1. ಸುದ್ದಿಗಳು

ರೈತರ ಚುನಾವಣಾ ಪ್ರಣಾಳಿಕೆ ಒಪ್ಪುವ ಪಕ್ಷಕ್ಕೆ ಮಾತ್ರ ರೈತರ ಬೆಂಬಲ! ಈ ಬೇಡಿಕೆ ಮುಂದಿಟ್ಟ ರೈತ ಸಂಘ

Kalmesh T
Kalmesh T
Farmers' support is only for the party that agrees with the farmers' election manifesto

ರೈತರ ಚುನಾವಣಾ ಪ್ರಣಾಳಿಕೆ ಒಪ್ಪುವ ಪಕ್ಷಕ್ಕೆ ಮಾತ್ರ ಬೆಂಬಲ ನೀಡುತ್ತೇವೆ ಎಂದು ರಾಜ್ಯ ರೈತ ಸಂಘ ತಿಳಿಸಿದೆ. ಅಲ್ಲದೇ ಈ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ.

ಸಾಮಾನ್ಯ ಸೌಲಭ್ಯಗಳ ಯೋಜನೆಗಾಗಿ ಫಾರ್ಮಾ ಇಂಡಸ್ಟ್ರೀಸ್‌ಗೆ ರೂ. 500 ಕೋಟಿ ನೆರವು!

ರೈತರಿಗೆ ಕನಿಷ್ಠ ಆದಾಯ ಖಾತರಿ ಭದ್ರತೆ ಒದಗಿಸಬೇಕು. ಹಗಲು ವೇಳೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ 10 ಗಂಟೆಗಳ ನಿರಂತರ ವಿದ್ಯುತ್ ನೀಡುವ ಭರವಸೆ ಬೇಕು.  ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಆಗಬೇಕು. ಕೃಷಿ ಸಾಲ ನೀತಿ ಬದಲಾಗಬೇಕು.

ದೇಶದ ಜನರ ಆಹಾರ ಉತ್ಪಾದನೆ ಮಾಡುವ ರೈತನಿಗೆ ಕೃಷಿ ಸಾಲ ಬಡ್ಡಿ ರಹಿತವಾಗಿ ಎಲ್ಲ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ನೀಡುವಂತ ಯೋಜನೆ ಜಾರಿಗೆ ಬರಬೇಕು.

ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ಕೈ ಬಿಡುವುದಾಗಿ ಭರವಸೆ ನೀಡಬೇಕು. ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ ಶಾಸನ ಜಾರಿ ಮಾಡುವ ಭರವಸೆ ನೀಡಬೇಕು.

ಮಹಿಳೆಯರಿಗೆ ಸಿಹಿಸುದ್ದಿ: ಸ್ತೀಶಕ್ತಿ ಸಂಘಗಳಿಗೆ ಒಟ್ಟು 5 ಲಕ್ಷ ರೂ. ಆರ್ಥಿಕ ನೆರವು!

ಡಾ. ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು. ಫಸಲ್ ಭೀಮಾ ಬೆಳೆ ವಿಮೆ ಯೋಜನೆ ತಿದ್ದುಪಡಿ ಮಾಡಬೇಕು ಹಾಗೂ ಇದನ್ನು ಎಲ್ಲಾ ಬೆಳೆಗಳಿಗೂ ಅನ್ವಯ ಮಾಡಬೇಕು.

ಅಭಿವೃದ್ಧಿ ಹೆಸರಿನಲ್ಲಿ ರೈತರ ಕೃಷಿ ಭೂಮಿ ಭೂಸ್ವಾದಿನ ಪ್ರಕ್ರಿಯೆ ನಿಲ್ಲಿಸಬೇಕು. ಅಗತ್ಯ ಸಂದರ್ಭಗಳಲ್ಲಿ ರೈತರ ಅನುಮತಿ ಪಡೆಯಬೇಕು. ಅಂತಹ ರೈತರಿಗೆ ಜೀವನ ಭದ್ರತೆ ರೂಪಿಸಬೇಕು.

ಕಬ್ಬಿನ ಎಫ್‌.ಆರ್‌.ಪಿ ಧರ ರೈತರ ಹೊಲದಲ್ಲಿನ ಧರ ಎಂದು ನಿಗದಿ ಪಡಿಸಬೇಕು. ರೈತರು ಆಲೆಮನೆಗಳಲ್ಲಿ ಕಬ್ಬಿನಿಂದ ಎಥನಾಲ್ ಉತ್ಪಾದನೆಗೆ ರೈತರಿಗೆ ಅವಕಾಶ ನೀಡಬೇಕು.

