News

ರೈತರೇ.. ನಿಮ್ಮ ಮೊಬೈಲ್‌ನಲ್ಲೇ‌ ಬೆಳೆ ಸಮೀಕ್ಷೆ ನಡೆಸಿ

15 December, 2020 6:30 AM IST By:
ಸಾಂದರ್ಭಿಕ ಚಿತ್ರ

ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ, ಹಿಂಗಾರು ರೈತರ ಬೆಳೆ ಸಮೀಕ್ಷೆ-2020-21 ಆ್ಯಪ್ ಮೂಲಕ ರೈತರೇ ತಾವು ಬೆಳೆದ ಬೆಳೆಯನ್ನು ದಾಖಲಿಸಬಹುದು.

ಸರ್ಕಾರದ ಆದೇಶದಂತೆ ಈ ಬಾರಿಯ ಬೆಳೆ ಸಮೀಕ್ಷೆ ಕಾರ್ಯವನ್ನು ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರವನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

“ಹಿಂಗಾರು ರೈತರ ಬೆಳೆ ಸಮೀಕ್ಷೆ 2020-21” (Rabi Season Farmer App 2020-21)  ಮೊಬೈಲ್ ಆ್ಯಪ್ ಅನ್ನು ಗೂಗಲ್ ಪ್ಲೇ-ಸ್ಟೋರ್‍ನಿಂದ ಡೌನ್‍ಲೋಡ್ ಮಾಡಿಕೊಂಡು ನಿಗದಿತ ಅವಧಿಯೊಳಗಾಗಿ ಬೆಳೆ ವಿವರ ದಾಖಲಿಸಬೇಕೆಂದು ಅವರು ತಿಳಿಸಿದ್ದಾರೆ.

ಈ ಸಮೀಕ್ಷೆಯಿಂದ ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ, ಪ್ರಕೈತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ ಹಾಗೂ ಬೆಳೆ ವಿಮಾ ಯೋಜನೆ ಅಡಿ ಸರ್ವೆ ನಂಬರವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು  ಅರ್ಹ ಫಲಾನುಭವಿಗಳನ್ನು ಗುರುತಿಸಲು ಸಹಾಯವಾಗುತ್ತದೆ.

ಅಲ್ಲದೇ ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೈಷಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕಾಗಿ ಹಾಗೂ ಆರ್.ಟಿ.ಸಿಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಬಳಸಬಹುದಾಗಿದೆ. ಆದ್ದರಿಂದ ರೈತ ಬಾಂಧವರು ತಪ್ಪದೇ ತಮ್ಮ ಜಮೀನಿನಲ್ಲಿರುವ ಬೆಳೆಗಳ ವಿವರವನ್ನು ದಾಖಲಿಸಬಹುದು.

ಬೆಳೆ ಸಮೀಕ್ಷೆ ಆ್ಯಪ್ ಡೌಲನೋಡ್ ಮಾಡಿಕೊಳ್ಳಲು ರೈತರು ತಮ್ಮ ಅಂಡ್ರ್ತ್ರ್ಯಾಡ್ ಮೊಬೈಲ್‍ನಲ್ಲಿ ಪ್ಲೇಸ್ಟೋರ್ ಮೂಲಕ ಹಿಂಗಾರು ರೈತರ ಬೆಳೆ ಸಮೀಕ್ಷೆ-2020-21 ಆ್ಯಪ್ ಡೌನ್ಲೋಡ್ ಮಾಡಿಕೊಂಡು ಪ್ರಸಕ್ತ ಆರ್ಥಿಕ ವರ್ಷ ಹಾಗೂ ಋತುವನ್ನು ದಾಖಲಿಸಬೇಕು

ಆನಂತರ ಆಧಾರ ಕ್ಯೂಆರ್ ಕೋಡನ್ನು ಸ್ಕ್ತ್ರ್ಯಾನ್ ಮಾಡಿ ಮೊಬೈಲ್ ಸಂಖ್ಯೆ ನಮೂದಿಸಿ ಸಕ್ರಿಯಗೊಳಿಸುವದರಿಂದ ಮೊಬೈಲ್ ಸಂಖ್ಯೆಗೆ ಒಟಿಪಿ ಬರಲಿದ್ದು, ಒಟಿಪಿಯನ್ನು ದಾಖಲಿಸಿ ಸಲ್ಲಿಸಬೇಕು. ನಂತರ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮ, ಸರ್ವೆ ನಂಬರ, ಹಿಸ್ಸಾ, ಮಾಲಿಕರ ಹೆಸರು ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ ಸರ್ವೇ ನಂಬವಾರು ರೇಖೆಯೊಳಗೆ ನಿಂತು ವಿವರ ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‍ಲೋಡ್ ಮಾಡಬಹುದು.