1. ಸುದ್ದಿಗಳು

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ: ಮನೆಯ ಜವಾಬ್ದಾರಿ ನೋಡಿಕೊಳ್ಳುವ ಮಹಿಳೆಯರಿಗೆ ಆರ್ಥಿಕ ನೆರವು!

Hitesh
Hitesh
Financial assistance to women for household management: Chief Minister Basavaraja Bommai

ಮುಂದಿನ ಬಜೆಟ್‌ನಲ್ಲಿ ಜನಪರ ಯೋಜನೆಗಳನ್ನು ಪರಿಚಯಿಸಲು ಸರ್ಕಾರವು ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರಲ್ಲಿ ಮಹಿಳೆಯರಿಗೆ ಸಹಾಯ ಮಾಡುವುದು, ಕೋವಿಡ್ ಮತ್ತು ಪ್ರವಾಹದಿಂದ ಬಳಲುತ್ತಿರುವ ಕಾರ್ಮಿಕ ವರ್ಗಗಳಿಗೆ ಆರ್ಥಿಕ ನೆರವು ನೀಡುವುದು ಪ್ರಮುಖವಾಗಿದೆ ಎಂದರು. ಒಂದು ಕುಟುಂಬದ ಮಹಿಳೆ ಸ್ವತಂತ್ರವಾಗಿ ಕನಿಷ್ಠ ಮನೆ ನಿರ್ವಹಣೆಗೆ ಅಗತ್ಯವಿರುವ ಆರ್ಥಿಕ ನೆರವು ನೀಡಲಾಗುವುದು.

ಪ್ರತಿ ಕುಟುಂಬಕ್ಕೆ ಮನೆ ನಡೆಸಲು ವಿಶೇಷ ಕಾರ್ಯಕ್ರಮವನ್ನು ಹೆಣ್ಣು ಮಕ್ಕಳಿಗೆ ನೀಡಲಾಗುವುದು. ಸ್ತ್ರೀ ಸಾಮರ್ಥ್ಯದ ಜೊತೆಗೆ ಸ್ತ್ರೀ ಶಕ್ತಿ ಯೋಜನೆಯಡಿ ಮನೆ ನಡೆಸಲು, ಕೋವಿಡ್ ಉಪಚಾರ, ಆರೋಗ್ಯ ಸೇರಿದಂತೆ ಸಣ್ಣ ಖರ್ಚು ನಿರ್ವಹಿಸುವ ಯೋಜನೆ ಇದಾಗಿದೆ.

ಪ್ರತಿ ಕುಟುಂಬದ ಅಗತ್ಯವನ್ನು ನೋಡಿಕೊಂಡು ಒಂದು ಸಾವಿರ, 1500, 2 ಸಾವಿರ ಅಥವಾ ಎಷ್ಟು ವೆಚ್ಚವಾಗುತ್ತದೆ ಎನ್ನುವುದನ್ನು ಪರಿಗಣಿಸಿ  ಮನೆಯ ಜವಾಬ್ದಾರಿ ನೋಡಿಕೊಳ್ಳುವ ಮಹಿಳೆಗೆ ಆರ್ಥಿಕ ನೆರವು ನೀಡಲಾಗುವುದು. ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಮೊದಲು ಜಾರಿ ಮಾಡಲಾಗುವುದು. ಪ್ರತಿ ಮನೆಗೆ ಸ್ತ್ರೀಯರ ಹೆಸರಿನಲ್ಲಿ ಸಹಾಯ ನೀಡಲಾಗುವುದು ಎಂದರು. 

ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ

ಜನಕಲ್ಯಾಣ ಕಾರ್ಯಕ್ರಮಕ್ಕೆ ಹೆಚ್ಚಿನ  ಒತ್ತು ನೀಡುವ ಯೋಜನೆಗಳ ಚಿಂತನೆ ಮಾಡುತ್ತಿದ್ದೇವೆ. ದುಡಿಯುವ ವರ್ಗಕ್ಕೆ ಹೆಚ್ವಿನ ಅನುಕೂಲ ಮಾಡುವ ಚಿಂತನೆ ಮಾಡಲಾಗುತ್ತಿದೆ.  ರೈತರು, ಕಾರ್ಮಿಕರು, ಮಹಿಳೆಯರು ಪರಿಶಿಷ್ಟ ಜಾತಿ, ಪಂಗಡ ಮತ್ತು ಒಬಿಸಿ ಜನಾಂಗದವರ ಶ್ರೇಯೋಭಿವೃದ್ಧಿಗೆ ಕಾರ್ಯಕ್ರಮ ಗಳನ್ನು ರೂಪಿಸಲಾಗುತ್ತಿದೆ. ಯುವಕರಿಗೆ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ, 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ಕ್ಕೆ ಒಂದು ಲಕ್ಷ ನೀಡಿ, ಬ್ಯಾಂಕ್ ಜೋಡಿಸಿ ಅವರನ್ನು ಸ್ವಾವಲಂಬಿ ಮಾಡಲು ಎಂಡ್ ಟು ಎಂಡ್ ಅಪ್ರೋಚ್ ವುಳ್ಳ ಕಾರ್ಯಕ್ರಮ ಇದಾಗಿದೆ.

ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಇದೇ ತಿಂಗಳು ಪ್ರಾರಂಭ ಮಾಡಲಾಗುತ್ತಿದೆ.  ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಕ್ಕೆ  5 ಲಕ್ಷ ರೂ.ವರೆಗೆ ಸಹಾಯಧನ ನೀಡಲಾಗುವುದು. ಜನವರಿ ಅಂತ್ಯ ಹಾಗೂ ಫೆಬ್ರವರಿ ಪ್ರಾರಂಭದಲ್ಲಿ  ಚಾಲನೆ ನೀಡಲಾಗುವುದು. ಯುವಕರಿಗೆ, ಮಹಿಳೆಯರಿಗೆ ಶಕ್ತಿ ತುಂಬುವ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

ಬಜೆಟ್‌ಗೆ ಪೂರ್ವಭಾವಿ ಸಿದ್ಧತೆ

ಸಚಿವ ಸಂಪುಟದಲ್ಲಿ ವಿಧಾನಸಭೆಯ  ಜಂಟಿ ಅಧಿವೇಶನ ಕ್ಕೆ ದಿನಾಂಕ ಗೊತ್ತು ಮಾಡಲಾಗುವುದು. ಬಜೆಟ್ ಅಧಿವೇಶನವನ್ನು ಫೆ. 17 ನೇ ತಾರೀಖು ಮಾಡುವ ಸಾಧ್ಯತೆ ಇದೆ. ಅದಕ್ಕೆ ಪೂರ್ವಭಾವಿಯಾಗಿ ಎಲ್ಲಾ ಸಿದ್ಧತೆಗಳನ್ನು ಪ್ರಾರಂಭ ಮಾಡಿದ್ದೇವೆ.   ಈಗಾಗಲೇ ಡಿಸೆಂಬರ್ ವರೆಗೆ  ನಮ್ಮ  ರಾಜ್ಯದ  ಆದಾಯವು  ಮೂರುಪಟ್ಟು ಹೆಚ್ಚಾ ಗಿದೆ. ಇದನ್ನು ಇನ್ನಷ್ಟು ಹೆಚ್ಚು ಮಾಡಲು ಗುರಿಗಳನ್ನು ಹೆಚ್ಚು ಮಾಡಲು ಸೂಚನೆ ನೀಡಲಾಗಿದೆ. ಜನಪರ ಆಯವ್ಯಯ ನೀಡಲು ತೀರ್ಮಾನ ಮಾಡಲಾಗಿದೆ. ಚುನಾವಣೆ ಇರುವುದರಿಂದ ವಿಶೇಷ ಬಜೆಟ್ ಇರಲಿದೆ. ಅಸ್ಸಾಂ ಹಾಗೂ , ಗುಜರಾತ್ ಸರ್ಕಾರ ಕೆಲವು ಘೋಷಣೆಗಳನ್ನು ಮಾಡಿವೆ. ಆದರೆ  ಘೋಷಣೆ ಬೇರೆ ಅನುಷ್ಠಾನ ಬೇರೆ ಎಂದರು.

ದುಡಿಯುವ ವರ್ಗಕ್ಕೆ ಹೆಚ್ಚಿನ ಸಹಾಯ

ಪೌಷ್ಟಿಕ ಆಹಾರ ನೀಡಲು ದೊಡ್ಡ ಪ್ರಮಾಣದ ಘೋಷಣೆ ಮಾಡಲಾಗಿದೆ. ತೀವ್ರ, ಮಧ್ಯಮ ಎಂಬ ವರ್ಗೀಕರಣವಿದ್ದು, ತೀವ್ರ ಕೊರತೆಯಿರುವವರಿಗೆ ನೀಡುವ ಆಹಾರವನ್ನೇ ಮಧ್ಯಮ ಕೊರತೆ ಇರುವವರಿಗೆ ನೀಡುವುದು ಈಗಾಗಲೇ ಅನುಷ್ಠಾನಗೊಳ್ಳುತ್ತಿದೆ.  5- 6 ಜಿಲ್ಲೆಗಳಲ್ಲಿ ಐ.ಎಂ.ಆರ್ ಎಂಎಮರ್ ಕಡಿಮೆಯಿದ್ದು, ಅಡನ್ನು ಹೆಚ್ಚಿಗೆ ಮಾಡುವ ಸಲುವಾಗಿ ನಾವು ಚಿಂತನೆ ಮಾಡುತ್ತಿದ್ದೇವೆ. ಜನಸಾಮಾನ್ಯರ ಆರೋಗ್ಯ, ಶಿಕ್ಷಣ, ಉದ್ಯೋಗ ಆರ್ಥಿಕ ನೆರವು, ದುಡಿಯುವ ವರ್ಗಕ್ಕೆ ಹೆಚ್ಚಿನ ಸಹಾಯ ಯುವಕರಿಗೆ ಮತ್ತು ಸ್ತ್ರೀಯರಿಗೆ ಸಹಾಯ ಮಾಡಲಾಗುವುದು ಎಂದರು. 

ಮಡಿಕೇರಿಯಲ್ಲಿ ಕಾರ್ಯಾಚರಣೆ ವೇಳೆ ಆನೆ ಸ್ಥಳದಲ್ಲೇ ಸಾವು 

Published On: 15 January 2023, 05:18 PM English Summary: Financial assistance to women for household management: Chief Minister Basavaraja Bommai

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.