ಕೃಷಿಗೆ ಸಂಬಂಧಿಸಿದ ಪ್ರಮುಖ ಸುದ್ದಿಗಳನ್ನು ರೈತರಿಗೆ ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಅಗ್ರಿ ನ್ಯೂಸ್ ಪರಿಚಯಿಸಿದೆ. ಇಂದಿನ ಪ್ರಮುಖ ಸುದ್ದಿಗಳು ಹೀಗಿವೆ.
PM Kisan| ಪಿ.ಎಂ ಕಿಸಾನ್ 13ನೇ ಕಂತು: ಹೊಸ ವರ್ಷದ ಮೊದಲು ಬಿಡುಗಡೆ
1. ಮೆಕ್ಕೆಜೋಳ ಬೆಳೆಗೆ ಗೊಣ್ಣಿಹುಳು ಕಾಟ: ರೈತರಿಗೆ ಸಂಕಷ್ಟ
2. ಪಡಿತರ ವಿತರಣೆಗೆ ಆಹಾರ ಕೊರತೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ
3. ಕಬ್ಬು ಬೆಳೆಗಾರರಿಗೆ ವಂಚನೆ: 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ
4. ಮುದ್ರಾ ಯೋಜನೆ: ಬರೋಬ್ಬರಿ 20 ಲಕ್ಷ ಕೋಟಿ ಸಾಲ ವಿತರಣೆ
5. ಅಂತರ್ ಧರ್ಮೀಯ ವಿವಾಹ: ಸಮಿತಿ ರಚಿಸಿದ ಮಹಾರಾಷ್ಟ್ರ ಸರ್ಕಾರ!
6. ಬಂಡೆಗಳ ನಡುವೆ ಮೂರು ದಿನ ಸಿಲುಕಿದ್ದ ವ್ಯಕ್ತಿ ರಕ್ಷಣೆ!
7. ಪೂಸಾ ಇನ್ಸಿಟಿಟ್ಯೂಟ್‌ನಿಂದ ಬರ ಸಹಿಷ್ಣು ಕಡಲೆ ತಳಿ ಪರಿಚಯ
8. ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
9. ಅಡಿಕೆ ಬೆಲೆ ಕುಸಿತದಿಂದ ರೈತರು ಕಂಗಾಲು: ಸಂಸದ ಬಿ. ವೈ. ರಾಘವೇಂದ್ರ
10. ಇಶಾ ಯೋಗಾ ಫೌಂಡೇಷನ್‌ನಿಂದ ಕಾರ್ಯಾಗಾರ
Heavy Rain| ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ!
------------
1.ಗದುಗಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳೆದ ಮೆಕ್ಕೆಜೋಳ ಬೆಳೆಯಲ್ಲಿ ಗೊಣ್ಣಿಹುಳು ಕಾಣಿಸಿಕೊಂಡಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಪ್ಪತ್ತಗುಡ್ಡ ಅಂಚಿನಲ್ಲಿರುವ ಜಮೀನುಗಳಲ್ಲಿ ಕಾಡು ಹಂದಿಗಳ ಹಾವಳಿ ಹೆಚ್ಚಾಗಿದೆ. ಇದರ ನಡುವೆ ಮುಂಡರಗಿ ಹಾಗೂ ಡಂಬಳ ಹೋಬಳಿ ಭಾಗದಲ್ಲಿ ಮೆಕ್ಕೆಜೋಳಕ್ಕೆ ಗೊಣ್ಣಿಕೀಟಿ ತಗುಲಿದೆ. ಮೆಕ್ಕೆಜೋಳ ಬೆಳೆಯಲ್ಲಿ ಕಾಣಿಸಿಕೊಂಡಿರುವ ಗೊಣ್ಣಿ ಹುಳು ವಿಷಕಾರಿ ಕೀಟವಾಗಿದ್ದು, ಸಸಿ ಸುಳಿಯಲ್ಲಿ ಮೇಯುತ್ತಾ ಅಲ್ಲೇ ವಿಸರ್ಜಿಸುತ್ತಿದೆ. ಇದರಿಂದ ಬೆಳೆ ಕೊಳೆಯುತ್ತದೆ. ಕ್ರಿಮಿನಾಶಕ ಸಿಂಪಡಿಸಿದರೂ ನಿಯಂತ್ರಣಕ್ಕೆ ಬರುತ್ತಿಲ್ಲ ಎಂದು ರೈತರ ಅಳಲು ತೋಡಿಕೊಂಡಿದ್ದಾರೆ.
