ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೀನುಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನಿಂದ 2024-25 ನೇ ಸಾಲಿನ ವರೆಗೆ ಪ್ರಧಾನಮಂತ್ರಿ ಮತ್ಯ ಸಂಪದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ. 2021-22ನೇ ಸಾಲಿನ ಯೋಜನೆಯ ಪ್ರಯುಕ್ತ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಯೋಜನೆಗಳಾದ ಮೀನು ಕೃಷಿ ಕೊಳಗಳ ನಿರ್ಮಾಣ, ಬಯೋಫ್ಲಾಕ್ ಕೊಳ ನಿರ್ಮಾಣ, ಮೀನುಮರಿ ಉತ್ಪಾದನೆ ಹಾಗೂ ಪಾಲನಾ ಕೇಂದ್ರಗಳ ಸ್ಥಾಪನೆ, ಅಲಂಕಾರಿಕ ಮೀನು ಉತ್ಪಾದಕ ಘಟಕ, ಕ್ರೀಡಾ ಮೀನುಗಾರಿಕೆ, ಆರ್‌ಎಎಸ್ ಘಟಕ ಸ್ಥಾಪನೆ, ಶೈತೀಕರಿಸಿದ ಶಾಖ ನಿರೋಧಕ ವಾಹನ ಖರೀದಿ ಅಥವಾ ಶೈತ್ಯಾಗಾರ ಹಾಗೂ ಮಂಜುಗಡ್ಡೆ ಸ್ಥಾವರ ನಿರ್ಮಾಣ ಮತ್ತು ಇತರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ. 40ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕದ ವೆಚ್ಚದ ಶೇ. 60 ರಷ್ಟು ಸಹಾಯಧನ ನೀಡಲಾಗುವುದು.
ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದೆ. 2021-22ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ಕೇಂದ್ರ ವಲಯ, ರಾಜ್ಯ ವಲಯ ಹಾಗೂ ಜಿಲ್ಲಾ ವಲಯದ ವಿವಿಧ ಯೋಜನೆಗಳಲ್ಲಿ ಮೀನುಗಾರಿಕೆ ಸಲಕರಣೆ ಕಿಟ್‌ಗಳ ಖರೀದಿ, ಮೀನುಮರಿ ಖರೀದಿಗೆ ಹಾಗೂ ಯೋಜನೆಗಳಿಗೆ ಸಹಾಯಧನ ಪಡೆಯಲು ಆಸಕ್ತ ಒಳನಾಡು ಮೀನುಗಾರರು ಸಂಬಂಧಪಟ್ಟ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಅರ್ಜಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರ ಮೊ.ಸಂ. 9886430338, ಸಹಾಯಕ ನಿರ್ದೇಶಕರಾದ ಕೊಪ್ಪಳ ಮೊ.ಸಂ. 9110878145,, ಗಂಗಾವತಿ ಮೊ.ಸಂ. 9632338221, ಕುಷ್ಟಗಿ ಮೊ.ಸಂ. 7019520084 ಸಂಪರ್ಕಿಸಬಹುದು ಎಂದು ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.