ರಾಜ್ಯದ ಹಲವೆಡೆ ಅಕಾಲಿಕ ಮಳೆಯಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ಗುಡುಗು ಮಿಂಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮಿಂಚಿನ ಮಳೆಯಾಗುವದರಿಂದ ಈ ಜಿಲ್ಲೆಗಳಲ್ಲಿ ಏ. 29 ಮತ್ತು 30 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ ಮುಂದುವರೆಯಲಿದೆ. ಈ ದಿನಗಳಲ್ಲಿ 64.5 ಮೀಮೀನಿಂದ 115.5 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ,ಬಾಗಲಕೋಟೆ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಸಹ ಚದುರಿದ ಮಳೆಯಾಗಲಿದೆ.
ಕರಾವಳಯಿ ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಮೇಸೂರು ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಮುಂದಿನ 72 ಗಂಟೆಗಳಲ್ಲಿ ಅಲ್ಲಲ್ಲಿ ಮಳೆಯಾಗಲಿದೆ.
ಕಳೆದ 24 ಗಂಟೆಗಳಲ್ಲಿ 109.5 ಮಿಮೀ ಬೆಂಗಳೂರು ವಲಯದಲ್ಲಿ ಮಳೆ ದಾಖಲಾಗಿದೆ. ರಾಮನಗರ, ಮಂಕಿ, ಆನವಟ್ಟಿ, ತಾಳಗುಪ್ಪ, ಸೊರಬ, ಹುಂಚದಕಟ್ಟೆ, ಬೆಳ್ತಂಗಡಿ, ಕೋಲಾರ, ನಾಗಮಂಗಲ, ಭಟ್ಕಳ, ಯಲಬುರ್ಗಾ, ಮಸ್ಕಿ, ಮುಡಬಿದಿರೆ, ಪುತ್ತೂರ, ಕೊಲ್ಲೂರ, ಕೊಟ್, ಧರ್ಮಸ್ಥಳ, ಹರಪನಹಳ್ಳಿಯಲ್ಲಿ ಮಳೆಯಾಗಿದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಗದಗ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.
Share your comments