ರಾಜ್ಯದ ರೈತ ಸಮುದಾಯಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಕೇಂದ್ರ, ರಾಜ್ಯ ಸರ್ಕಾರದ ನಾನಾ ಸಹಾಯಧನ ಮತ್ತಿತರ ಸೌಲಭ್ಯ ಪಡೆಯಲು ರೈತರು ಆದಷ್ಟು ಬೇಗ ತಮ್ಮ ಆಧಾರ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಗಳನ್ನು ಜೋಡಿಸಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.
ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆ ಜೊತೆಗೆ ರಾಜ್ಯ ಸರ್ಕಾರದ ಹಲವಾರು ಪ್ಯಾಕೇಜ್ ಸೇರಿ ನೆರವುವುಗಳನ್ನು ಪಡೆಯಲು ರೈತರು ಆದಷ್ಟು ಶೀಘ್ರ ವಾಗಿ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದರು
ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಯಾವುದೇ ಕಾರಣಕ್ಕೆ ವಿಳಂಬ ಮಾಡದೆ ಆಧಾರ್ ಸಂಖ್ಯೆಯನ್ನು ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಕಡ್ಡಾಯವಾಗಿ ಜೋಡಿಸಬೇಕು. ಇಲ್ಲವಾದರೆ, ಸವಲತ್ತುಗಳ ವರ್ಗಾವಣೆಗೆ ಅನಗತ್ಯ ವಿಳಂಬವಾಗಲಿದೆ ಎಂದರು.
ಬಹುತೇಕ ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಅಕೌಂಟ್ ನಂಬರ್ ಲಿಂಕ್ ಮಾಡಿಲ್ಲ. ರೈತರು ವಿಳಂಬ ಮಾಡಬಾರದು ಎಂದು ಕೋರಿದರು.
ಮೆಕ್ಕೆ ಜೋಳ, ಹೂವು ಬೆಳೆಗಾರರಿಗೆ 666 ಕೋಟಿ ರೂಪಾಯಿ ಪರಿಹಾರ ಮೊತ್ತ ಬಿಡುಗಡೆ:
ಮೆಕ್ಕೆಜೋಳ ಹಾಗೂ ಹೂವು ಬೆಳೆದ ರೈತರಿಗೆ ಮುಖ್ಯಮಂತ್ರಿಯವರು ಹತ್ತು ಲಕ್ಷ ರೈತರಿಗೆ ತಲಾ ಐದು ಸಾವಿರದಂತೆ ಪರಿಹಾರ ಧನದ ಮೊದಲ ಕಂತು ಬಿಡುಗಡೆ ಮಾಡಿದ್ದಾರೆ. ಇದಕ್ಕೆ ಆನ್ ಲೈನ್ ಮೂಲಕ ಪರಿಹಾರ ಯೋಜನೆಗೆ ಚಾಲನೆ ನೀಡಲಾಗಿದೆ. ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡಿದ ರೈತರಿಗೆ ಪರಿಹಾರ ಹೋಗಿದೆ. ಆದರೆ ಇನ್ನೂ ಕೆಲವು ರೈತರು ತಮ್ಮ ಬ್ಯಾಂಕ್ ಖಾತೆ ಸಂಖ್ಯೆಯನ್ನು ಆಧಾರ್ ಸಂಖ್ಯೆಗೆ ಜೋಡಣೆ ಮಾಡಿಲ್ಲ. ಹೀಗಾಗಿ ತಕ್ಷಣ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
Share your comments