News

ನವೆಂಬರ್‌ 7ರಿಂದ ಒಂದು ತಿಂಗಳು ಜಾನುವಾರುಗಳಿಗೆ ಕಾಲುಬಾಯಿ ಲಸಿಕೆ ಅಭಿಯಾನ: ಪ್ರಭು ಚವ್ಹಾಣ್‌

07 November, 2022 11:37 AM IST By: Hitesh
Cattle

ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ ಇಂದಿನಿಂದ ಅಂದರೆ ನವೆಂಬರ್‌ ಏಳರಿಂದ ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ರೋಗದ ನಿಯಂತ್ರಣ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು “ಕೃಷಿ ಮೇಳ” ಹಲವು ದಾಖಲೆ ಸೃಷ್ಟಿ ; ಮೇಳಕ್ಕೆ 17.35 ಲಕ್ಷ ಜನ ಭೇಟಿ!

ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗವನ್ನು ನಿಯಂತ್ರಿಸುವ ಉದ್ದೇಶದಿಂದ ನವೆಂಬರ್‌ ಏಳರಿಂದ ಡಿಸೆಂಬರ್‌ ಏಳರವರೆಗೆ ಒಂದು ತಿಂಗಳ ಕಾಲ

ಕಾಲುಬಾಯಿ ರೋಗದ ನಿಯಂತ್ರಣ ಅಭಿಯಾನವನ್ನು ಹಮ್ಮಿಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್‌ ತಿಳಿಸಿದ್ದಾರೆ.

ಕಾಲುಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಇದನ್ನು ತಪ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ.

ರೈತರ ಖಾತೆಗೆ ನೇರವಾಗಿ ಡೀಸೆಲ್‌ ಸಬ್ಸಿಡಿ ಪಾವತಿ; ದಾಖಲೆಯೂ ಬೇಕಿಲ್ಲ: ಬಿ.ಸಿ ಪಾಟೀಲ್ 

ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಜ್ಯ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಉಚಿತ ಲಸಿಕೆ ಅಭಿಯಾನ ಆಯೋಜಿಸಲಾಗುತ್ತಿದೆ.

ಕಾಲುಬಾಯಿ ರೋಗ ನಿಯಂತ್ರಿಸಿ, ನಿರ್ಮೂಲನೆ ಮಾಡಲು ಸದ್ಯ ಪ್ರತಿ ಆರು ತಿಂಗಳಿಗೊಮ್ಮೆ ರೋಗದ ವಿರುದ್ಧ ಲಸಿಕೆ ಹಾಕಿಸುವುದು ಮಾತ್ರ ಪರಿಹಾರೋಪಾಯ ಮಾರ್ಗವಾಗಿದೆ.

ಜಾನುವಾರುಗಳ ಕಾಲುಬಾಯಿ ರೋಗಕ್ಕೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ಪ್ರತಿ ಜಾನುವಾರುಗಳಿಗೆ ಪ್ರತ್ಯೇಕ ಸಿರಿಂಜ್‌ ಮತ್ತು ಸೂಜಿ ಬಳಸಲು ನಿರ್ದೇಶನ ನೀಡಲಾಗಿದೆ.

ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕಟ್ಟೆಚ್ಚರ ವಹಿಸುವಂತೆ ಪಶುಪಾಲನಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಮತ್ತು ಸಹಾಯಕ ನಿರ್ದೇಶಕರಿಗೆ ಸಚಿವ ಪ್ರಭು ಚವ್ಹಾಣ್‌ ಅವರು ಸೂಚಿಸಿದ್ದಾರೆ.

13.5 ಲಕ್ಷ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: 7ನೇ ವೇತನ ಆಯೋಗ ರಚನೆಗೆ ಅಸ್ತು!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸರ್ಕಾರದೊಂದಿಗೆ ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕೆ ಕ್ರಮ ವಹಿಸುವಂತೆ ಚರ್ಚೆ ನಡೆಸಿದ್ದರು.

ನಾನು ಸಹ ಕೇಂದ್ರ ಪಶುಸಂಗೋಪನಾ ಸಚಿವ ಪುರುಷೋತ್ತಮ್‌ ರೂಪಾಲಾ ಅವರನ್ನು ಭೇಟಿ ಮಾಡಿ ಒಂದು ಕೋಟಿ ಲಸಿಕೆ ನೀಡುವಂತೆ ಮನವಿ ಮಾಡಿದ್ದೆ.

ಕಬ್ಬು ಬೆಳೆ ಬೆಳೆಯಲು ಇರುವ ಉತ್ತಮ ತಳಿಗಳ ಬಗ್ಗೆ ನಿಮಗೆಷ್ಟು ಗೊತ್ತು? 

ಜಾನುವಾರು

ರಾಜ್ಯ ಸರ್ಕಾರದ ಮನವಿಗೆ ಕೇಂದ್ರ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇದನ್ನೂ ಓದಿರಿ ತಿರುಪತಿ ತಿರುಮಲದಲ್ಲಿರುವ ಆಸ್ತಿ ಮೌಲ್ಯ ಐದು ಸಾವಿರ ಕೋಟಿ! 10.25 ಟನ್‌ ಬಂಗಾರ, ಒಟ್ಟಾರೆ ಆಸ್ತಿ ಎಷ್ಟು ಗೊತ್ತೆ?