News

ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

12 March, 2023 3:31 PM IST By: Maltesh
Extension of application period for the post of National Youth Worker

ಧಾರವಾಡ : ಭಾರತ ಸರಕಾರ ನೆಹರು ಯುವ ಕೇಂದ್ರದಿಂದ ರಾಷ್ಟ್ರೀಯ ಯುವ ಕಾರ್ಯಕರ್ತರ ಹುದ್ದೆಗೆ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಧಾರವಾಡ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ 2 ಹುದ್ದೆಯಂತೆ ತಾತ್ಕಾಲಿಕವಾಗಿ ಒಂದು ವರ್ಷ ಅಥವಾ 2 ವರ್ಷದ ಅವಧಿಗೆ ನೇಮಕ ಮಾಡಲು ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 24 ರ ವರೆಗೆ ವಿಸ್ತರಿಸಲಾಗಿದೆ.

ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ www.nyks.nic.in onlineapplication proforma ಆನ್‍ಲೈನ್‍ನಲ್ಲಿ ಭರ್ತಿ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿಗಳು ಪೋ.ನಂ. 08382-2971379, ಮೊ: 9848666536 ಸಂಪರ್ಕಿಸಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

8ನೇ ತರಗತಿಗೆ ಸೇರಲು ಅರ್ಜಿ ಆಹ್ವಾನ.
2023-24ನೇ ಸಾಲಿನ ಪ.ಜಾತಿ/ಪ.ವರ್ಗದವರ ಹಾಗೂ ಅನೈರ್ಮಲ್ಯಕರ ವೃತ್ತಿಯಲ್ಲಿ ತೊಡಗಿರುವ ಪೋಷಕರ , ಪ್ರತಿಭಾವಂತ ಗಂಡು ಮಕ್ಕಳಿಗೆ ಇಲಾಖಾ ವತಿಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡಿ ವಿದ್ಯಾ ಶಾಲೆಯಲ್ಲಿ 8ನೇ ತರಗತಿಗೆ ಸೇರಲು ಅರ್ಜಿ ಆಹ್ವಾನ.

ಹಾವೇರಿ ಜಿಲ್ಲೆಯ ರೈತರ ಕನಸು ನನಸಾಗಿದೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

2023-24ನೇ ಸಾಲಿನ ಪ.ಜಾತಿ/ಪ.ವರ್ಗದವರ ಹಾಗೂ ಅನೈರ್ಮಲ್ಯಕರ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಗೆ ಇಲಾಖಾ ವತಿಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ನೀಡಿ, ವಿದ್ಯಾ ಶಾಲೆಯಲ್ಲಿ 8ನೇ ತರಗತಿಗೆ ಸೇರಿಸುವ ಸಲುವಾಗಿ ಎಲ್ಲಾ ವಿದ್ಯಾರ್ಥಿಗಳಿಗೆ ಶ್ರೀ ರಾಮಕೃಷ್ಣ ವಿದ್ಯಾ ಶಾಲಾ ಯಾದವಗಿರಿ, ಮೈಸೂರು ಇಲ್ಲಿನ 8ನೇ ತರಗತಿಯ ಪ್ರತಿಭಾವಂತ ಗಂಡು ಮಕ್ಕಳಿಗೆ ಪ್ರವೇಶ ಪಡೆಯಲು, ಅರ್ಜಿಯನ್ನು ಅಹ್ವಾನಿಸಲಾಗಿದೆ.

ಸದರಿ ಪ್ರವೇಶ ಪರೀಕ್ಷೆಯು ಏಪ್ರೀಲ್ 20 ರಂದು ನಡೆಯಲಿದೆ. ಆದ್ದರಿಂದ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಕಾರ್ಯಾಲಯದಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿ ಅರ್ಜಿಗಳನ್ನು ಏಪ್ರೀಲ್ 10 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೆಶಕರು ಹಾಗೂ ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದೆಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಳ್ಳಿಯ ಎಲ್ಲ ಮನೆಗಳು ಆರ್.ಸಿ.ಸಿ ಆಗಬೇಕು- ಸಿಎಂ ಬೊಮ್ಮಾಯಿ