ಕಲಬುರಗಿ ನಗರ ಹಾಗೂ ಜಿಲ್ಲೆಯಾದ್ಯಂತ ಕೋವಿಡ್-೧೯ ಪ್ರಕರಣಗಳು ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಈ ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಅನುಕೂಲವಾಗುವಂತೆ ಕಲಬುರಗಿ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ತಾತ್ಕಾಲಿಕವಾಗಿ ಆರು ತಿಂಗಳ ಅವಧಿಗೆ ಕೆಳಕಂಡ ತಜ್ಞ ಹಾಗೂ ಕರ್ತವ್ಯ ನಿರಿತ ವೈದ್ಯರ ಸೇವೆಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿಯ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನರಲ್ ಫಿಜಿಶಿಯನ್ಸ್ ((General Physicians) ೦೩ ಹುದ್ದೆಗಳಿಗೆ ಎಂ.ಬಿ.ಬಿ.ಎಸ್; ಎಂ.ಡಿ. (Gen Medicine)) ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ 8೦,೦೦೦ ರೂ. ವೇತನ ನೀಡಲಾಗುತ್ತದೆ. ಅರಿವಳಿಕೆ ತಜ್ಞರು (Anesthetists)) ೦೩ ಹುದ್ದೆಗಳಿಗೆ ಎಂ.ಬಿ.ಬಿ.ಎಸ್; ಎಂ.ಡಿ., (Anesthesia) ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ 8೦,೦೦೦ ರೂ. ವೇತನ ನೀಡಲಾಗುತ್ತದೆ ಹಾಗೂ ಎಂ.ಬಿ.ಬಿ.ಎಸ್. ವೈದ್ಯರು (MBBS Doctors) ೦3 ಹುದ್ದೆಗಳಿಗೆ ಎಂ.ಬಿ.ಬಿ.ಎಸ್. ವಿದ್ಯಾರ್ಹತೆ ಹೊಂದಿರಬೇಕು. ಮಾಸಿಕ 6೦,೦೦೦ ರೂ.ಗಳ ವೇತನ ನೀಡಲಾಗುತ್ತದೆ. ಈ ನೇಮಕ ಮಾಡಲಾದ ಹುದ್ದೆಗಳನ್ನು ಜಿಮ್ಸ್ ಸಂಸ್ಥೆಯ ಕೋವಿಡ್ ಆಸ್ಪತ್ರೆಗೆ ಬಳಸಲು ನಿರ್ಧರಿಸಲಾಗಿದೆ.
ತಜ್ಞ ಹಾಗೂ ಕರ್ತವ್ಯ ನಿರಿತ ವೈದ್ಯ ಅಭ್ಯರ್ಥಿಗಳು ತಮ್ಮ ಭರ್ತಿ ಮಾಡಿದ ಅರ್ಜಿಯೊಂದಿಗೆ ಶೈಕ್ಷಣಿಕ ದಾಖಲೆಗಳನ್ನು ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ directorgimsgulbarga@gmail.com ಇ-ಮೇಲ್ ವಿಳಾಸಕ್ಕೆ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ ೨೦೨೧ರ ಮೇ ೧ರ ಸಂಜೆ ೫ ಗಂಟೆಯೊಳಗಾಗಿ ಸಲ್ಲಿಸಬೇಕು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಎಲ್ಲಾ ಹುದ್ದೆಗಳು ತಾತ್ಕಾಲಿಕವಾಗಿದ್ದು, ಆರು ತಿಂಗಳ ಅವಧಿಗೆ ಮಾತ್ರ ನೇಮಕ ಮಾಡಿಕೊಳ್ಳಲಾಗುತ್ತದೆ.
ವಿದ್ಯಾರ್ಹತೆ, ಅರ್ಹತೆ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ 9535394783, 9448586357 ಹಾಗೂ ಕಲಬುರಗಿ ಜಿಮ್ಸ್ನ https://www.gims-gulbarga.comವೆಬ್‌ಸೈಟ್‌ನ್ನು ಸಂಪರ್ಕಿಸಲು ಕೋರಲಾಗಿದೆ.