News

ಬಸ್ ಪ್ರಯಾಣಿಕರಿಗೆ ಸಂತಸದ ಸುದ್ದಿ-ವಿಜಯದಶಮಿ ಹಬ್ಬದ ಪ್ರಯುಕ್ತ ರಿಯಾಯಿತಿ ದರದಲ್ಲಿ ಬಸ್ ಟಿಕೇಟ್

21 October, 2020 5:53 PM IST By:

ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಇದೇ ಅಕ್ಟೋಬರ್ 24 ನಾಲ್ಕನೇ ಶನಿವಾರ, ಅಕ್ಟೋಬರ್ 25ರಂದು ರವಿವಾರದಂದು   ರಜೆ ಇರುವ  ಪ್ರಯುಕ್ತ ಹಾಗೂ ಅಕ್ಟೋಬರ್ 26 ರಂದು ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ಇತರೆ ಸ್ಥಳಗಳಿಗೆ ಒಟ್ಟು 220 ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ.

ಟಿಕೇಟ್ ದರದಲ್ಲಿ ರಿಯಾಯಿತಿ ಸೌಲಭ್ಯ: ಈ ಬಸ್‍ಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಿಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂಗಡವಾಗಿ ಆಸನ ಕಾಯ್ದಿರಿಸುವಾಗ 4 ಅಥವಾ 4ಕ್ಕಿಂತ ಹೆಚ್ಚಿನ ಜನರ ಗುಂಪಿನ ಒಂದೇ ಟಿಕೇಟ್ ಪಡೆದುಕೊಂಡಲ್ಲಿ ಮೂಲ ಟಿಕೇಟ್ ದರದ ಶೇ.5 ರಷ್ಟು ರಿಯಾಯಿತಿ ಸೌಲಭ್ಯ ಕಲ್ಪಿಸಲಾಗಿದೆ.  ಹೋಗುವ ಹಾಗೂ ಮರಳಿ ಬರುವಾಗಿನ ಆಸನಗಳನ್ನು ಒಮ್ಮೆಲೇ ಕಾಯ್ದಿರಿಸಿದ್ದಲ್ಲಿ  ಬರುವಾಗಿನ ಮೂಲ ಟಿಕೇಟ್ ದರದ ಮೇಲೆ ಶೇ.10 ರಷ್ಟು ರಿಯಾಯಿತಿ ಸೌಲಭ್ಯ ಕಲ್ಪಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರು ಇದರ ಸದುಪಯೋಗ ಪಡೆಯಬೇಕೆಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಕೂರ್ಮರಾವ್ ತಿಳಿಸಿದ್ದಾರೆ.

ಬೆಂಗಳೂರದಿಂದ ಹಾಗೂ ಇತರೆ ಸ್ಥಳಗಳಾದ ಹುಬ್ಬಳ್ಳಿ, ಧಾರವಾಡ, ಬಳ್ಳಾರಿ, ದಾವಣಗೆರೆಗಳಿಂದ ಹೆಚ್ಚಿನ ಜನದಟ್ಟಣೆಯಾಗುವ ಸಾಧ್ಯತೆಯಿರುವ ಪ್ರಯುಕ್ತ ಅಕ್ಟೋಬರ್ 23 ಹಾಗೂ 24  ರಂದು ಬೆಂಗಳೂರದಿಂದ ಹಾಗೂ ಇತರೆ ಸ್ಥಳಗಳಿಂದ ಕಲಬುರಗಿ, ಬೀದರ, ಯಾದಗಿರ, ರಾಯಚೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ ಹಾಗೂ ವಿಜಯಪುರ ಕಡೆಗೆ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. 

ಅದೇ ರೀತಿ 2020ರ ನವೆಂಬರ್ 1 ರಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿವಿಧ ಸ್ಥಳಗಳಾದ ಕಲಬುರಗಿ, ಬೀದರ, ಯಾದಗಿರ, ರಾಯಚೂರು, ಬಳ್ಳಾರಿ, ಹೊಸಪೇಟೆ, ಕೊಪ್ಪಳ ಹಾಗೂ ವಿಜಯಪುರಗಳಿಂದ ಬೆಂಗಳೂರಿಗೆ ಹಾಗೂ ಜನದಟ್ಟಣೆಗನುಗುಣವಾಗಿ ಹುಬ್ಬಳ್ಳಿ, ಧಾರವಾಡ, ದಾವಣಗೆರೆ, ಬಳ್ಳಾರಿ ಇತರೆ ಸ್ಥಳಗಳಿಗೆ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. 

ಜನದಟ್ಟಣೆಗನುಗುಣವಾಗಿ ಹೆಚ್ಚುವರಿ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಈ  ಸಾರಿಗೆ ಬಸ್‍ಗಳ ಸೌಲಭ್ಯವನ್ನು ಸಾರ್ವಜನಿಕ ಪ್ರಯಾಣಿಕರು ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.