------------
Lumpy Skin Disease| ಚರ್ಮಗಂಟು ರೋಗದಿಂದ ಜಾನುವಾರು ಸಾವು: ಪರಿಹಾರಕ್ಕೆ 30ಕೋಟಿ
2. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಅಡಿಯಲ್ಲಿ ಹೆಚ್ಚುವರಿ ಆಹಾರ ಧಾನ್ಯಗಳ ಹಂಚಿಕೆಗೆ ಯಾವುದೇ ಕೊರತೆ ಉಂಟಾಗಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಭಾರತ ಸರ್ಕಾರವು ಗೋಧಿ ಬೆಲೆ ಪರಿಸ್ಥಿತಿಯ ಕುರಿತು ನಿಯಮಿತವಾಗಿ ಮೇಲ್ವಿಚಾರಣೆ ಮಾಡುತ್ತದೆ. ಗೋಧಿಯೊಂದಿಗೆ ಇತರ ವಸ್ತುಗಳ ಬೆಲೆಗಳನ್ನು ಸಹ ಮೇಲ್ವಿಚಾರಣೆ ಮಾಡಲಾಗುತ್ತಿದ್ದು,ಅಗತ್ಯವಿದ್ದರೆ ಸರಿಪಡಿಸುವ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
------------
ಪಿ.ಎಂ ಕಿಸಾನ್ 13ನೇ ಕಂತು: ಹೊಸ ವರ್ಷದ ಮೊದಲು ಬಿಡುಗಡೆ ಸಾಧ್ಯತೆ
------------
3. ರೈತರು ಪೂರೈಸುವ ಕಬ್ಬಿನ ತೂಕವನ್ನು ಕಡಿಮೆ ಮಾಡಿ ವಂಚಿಸುತ್ತಿರುವ ದೂರಿನ ಮೇಲೆ ಅಧಿಕಾರಿಗಳು ರಾಜ್ಯದ 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ಮಾಡಿದ್ದಾರೆ.
ರಾಜ್ಯದಲ್ಲಿ ಇದೇ ಮೊದಲ ಬಾರಿ ಬೃಹತ್ ಪ್ರಮಾಣದಲ್ಲಿ ದಾಳಿ ನಡೆದಿದೆ. ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಇಲಾಖೆಗಳ ಅಧಿಕಾರಿಗಳು ಮತ್ತು ಪೊಲೀಸರು ಜಂಟಿಯಾಗಿ ಆರು ಜಿಲ್ಲೆಗಳ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಒಡೆತನದ ನಿರಾಣಿ ಶುಗರ್ಸ್ ಲಿ. ಸಹ ದಾಳಿಗೊಳಗಾದ ಸಂಸ್ಥೆಗಳಲ್ಲಿ ಸೇರಿದೆ. ಕೆಲವು ಸಕ್ಕರೆ ಕಾರ್ಖಾನೆಗಳು ತೂಕ ಇಳಿಸಿ ರೈತರಿಗೆ ವಂಚನೆ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಳಗಾವಿಯಲ್ಲಿ 8, ಬಾಗಲಕೋಟೆ ಮತ್ತು ವಿಜಯಪುರದಲ್ಲಿ ತಲಾ 4, ಬೀದರ್ ಮತ್ತು ಕಲಬುರ್ಗಿಯಲ್ಲಿ ತಲಾ 2, ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆದಿದೆ.
-----------
4. ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಮುದ್ರಾ ಯೋಜನೆ ಅಡಿ ಇಲ್ಲಿಯವರೆಗೆ 20.43ಲಕ್ಷ ಕೋಟಿ ಮೊತ್ತದ ಸಾಲ ವಿತರಿಸಲಾಗಿದೆ. 2015ರಲ್ಲಿ ಮುದ್ರಾ ಯೋಜನೆಯನ್ನು ಕೇಂದ್ರ ಸರ್ಕಾರ ಪರಿಚಯಿಸಿತ್ತು. ಈ ಯೋಜನೆಯ ಅಡಿಯಲ್ಲಿ 2015ರಿಂದ 2018ರ ವರೆಗೆ 1.12 ಕೋಟಿ ನಿವ್ವಳ ಹೆಚ್ಚುವರಿ ಉದ್ಯೋಗಗಳನ್ನು ಸೃಷ್ಟಿಯಾಗಿದೆ ಎಂದು ಮುದ್ರಾ ಪೋರ್ಟಲ್ ಪ್ರಕಟಣೆ ತಿಳಿಸಿದೆ.
