1. ಸುದ್ದಿಗಳು

Fact Check: ರದ್ದಾಗುತ್ತಾ ಮಹಿಳೆಯರ ಫ್ರೀ ಬಸ್‌ ಯೋಜನೆ ?

Maltesh
Maltesh
Fact Check: Canceling women's free bus scheme?

1.. ಮುಂದಿನ ಶೈಕ್ಷಣಿಕ ವರ್ಷದಿಂದ NEP ರದ್ದು : ಮುಂದಿನ ಶೈಕ್ಷಣಿಕ ಸಾಲಿನಿಂದ ನೂತನ ಶಿಕ್ಷಣ ನೀತಿಯನ್ನು  (NEP) ರದ್ದುಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಮೊನ್ನೆ KPCC ಕಚೇರಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ ಸಮಿತಿಯ ಸರ್ವ ಸದಸ್ಯರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,  ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಈ ನೀತಿಯನ್ನು ಬರುವ ಶೈಕ್ಷಣಿಕ ವರ್ಷದಿಂದ ನಿಲ್ಲಿಸಲಾಗುವುದು ಎಂದಿದ್ದಾರೆ.  

ಇದಕ್ಕೆ ಬೇಕಾದ ಅಗತ್ಯ ಪೂರ್ವ ತಯಾರಿಗಳನ್ನು ಮಾಡಿಕೊಂಡು NEP ರದ್ದುಗೊಳಿಸಬೇಕಿದೆ. ಇನ್ನು ಈ ವರ್ಷ ಹೊಸ ಸರ್ಕಾರ ರಚನೆ ಆಗುವ ವೇಳೆಗೆ  ಶೈಕ್ಷಣಿಕ ವರ್ಷ ಆರಂಭವಾಗಿತ್ತು. ಈ  ನಡುವೆ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಬಾರದು ಎನ್ನುವ  ನಿಟ್ಟಿನಲ್ಲಿ ಈ ವರ್ಷ ಹಾಗೆಯೇ ಮುಂದುವರೆಸಿದ್ದು, ಮುಂದಿನ ವರ್ಷ ರದ್ದುಗೊಳಿಸಲಾಗುವುದು ಎಂದರು.

*-*-*-*-*-*

2.. ಶಕ್ತಿ ಯೋಜನೆ: ವದಂತಿಗಳಿಗೆ ತೆರೆ ಎಳೆದ KSRTC : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ  ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿರುವ ’ಶಕ್ತಿಯೋಜನೆ’ ಎಂದಿನಂತೆ ಮುಂದುವರೆಯಲಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ-ಕೆಎಸ್‌ಆರ್‌ಟಿಸಿ ಸ್ಪಷ್ಟಪಡಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲೇ ಸ್ಥಗಿತಗೊಳ್ಳಲಿದೆ ಎಂಬ ಸುದ್ದಿ ಸತ್ಯಕ್ಕೆ ದೂರವಾದ ಹಾಗೂ ದುರುದ್ದೇಶದಿಂದ ಕೂಡಿದೆ ಎಂದು ನಿಗಮ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

*-*-*-*-*-*

3.. ಜಿಲ್ಲಾ ವಲಯ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2023-24ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಅರ್ಜಿ ಆಹ್ವಾನ ಮಾಡಿದೆ. ಇದರಲ್ಲಿ ಬಂಡಾವಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ, ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಮತ್ತು ಬಡ್ಡಿ ಸಹಾಯಧನ ಸೌಲಭ್ಯ ನೀಡಲು ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಿದೆ. ಆಸಕ್ತರು ಇಲಾಖೆಯ ಪೊರ್ಟಲ್ ಮೂಲಕ ಸೆಪ್ಟೆಂಬರ್‌ 15ರ ಒಳಗಾಗಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

*-*-*-*-*-*

4.. ಸ್ವಯಂ ಉದ್ಯೋಗ ಅರ್ಜಿ ಆಹ್ವಾನ

2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ -ಯಡಿಯಲ್ಲಿ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಕ್ರೀಡಾಪಟುಗಳಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಸ್ಥಾಪನೆಗಾಗಿ ಸಹಾಯಧನ ನೀಡುವ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 05 ರೊಳಗಾಗಿ ಸಲ್ಲಿಸಬೇಕು.   ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆ ಮತ್ತು ಮಾರ್ಗಸೂಚಿಗಳನ್ನು ಪಡೆಯಲು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಧಾರವಾಡ  ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*-*-*-*-*-*

5.. ವಾಟರ್ ಬೆಲ್’ ಮರುಜಾರಿಗೆ ಒತ್ತಾಯ

ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ’ವಾಟರ್ ಬೆಲ್’ ಯೋಜನೆಯನ್ನು ಮರು ಜಾರಿಗೊಳಿಸಬೇಕೆಂದು ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಪತ್ರ ಬರೆದಿದ್ದು,   ಶಾಲಾ ಮಕ್ಕಳಲ್ಲಿ ನಿರ್ಜಲೀಕರಣದ ಸಮಸ್ಯೆ ನಿವಾರಿಸುವ ಈ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ನಿಟ್ಟನಲ್ಲಿ ಕ್ರಮ ಕೈಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

Published On: 18 August 2023, 09:46 AM English Summary: Fact Check: Canceling women's free bus scheme?

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.