1. ಸುದ್ದಿಗಳು

ಮಾಂಡೌಸ್‌ ಚಂಡಮಾರುತ ಅಪಾರ ಬೆಳೆಹಾನಿ: ಸಂಕಷ್ಟದಲ್ಲಿ ರೈತರು!

Hitesh
Hitesh
Farmers in trouble due to huge crop loss due to Cyclone Mandaus!

 ಮಾಂಡೌಸ್‌ ಚಂಡಮಾರುತದಿಂದ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತಮಿಳುನಾಡು ಸೇರಿದಂತೆ ವಿವಿಧೆಡೆ ಧಾರಾಕಾರ ಮಳೆ ಆಗುತ್ತಿದೆ. ಇದರಿಂದ ಅಪಾರ ಆಸ್ತಿ- ಪಾಸ್ತಿ ಹಾನಿಯಾಗಿದ್ದು, ಸಾವಿರಾರು ಜನ ಸಂಕಷ್ಟ ಎದುರಿಸುವಂತಾಗಿದೆ.

ಆಧಾರ್‌ ಕಾರ್ಡ್‌ನೊಂದಿಗೆ ಪಾನ್‌ ಕಾರ್ಡ್‌ ಜೋಡಣೆ ಕಡ್ಡಾಯ: ಮತ್ತೊಮ್ಮೆ ಗಡುವು! 

ಈ ನಡುವೆ ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೊಯ್ಲಿಗೆ ಸಿದ್ಧವಾಗಿರುವ ಬೆಳೆಗಳು ನಾಶವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಖ್ಯವಾಗಿ ಟೊಮೆಟೊ ಮತ್ತು ರಾಗಿ ಬೆಳೆಗಳು ಹೆಚ್ಚು ಹಾನಿಯಾಗಿದ್ದು, ಇಳುವರಿಯ ಮೇಲೆ ಪರಿಣಾಮ ಬೀರುತ್ತಿದೆ. ಇದರಿಂದ ಮುಂದಿನ ದಿನಗಳಲ್ಲಿ ಬೆಲೆ ಏರಿಕೆ ಎದುರಾಗುವ ಆತಂಕ ಸೃಷ್ಟಿಯಾಗಿದೆ.   

ಮಾಂಡೌಸ್‌ ಚಂಡಮಾರುತ ಪ್ರಭಾವ: ರಾಜ್ಯದ ವಿವಿಧೆಡೆ ಧಾರಾಕಾರ ಮಳೆ! 

ಈಗಾಗಲೇ ಅಲ್ಪ ಪ್ರಮಾಣದ ಸ್ವೀಟ್ ಕಾರ್ನ್ ಮತ್ತು ಟೊಮೆಟೊ ಕಟಾವು ಮಾಡಿ ಮಾರುಕಟ್ಟೆಗೆ ರವಾನಿಸಲಾಗಿದೆ. ಆದರೆ, ರಾಗಿ ಬೆಳೆ ನಾಶವಾಗಿದ್ದು, ವರ್ಷವಿಡೀ ರಾಗಿ ಕಾಂಡವನ್ನು ಜಾನುವಾರುಗಳಿಗೆ ಮೇವಾಗಿ ಬಳಸುವುದರಿಂದ ಹೈನುಗಾರರು ಹಾನಿಗೊಳಗಾಗುವ ಸಾಧ್ಯತೆಯಿದೆ.

ಏಷ್ಯಾದ ದೊಡ್ಡ ಟೊಮೆಟೊ ಮಾರುಕಟ್ಟೆಯಾಗಿರುವ ಕೋಲಾರ ಎಪಿಎಂಸಿಗೆ ಭಾನುವಾರ ಕೇವಲ 1,866 ಕ್ವಿಂಟಾಲ್ ಟೊಮೆಟೊ ಬಂದಿದ್ದರೆ, ಬೇರೆ ದಿನದಲ್ಲಿ 10 ಸಾವಿರ ಕ್ವಿಂಟಲ್‌ಗೂ ಹೆಚ್ಚು  ಟಮೊಟೋ ಬರುತ್ತದೆ. 15 ಕೆಜಿ ಕಂಟೆನ್‌ಗೆ ಕನಿಷ್ಠ 360 ರೂಪಾಯಿ ಇದೆ.  

Heavy Rain| ರಾಜ್ಯದ ವಿವಿಧೆಡೆ ಧಾರಾಕಾರ ಮಳೆ! 

ತಮಿಳುನಾಡಿಗೆ ಹೆಚ್ಚಿನ ಉತ್ಪನ್ನಗಳನ್ನು ಸಾಗಿಸುವ ಅನೇಕ ಟ್ರಕ್‌ಗಳಷ್ಟು ಸಾಕಷ್ಟು ದಾಸ್ತಾನುಗಳನ್ನು ಸ್ವೀಕರಿಸಿಲ್ಲ.  

ಹವಾಮಾನ ವೈಪರೀತ್ಯದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಫಂಗಲ್ ಸೋಂಕನ್ನು ತಡೆಗಟ್ಟುವ ಕ್ರಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.  

Heavy Rain ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ ವಿವಿಧೆಡೆ ಮೂರು ದಿನ ಮಳೆ

Mandaus Cyclone

ಉತ್ತರ ಕರ್ನಾಟಕದಲ್ಲಿ ಅತಿ ಹೆಚ್ಚು ಈರುಳ್ಳಿ ಉತ್ಪಾದನೆ ಮಾಡಿದ್ದರೂ ಗದಗದಲ್ಲಿ ಸಮರ್ಥ ಶೈತ್ಯಾಗಾರ ಸೌಲಭ್ಯಗಳ ಕೊರತೆ ಇದೆ.

ಜಿಲ್ಲೆಯ ಕೃಷಿ ಮಾರುಕಟ್ಟೆ ಉತ್ಪನ್ನ ಸಮಿತಿಯು ಎರಡು ಕೋಲ್ಡ್ ಸ್ಟೋರೇಜ್ ಘಟಕಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದು, ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೇ ರೈತರು ಬೆಳೆ ಶೇಖರಣೆ ಮಾಡಲು ಹರಸಾಹಸ ಪಡುವ ಪರಿಸ್ಥಿತಿ ಎದುರಾಗಿದೆ.  

ಕೂಡಲೇ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿದ್ದಾರೆ. ಗದಗ ಜಿಲ್ಲೆಯಲ್ಲಿ ಸುಮಾರು 5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗುತ್ತಿದೆ.   

PMFBY | ಬೆಳೆ ಹಾನಿ: ರೈತರಿಗೆ ಫಸಲ್‌ ಭೀಮಾ ಯೋಜನೆಯಡಿ ₹1,25,662 ಕೋಟಿ ಪಾವತಿ! |Crop Insurance

Published On: 12 December 2022, 03:00 PM English Summary: Farmers in trouble due to huge crop loss due to Cyclone Mandaus!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.