ಕಬ್ಬು ಬೆಳೆಯ ಉತ್ಪಾದನೆಗೆ ಎನ್ಆರ್‌ಇಜಿ ಯೋಜನೆಯನ್ನು ಸೇರಿಸಬೇಕು. ಗ್ರಾಮೀಣ ಯುವಕರನ್ನು ವಲಸೆ ತಪ್ಪಿಸಿ ಕೃಷಿಯಲ್ಲಿ ತೊಡಗಿಸಿಕೊಳ್ಳಲು, ಗ್ರಾಮೀಣ ಭಾಗದಲ್ಲಿ ಕೃಷಿ ಪೂರಕ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಭರವಸೆ ಬೇಕು.

ಗ್ರಾಮೀಣ ಪ್ರದೇಶದಲ್ಲಿ ವಾಸಿಸುವ ರೈತರ ಗಂಡು ಮಕ್ಕಳ ಮದುವೆಯಾಗುವ ಹೆಣ್ಣು ಮಕ್ಕಳಿಗೆ ಸರ್ಕಾರಿ ಕೆಲಸದಲ್ಲಿ ಮೀಸಲಾತಿ ನೀಡಬೇಕು.

ಕೃಷಿ ಉತ್ಪನ್ನ, ಹಾಗೂ ಕೃಷಿ ಉಪಕರಣಗಳ ಮೇಲೆ ವಿಧಿಸಿರುವ ಜಿಎಸ್‌ಟಿ ರದ್ದುಗೊಳಿಸಬೇಕು. ಸಾವಯವ ಉತ್ಪನ್ನಗಳು, ಸಿರಿಧಾನ್ಯಗಳಿಗೆ ಪ್ರತ್ಯೇಕ ಮಾರುಕಟ್ಟೆ , ಪ್ರತ್ಯೇಕ ಹೆಚ್ಚುವರಿ ಧರ ನಿಗದಿ ಯೋಜನೆ ಜಾರಿಗೆ ಬರಬೇಕು.

ವಿದೇಶಿ ಬಹುರಾಷ್ಟ್ರೀಯ ಬಂಡವಾಳಶಾಹಿ ಕಂಪನಿಗಳು ಚಿಲ್ಲರೆ ಮಾರಾಟ ವ್ಯವಸ್ಥೆಗೆ, ಕೃಷಿ  ಕ್ಷೇತ್ರದಲ್ಲಿ ಹೂಡಿಕೆ ನಿಷೇಧವಿರಬೇಕು. ರಾಜ್ಯದಲ್ಲಿರುವ ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ಕುಟುಂಬಸ್ಥರನ್ನು ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಬಾರದು. 

ರಾಜ್ಯದಲ್ಲಿ ಜಾರಿಗೆ ತಂದಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವ ಭರವಸೆ ನೀಡಬೇಕು.

ಕಬ್ಬಿನ ಹೆಚ್ಚುವರಿ ದರ 150 ರೂ ನಿಗದಿ ಆಧೇಶ ವಿಚಾರದಲ್ಲಿ ರಾಜ್ಯ ಸರ್ಕಾರದ ಇಬ್ಬಗೆ ನೀತಿ ಅನುಸರಣೆಯಿಂದ ರೈತರಿಗೆ ಕಾರ್ಖಾನೆಗಳು ಹಣ ನೀಡುತ್ತಿಲ್ಲ.

ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಲಿ, ನಿರ್ಲಕ್ಷ್ಯ ಮಾಡಿದರೆ ಬಿಜೆಪಿ ಮಂತ್ರಿಗಳಿಗೆ ಹಳ್ಳಿಗಳಿಗೆ ಬಂದಾಗ ಘೇರಾವ್ ಕಾರ್ಯಕ್ರಮ ಮಾಡಬೇಕಾಗುತ್ತದೆ.

ರಾಜ್ಯದ ರೈತರ ಪ್ರಣಾಳಿಕೆಯನ್ನು ರಾಜ್ಯದಲ್ಲಿರುವ ಪ್ರಬಲವಾದ ಯಾವ ಪಕ್ಷ ಒಪ್ಪಿಗೆ ಸೂಚಿಸಿ ಜಾರಿಗೆ ತರಲು ಭರವಸೆ ನೀಡುತ್ತಾರೋ, ಅವರಿಗೆ ಬೆಂಬಲಿಸಲು ಕರೆ ನೀಡಲಾಗುವುದು ಎಂದು ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.

Published On: 14 March 2023, 09:47 AM English Summary: Farmers' support is only for the party that agrees with the farmers' election manifesto

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.