1. ಸುದ್ದಿಗಳು

ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ- ಜುಲೈ 29 ರಿಂದ ಯೆಲ್ಲೋ ಅಲರ್ಟ್

Heavy rain

ರಾಜ್ಯದಲ್ಲಿ ಜುಲೈ 29 ರಿಂದ ಐದು ದಿನಗಳವರೆಗೆ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರಿ ಮಳೆ(Heavy rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜು.27ರಂದು ಯೆಲ್ಲೋ ಅಲರ್ಟ್ (yellow alert)ಇದ್ದರೆ, ಜು.30, 31ರಂದು ಆರೆಂಜ್ ಅಲರ್ಟ್ (orange alert) ಘೋಷಿಸಲಾಗಿದೆ. ಮುಂದಿನ ಮೂರು ದಿನಗಳು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಇರಲಿದೆ.

ಜುಲೈ 29ರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳು ಹಾಗೂ ಒಳನಾಡಿನ ಬೆಳಗಾವಿ, ಬೀದರ್, ಗದಗ, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.  ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡುಗು ಹಾಗೂ ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗುವ ಹಿನ್ನೆಲೆಯಲ್ಲಿ ಜು.29ರಿಂದ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರದಲ್ಲಿ ಜು.29ರಂದು ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಜು.30ರಂದು ಬೆಳಗಾವಿ, ಬೀದರ್, ಗದಗ ಹಾಗೂ ಕಲಬುರಗಿಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

ಕರಾವಳಿಯಲ್ಲಿ ಗರಿಷ್ಠ 2.8 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಮುಂದಿನ 48 ಗಂಟೆಗಳವರೆಗೆ ಮೀನುಗಾರರು (fishers) ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

Published On: 27 July 2020, 09:34 AM English Summary: five more day heavy rain in karnataka

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.