News

ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ರೈತಬಾಂಧವರಲ್ಲಿ ಮನವಿ

14 October, 2020 7:10 AM IST By:

2020 ರ ಮುಂಗಾರು ಹಂಗಾಮಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ ಅನುಷ್ಟಾನಗೊಳಿಸಲು ಯುನಿವರಸಲ್ ಸೊಂಪೊ  ಜೆನೆರಲ್  ಇನ್ಸುರೆನ್ಸ್ ಕಂಪನಿ ಲಿ. ಬೆಂಗಳೂರು (Universal Sompo General Insurance Co.Ltd) Bangalore ವಿಮಾ ಸಂಸ್ಥೆ ನಿಗದಿಪಡಿಸಲಾಗಿದೆ.

 ರೈತರುಗಳು ಸ್ಧಳ, ನಿರ್ಧಿಷ್ಟ, ಪ್ರಕೃತಿ ವಿಕೋಪಗಳಾದ (Localized calamity), ಆಲಿಕಲ್ಲು ಮಳೆ (Hailstorm), ಭೂ ಕುಸಿತ (Land slide), ಬೆಳೆ ಮುಳುಗಡೆ (Inundation), ಮೇಘ ಸ್ಪೋಟ (Cloud Burst), ಮತ್ತು ಗುಡುಗು ಮಿಂಚುಗಳಿಂದಾಗಿ ಉಂಟಾಗುವ ಬೆಂಕಿ ಅವಗಡ (Natural fire due to lightning) ಸಂದರ್ಭದಲ್ಲಿ ಬೆಳೆ ನಷ್ಟವುಂಟಾದರೆ ವೈಯಕ್ತಿಕ ನಷ್ಟದ ನಿರ್ಧರಣೆಯನ್ನು ವೈಯುಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಈ ಯೋಜನೆಯಡಿ ಅವಕಾಶ ನೀಡಲಾಗಿದೆ.

ಒಂದು ವೇಳೆ ಒಂದು ಅಧಿಸೂಚಿತ ಘಟಕದಲ್ಲಿ ಶೇಕಡಾ 25 ಕ್ಕಿಂತ ಹೆಚ್ಚು ವಿಸ್ತೀರ್ಣದಲ್ಲಿ ಬೆಳೆ ನಷ್ಟವಾದರೆ ಆ ಅಧಿಸೂಚಿತ ಘಟಕದಲ್ಲಿ ಬೆಳೆ ವಿಮೆಗೆ ಒಳಪಟ್ಟ ರೈತರಲ್ಲಿ ಬೆಳೆ ನಷ್ಟವಾದ ರೈತರಿಗೆ ಮಾತ್ರ ಮಾದರಿ ಸಮೀಕ್ಷೆಗನುಣವಾಗಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲಾಗುತ್ತದೆ. ಇಂತಹ ಸ್ಥಳಿಯ ಗಂಡಾಂತರ ಕಾರಣಗಳಿಂದ ಬೆಳೆ ನಷ್ಟ ಸಂಭವಿಸಿದರೆ ಬೆಳೆ ವಿಮೆ ಮಾಡಿಸಿರುವ ರೈತರು ಈ ಬಗ್ಗೆ ಸಂಬಂದಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಟಾನಗೊಳಿಸಿರುವ ವಿಮಾ ಸಂಸ್ಥೆಯ ಪ್ರತಿನಿಧಿಗಳು/ಸಹಾಯವಾಣಿಗೆ ತಕ್ಷಣ ಸೂಚನೆ ನೀಡಬೇಕು ಮತ್ತು ಯಾವುದೇ ಸಂದರ್ಭದಲ್ಲಿ ವಿಮೆ ಮಾಡಿಸಿದ ಬೆಳೆಯ ವಿವರಗಳನ್ನು ಹಾನಿಯ ವ್ಯಾಪ್ತಿ ಹಾಗೂ ಹಾನಿಗೆ ಕಾರಣಗಳನ್ನು 72 ಗಂಟೆಯೊಳಗೆ ತಿಳಿಸಿದ್ದಲ್ಲಿ ಬೆಳೆ ವಿಮೆ ಪ್ರತಿನಿಧಿಗಳು ತಮ್ಮ ಜಮೀನಿಗಳಿಗೆ ಭೇಟಿ ನೀಡಿ ಬೆಳೆ ನಷ್ಟ  ಮೌಲ್ಯಮಾಪನ ಮಾಡಿ ಮಾರ್ಗಸೂಚಿಯನ್ವಯ ಪರಿಹಾರ ಒದಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1800-200-5142 ತಮ್ಮ ತಾಲೂಕಿನ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.

ಅಥವಾ ಯುನಿವರಸಲ್ ಸೊಂಪೊ  ಜೆನೆರಲ್  ಇನ್ಸುರೆನ್ಸ ಕಂಪನಿ ಲಿ. ಬೆಂಗಳೂರು (Universal Sompo General Insurance Co.Ltd) Bangalore ವಿಮಾ ಸಂಸ್ಥೆ ಪ್ರತಿನಿಧಿಗಳನ್ನು ಸಂಪರ್ಕಿಸಲು ಕೋರಲಾಗಿದೆ.