News

ಮೀನಿನ ಚಿಪ್ಸ್ ತಯಾರಿಕಾ ಘಟಕ ಆರಂಭಕ್ಕೆ ನಿರ್ಧಾರ- ಕೋಟ ಶ್ರೀನಿವಾಸ ಪೂಜಾರಿ

29 July, 2020 10:21 AM IST By:
Fish

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೀನಿನ (Fish) ಚಿಪ್ಸ್ ತಯಾರಿಕಾ ಘಟಕ ಆರಂಭಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅವರು ಸುದ್ದಿಗಾರರೊಂದಿಗೆ ಮಾತನಾಡಿ,  ಇತ್ತೀಚೆಗೆ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮವು ಬಿಡುಗಡೆ ಮಾಡಿರುವ ಮೀನಿನ ಚಿಪ್ಸಿಗೆ ಭಾರೀ ಬೇಡಿಕೆ ಬರುತ್ತಿದೆ. ಬೇಡಿಕೆ ಇರುವುಷ್ಟು ಪೂರೈಕೆ ಮಾಡಲು ಆಗುತ್ತಿಲ್ಲ. ಹಾಗಾಗಿ ಮೀನಿನ ಚಿಪ್ಸ್ (Fish chips) ತಯಾರಿಕಾ ಘಟಕ ಆರಂಭ ಮಾಡಲು ನಿರ್ಧರಿಸಾಲಿಗದೆ. ರಾಜ್ಯದ ನೂತನ ಮೀನುಗಾರಿಕಾ ನೀತಿಯ ಕರಡು (fisheries policy draft ready) ಸಿದ್ದವಾಗಿದ್ದು, ಶೀಘ್ರದಲ್ಲಿಯೇ ನೀತಿಯನ್ನು ಅಂತಿಮಗೊಳಿಸಿ ಸಚಿವ ಸಂಪುಟದ ಅನುಮೋದನೆ ಪಡೆಯಲಾಗುವುದು. ರಾಜ್ಯದಲ್ಲಿ ಸಮಗ್ರ ಮೀನುಗಾರಿಕಾ ನೀತಿಯನ್ನು ಜಾರಿಗೊಳಿಸುವ ಬಗ್ಗೆ ಸರಕಾರ ನಿರ್ಧಾರ ಕೈಗೊಂಡಿದ್ದು, ಇದರ ಬಗ್ಗೆ ಕರಡು ಸಿದ್ಧವಾಗಿದೆ. ಮುಂದಿನ ಒಂದೆರಡು ತಿಂಗಳಲ್ಲಿ ಇದಕ್ಕೆ ಅಂತಿಮ ರೂಪ ನೀಡಿ ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದ ಬಳಿಕ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿದ್ದಾರೆ.

 ಕಾನೂನು ಜಾರಿಗೆ ತರುವುದಕ್ಕಿಂತ ಮೊದಲು ಇದರ ಸಾಧಕ, ಬಾಧಕಗಳ ಕುರಿತು ಚರ್ಚೆಗೆ ಸಾರ್ವಜನಿಕರಿಗೆ ಅವಕಾಶ ಇದೆ. ಎಲ್ಲರ ಅಭಿಪ್ರಾಯವನ್ನು ಕ್ರೋಢೀಕರಿಸಿ ಮೀನುಗಾರರಿಗೆ ಅನುಕೂಲವಾಗುವ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಇದೇ ಜುಲೈ 30ರಂದು ಬೆಂಗಳೂರಿನಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ (world fisheries day) ಆಯೋಜಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಮೀನುಗಾರಿಕೆ ಬಗ್ಗೆ ಸಮಗ್ರ ಅವಲೋಕನ ನಡೆಯಲಿದೆ. ಇದೇ ಸಂದರ್ಭದಲ್ಲಿ ಮೀನಾಗಾರಿಕಾ ಇಲಾಖೆಯ ಸಾಧನೆಗಳಿಗೆ ಸಂಬಂದಿಸಿದ ಪುಸ್ತಕವನ್ನು  ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.