News

ಜುಲೈ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ- ಆರೇಂಜ್ ಅಲರ್ಟ್

14 July, 2020 1:29 PM IST By:

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 14ರಿಂದ 17ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತುಮಕೂರು, ಶಿವಮೊಗ್ಗ, ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಜು.14ರಂದು ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಈ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.ಕರಾವಳಿ ಭಾಗದ ಜಿಲ್ಲೆಗಳಲ್ಲಿ ಬುಧವಾರದಿಂದ ಮಳೆ ತೀವ್ರತೆ ಹೆಚ್ಚಾಗಲಿರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ಮಳೆಯಾಗುವ ಸಾಧ್ಯತೆಯಿದೆ.