ಹೂಡಿಕೆಗಳನ್ನು ಆಕರ್ಷಿಸುವಲ್ಲಿ ಸಕ್ರಿಯವಾಗಿದ್ದು, ಕರ್ನಾಟಕದಲ್ಲಿ ಇರುವಂತಹ ಹೂಡಿಕೆದಾರ ಸ್ನೇಹಿ ವಾತಾವರಣ ದೇಶದ ಯಾವುದೇ ರಾಜ್ಯದಲ್ಲೂ ಇಲ್ಲ ಎಂದು ಮನವರಿಕೆ ಮಾಡಿಕೊಟ್ಟರು.
ಕಳೆದ ಮೂರು ತ್ರೈಮಾಸಿಕಗಳಲ್ಲಿ ವಿದೇಶಿ ನೇರ ಹೂಡಿಕೆ (ಎಫ್‌ಡಿಐ )ಆಕರ್ಷಿಸುವಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಸಚಿವರು ಸುಬೀರ್ ಚಕ್ರವರ್ತಿ ಅವರಿಗೆ ತಿಳಿಸಿದರು.
ಎಚ್ಚರಿಕೆ: ಕರ್ನಾಟಕದಲ್ಲಿ ಭಾರೀ ಮಳೆ! ಭಾರತೀಯ ಹವಾಮಾನ ಇಲಾಖೆಯಿಂದ ಮುನ್ಸೂಚನೆ
48 ಯೋಜನೆಗಳಿಗೆ ಅನುಮೋದನೆ, 6,393 ಜನರಿಗೆ ಉದ್ಯೋಗಾವಕಾಶ
ಕೈಗಾರಿಕಾ ಬೆಳವಣಿಗೆಗೆ ರಾಜ್ಯದಲ್ಲಿ ಇನ್ನಷ್ಟು ಉತ್ತೇಜನ ನೀಡುವ ಮೂಲಕ ಕರ್ನಾಟಕ ಸರ್ಕಾರವು ಶನಿವಾರ 2,062.21 ಕೋಟಿ ಮೌಲ್ಯದ 48 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಿದೆ. ಇದರಿಂದಾಗಿ ರಾಜ್ಯದಲ್ಲಿ 6,393 ಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಸೃಷ್ಟಿಸಲಿದೆ ಎಂದು ಸಚಿವ ಮುರುಗೇಶ್ ಆರ್ ನಿರಾಣಿ (Murugesh Nirani) ಹೇಳಿದ್ದಾರೆ.
15 ಕೋಟಿಗಿಂತ ಹೆಚ್ಚು ಮತ್ತು 50 ಕೋಟಿಗಿಂತ ಕಡಿಮೆ ಹೂಡಿಕೆಯ 40 ಹೊಸ ಯೋಜನೆಗಳನ್ನು ಅನುಮೋದಿಸಲಾಯಿತು.
724.87 ಕೋಟಿ ಮೌಲ್ಯದ ಈ ಯೋಜನೆಗಳು ರಾಜ್ಯದಲ್ಲಿ 3212 ಜನರಿಗೆ ಉದ್ಯೋಗಗಳನ್ನು ನೀಡಲಿದೆ.ವ 61.67 ಕೋಟಿ ಹೂಡಿಕೆಯ ಮತ್ತೊಂದು ಯೋಜನೆಗೆ ಅನುಮೋದನೆ ನೀಡಲಾಗಿದೆ. ಒಟ್ಟು 2,062.21 ಕೋಟಿ ರೂ.ಗಳ ಹೂಡಿಕೆಯೊಂದಿಗೆ 6,393 ಜನರಿಗೆ ಉದ್ಯೋಗಾವಕಾಶವಿರುವ ಒಟ್ಟು 48 ಯೋಜನೆಗಳಿಗೆ ಅನುಮತಿ ನೀಡಲಾಗಿದೆ ಎಂದರು.
ಈ ಸ್ಮಾರ್ಟ್‌ಫೋನ್‌ಗಳಲ್ಲಿ ಇನ್ಮುಂದೆ Whatsapp ಕಾರ್ಯನಿರ್ವ ಹಿಸಲ್ಲ..! ಕಾರಣವೇನು.
ಅನುಮೋದಿಸಲಾದ ಹೊಸ ಯೋಜನೆಗಳು
*ರಾಕ್‍ಕೊಲಿನ್ ಇಂಡಿಯಾ ಎಂಟರ್‍ಪ್ರೈಸರ್ ಲಿ.(ರಾಯ್ತಾನ್ ಗ್ರೂಪ್) ₹253.75 ಕೋಟಿ, ಉದ್ಯೋಗ 1306 ವ್ಯಕ್ತಿಗಳಿಗೆ.
* ನಿತಿನ್ ಸಾಯಿ ಅಗ್ರೋಟೆಕ್ ಪ್ರೈವೇಟ್ ಲಿಮಿಟೆಡ್‍ನಿಂದ 231.82 ಕೋಟಿ ಯೋಜನೆಯು 965 ವ್ಯಕ್ತಿಗಳಿಗೆ ಉದ್ಯೋಗಾವಕಾಶವನ್ನು ಹೊಂದಿದೆ.
*165 ಉದ್ಯೋಗಗಳೊಂದಿಗೆ ಬ್ರೈಟ್ É್ಲಕ್ಸಿ ಇಂಟರ್‍ನ್ಯಾಶನಲ್ ಪ್ರೈವೇಟ್ ಲಿಮಿಟೆಡ್‍ನಿಂದ ₹.89.10 ಕೋಟಿ ಹೂಡಿಕೆ.
*85 ಜನರಿಗೆ ಉದ್ಯೋಗ ಸೃಷ್ಟಿಯೊಂದಿಗೆ ಒ/ ಕುಕ್ಸನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‍ನಿಂದ ₹75 ಕೋಟಿ ಯೋಜನೆ.
*ಅಡೋಕ್ ಇನ್‍ಗ್ರಾಮ್ ಫಾರ್ಮ ಲಿಮಿಟೆಡ್‍ನಿಂದ ₹74.52 ಕೋಟಿ ಯೋಜನೆಯು 115 ಜನರಿಗೆ ಉದ್ಯೋಗ ಸೃಷ್ಟಿ
*84 ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿರುವ ಸ್ಟರ್ಲಿಂಗ್ ಪ್ರೈವೇಟ್ ಲಿ.,ನಿಂದ ರೂ.61.86 ಕೋಟಿ ಹೂಡಿಕೆ.
ಇನ್ಮುಂದೆ Aadhaar-Pan Link ಫ್ರೀ ಇಲ್ಲ..ಸ್ವಲ್ಪ ಯಾಮಾರಿದ್ರೆ 1 ಸಾವಿರ Fine..!
Navy Recruitment : 12ನೇ ತರಗತಿ ಪಾಸ್ ಆದವರಿಗೆ ನೇಮಕಾತಿ..69,000 ವರೆಗೆ ಸಂಬಳ