ರಾಜ್ಯದಲ್ಲಿ ಲಾಕ್ ಡೌನ್‍ನಿಂದ ಹಣ್ಣು ತರಕಾರಿ ಹೂವು ಬೆಳೆದು ಸಂಕಷ್ಟಕ್ಕೆ ಸಿಲುಕಿ ನಷ್ಟಗೊಂಡಿರುವ ರೈತರಿಗೆ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಿಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಪತ್ರದ ಮೂಲಕ ಆಗ್ರಹಿಸಿದ್ದಾರೆ.
ಮಾವು ಬೆಳೆಗಾರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿ ತೊಂದರೆಯಾಗದಂತೆ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಲಾಕ್‍ಡೌನ್ ಜಾರಿಯಾಗಿ ಒಂದು ತಿಂಗಳು ಕಳೆದಿದೆ. ಈ ಸಂದರ್ಭದಲ್ಲಿ ಸಂಘಟಿತ ಮತ್ತು ಅಸಂಘಟಿತ ವಲಯದ ಕೂಲಿ ಕಾರ್ಮಿಕರು ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಲಾಕ್‍ಡೌನ್‍ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವುದು ರೈತಾಮಿ ಸಮುದಾಯ. ಅದರಲ್ಲೂ ಹಣ್ಣ ತರಕಾರಿ ಹೂವು ಭೆಳೆದವರು ಕಣ್ಣೀರಿಡುತ್ತಿದ್ದಾರೆ. ಅದೇ ರೀತಿಯಾಗಿ ಲಕ್ಷಾಂತರ ಎಕರೆಯಲ್ಲಿ ಬೆಳೆದ ಟೊಮ್ಯಾಟೋ, ಆಲೂಗಡ್ಡೆ, ಹೂಕೋಸು, ಎಲೆಕೋಸು, ಗೆಣಸು ಸೇರಿದಂತೆ ಇತರ ಬೆಳೆ ಬೆಳೆದ ರೈತರು ಕಂಗಾಲಾಗಿದ್ದಾರೆ. ಕೂಡಲೇ ರೈತರ ನೆರವಿಗೆ ಸರ್ಕಾರ ಬರಬೇಕೆಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಲಾಕ್ ಡೌನ್ ನಿಂದ ಹಣ್ಣು ತರಕಾರಿ ಹೂವು ಬೆಳೆದು ಸಂಕಷ್ಟಕ್ಕೆ ಸಿಲುಕಿ ನಷ್ಟಕ್ಕೆ ಈಡಾದ ಹಳೇ ಮೈಸೂರು, ಹೈದರಾಬಾದ್ ಕರ್ನಾಟಕ, ಮುಂಬೈ ಕರ್ನಾಟಕ ಸೇರಿ ರಾಜ್ಯದ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕೆಂದು ಒತ್ತಾಯಿಸಿದ್ದಾರೆ.