News

ಚಿನ್ನದ ಬೆಲೆಯಲ್ಲಿ ಅಲ್ಪ ಬದಲಾವಣೆ, ಇಂದಿನ ಚಿನ್ನದ ಬೆಲೆ ಎಷ್ಟಿದೆ ?

05 December, 2022 5:46 PM IST By: Hitesh
Fluctuations in the price of gold, what is the price of gold today?

ಇತ್ತೀಚಿನ ದಿನಗಳಲ್ಲಿ ಚಿನ್ನದ ದರದಲ್ಲಿ ಯಾವುದೇ ಗಣನೀಯ ಬದಲಾವಣೆಗಳು ಕಂಡುಬಂದಿಲ್ಲ.

ಆನ್‌ಲೈನ್‌ನಲ್ಲೇ ಬೆಳೆಗಳ ಖರೀದಿ ಮತ್ತು ವಿತರಣೆ! 

ದೇಶದ ಹಲವು ಭಾಗಗಳಲ್ಲಿ ಚಿನ್ನದ ಬೆಲೆಯಲ್ಲಿ ಸಣ್ಣ ಪ್ರಮಾಣದಲ್ಲಿ ಬದಲಾವಣೆ ಆಗುತ್ತಿರುತ್ತದೆ. ಆದರೆ, ಇದೀಗ ಯಾವುದೇ ಬದಲಾವಣೆ ಆಗಿಲ್ಲ.

ಇದು ಹಲವು ಹೂಡಿಕೆದಾರರು ಹಾಗೂ ಆಭರಣಗಳನ್ನು ಕೊಳ್ಳಬಯಸುವವರ ಮೇಲೆ ಪ್ರಭಾವ ಬೀರುತ್ತಲೇ ಇರುತ್ತದೆ.

ಭಾನುವಾರಕ್ಕೆ ಹೋಲಿಕೆ ಮಾಡಿದರೆ, ಸೋಮವಾರ ಚಿನ್ನದ ಬೆಲೆಯಲ್ಲಿ ಯಾವುದೇ ಏರಿಕೆ ಉಂಟಾಗಿಲ್ಲ.

ಭಾರತೀಯ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಆಭರಣ ಚಿನ್ನದ ಬೆಲೆ ರೂ. 4,945 ಆಗಿದ್ದರೆ, ಪ್ರತಿ 10 ಗ್ರಾಂ ಚಿನ್ನದ ಬೆಲೆ ರೂ. 49,450 ಆಗಿದೆ.

ಮಾರುಕಟ್ಟೆಯಲ್ಲಿ ಸೋಮವಾರ ಬಂಗಾರದ ದರದಲ್ಲಿ, ಒಂದು ಗ್ರಾಂ (1GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,945 ಆಗಿದ್ದು,

24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,395 ಆಗಿದೆ. ಇನ್ನು ಎಂಟು ಗ್ರಾಂ (8GM) 22 ಕ್ಯಾರಟ್

ಆಭರಣ ಚಿನ್ನದ ಬೆಲೆ - ರೂ. 39,560 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 43,160 ಆಗಿದೆ.

ಹತ್ತು ಗ್ರಾಂ (10GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 49,450 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 53,950 ಆಗಿದೆ.

ನೂರು ಗ್ರಾಂ (100GM) 22 ಕ್ಯಾರಟ್ ಆಭರಣ ಚಿನ್ನದ ಬೆಲೆ - ರೂ. 4,94,500 ಆಗಿದ್ದು, 24 ಕ್ಯಾರಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,39,500 ಆಗಿದೆ.

ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 49,500 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ

ಕೊಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 50,160, ರೂ. 49,450, ರೂ. 49,450 ಆಗಿದೆ.

ದೆಹಲಿಯಲ್ಲಿ ಸೋಮವಾರ ಚಿನ್ನದ ಬೆಲೆ 49,600 ರೂ. ಆಗಿದೆ.

ಇಂದು ಮಾರುಕಟ್ಟೆಯಲ್ಲಿ ಪ್ರತಿ ಒಂದು ಕೆಜಿ ಬೆಳ್ಳಿಯ ಬೆಲೆ ರೂ. 65,200 ಆಗಿದ್ದು ಕಳೆದ ವಾರಕ್ಕೆ

ಹೋಲಿಸಿದರೆ ಬೆಲೆಯಲ್ಲಿ ಏರಿಕೆ ಆಗಿರುವುದು ವರದಿ ಆಗಿದೆ.  

ಇನ್ನು, ಚಿನ್ನದ ವ್ಯಾಪಾರ ಹಾಗೂ ವಹಿವಾಟಿಗೆ ಭಾರತ ಒಂದು ದೊಡ್ಡ ಮಾರುಕಟ್ಟೆಯೇ ಆಗಿದೆ.

ಭಾರತದ ಮಾರುಕಟ್ಟೆಗಳಲ್ಲಿ ಇಂದು ಚಿನ್ನ ಖರೀದಿ ಸಹಜ ಸಂಗತಿಯಾಗಿದ್ದು ದಿನದಲ್ಲೇ ಕೋಟ್ಯಂತರ

ರೂಪಾಯಿಗಳಷ್ಟು ವ್ಯವಹಾರವನ್ನು ಈ ವ್ಯವಹಾರ ಹೊಂದಿದೆ.

ಚಿನ್ನಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ಸಹ ಸಾಕಷ್ಟು ಬೇಡಿಕೆಯಿದೆ. ಇಂದು ಚಿನ್ನದ ಹೂಡಿಕೆ ಬಹು

ಸುರಕ್ಷಿತ ಹೂಡಿಕೆ ಎಂದೇ ಹಲವು ತಜ್ಞರು ಹೇಳುತ್ತಾರೆ.