-----------
ಅಂತರ್ ಧರ್ಮೀಯ ವಿವಾಹಗಳ ಮೇಲೆ ನಿಗಾ ಇರಿಸುವ ಉದ್ದೇಶದಿಂದ ಮಹಾರಾಷ್ಟ್ರ ಸರ್ಕಾರವು 13 ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚನೆ ಮಾಡಿದೆ. ಅಂತರ್ ಧರ್ಮೀಯ ವಿವಾಹವಾದವರು ಹಾಗೂ ಅವರ ಕುಟುಂಬದವರ ಮೇಲೆ ನಿಗಾ ಇರಿಸುವುದು, ಮಾಹಿತಿ ಸಂಗ್ರಹಿಸಿ ಇರಿಸುವುದು ಈ ಸಮಿತಿಯ ಮುಖ್ಯ ಜವಾಬ್ದಾರಿಯಾಗಿದೆ ಎಂದು ಮಹಾರಾಷ್ಟ್ರ ಸರ್ಕಾರದ ಪ್ರಕಟಣೆ ತಿಳಿಸಿದೆ.
-----------
6. ತೆಲಂಗಾಣದ ಕಾಮಾರೆಡ್ಡಿ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಬಂಡೆಗಳ ನಡುವೆ ಕಳೆದ ಮೂರು ದಿನಗಳಿಂದ ಸಿಲುಕಿದ್ದ 36 ವರ್ಷದ ವ್ಯಕ್ತಿಯನ್ನು ಮೂರು ದಿನಗಳ ಬಳಿಕ ಗುರುವಾರ ರಕ್ಷಣೆ ಮಾಡಲಾಗಿದೆ. ಇಲ್ಲಿನ ರೆಡ್ಡಿಪೇಟ್ ಗ್ರಾಮದ ರಾಜು ಎಂಬವರು ಮಂಗಳವಾರ ಸ್ನೇಹಿತರೊಂದಿಗೆ ಅರಣ್ಯ ಪ್ರದೇಶಕ್ಕೆ ಹೋಗಿದ್ದರು. ಈ ಸಂದರ್ಭದಲ್ಲಿ ಬಂಡೆಗಳ ನಡುವೆ ಬಿದ್ದ ಮೊಬೈಲ್ ತೆಗೆದುಕೊಳ್ಳಲು ಹೋಗಿ ತಾವೇ ಸಿಲುಕಿದ್ದರು.
ನಿರಂತರ ಕಾರ್ಯಾಚರಣೆಯ ನಂತರ ಗುರುವಾರ ನಿಯಂತ್ರಿತ ಸ್ಫೋಟಕಗಳನ್ನು ಬಳಸುವ ಮೂಲಕ ಬಂಡೆಗಳನ್ನು ಒಡೆದು ರಾಜು ಅವರನ್ನು ರಕ್ಷಣೆ ಮಾಡಲಾಗಿದೆ.
-----------
7. ಪೂಸಾ ಇನ್ಸಿಟ್ಯೂಟ್ ಹಾಗೂ ವಿವಿಧ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದಲ್ಲಿ ಬರ ಸಹಿಷ್ಣು ಮತ್ತು ಹೆಚ್ಚು ಇಳುವರಿ ಕೊಡುವ ಕಡಲೆ ತಳಿ “ಪುಸಾ ಜೆಜಿ 16” ಎನ್ನುವ ತಳಿಯನ್ನು ಪರಿಚಯಿಸಲಾಗಿದೆ. ಈ ತಳಿಯು ಮಧ್ಯಪ್ರದೇಶ, ಉತ್ತರ ಪ್ರದೇಶ, ಛತ್ತೀಸ್‌ಗಢ, ದಕ್ಷಿಣ ರಾಜಸ್ಥಾನ, ಮಹಾರಾಷ್ಟ್ರ ಮತ್ತು ಗುಜರಾತ್‌ನ ನಿರ್ದಿಷ್ಟ ಬರಪೀಡಿತ ಪ್ರದೇಶಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ. ಬೆಳೆಗಳಲ್ಲಿ ಉಂಟಾಗುವ ಇಳುವರಿ ನಷ್ಟವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸುತ್ತದೆ. ಪೂಸಾ ಜೆಜಿ 16 ತಳಿಯನ್ನು ಜೆನೊಮಿಕ್ ಅಸಿಸ್ಟೆಡ್ ಬ್ರೀಡಿಂಗ್ ತಂತ್ರಗಳನ್ನು ಬಳಸಿಕೊಂಡು ಅಭಿವೃದ್ಧಿಪಡಿಸಲಾಗಿದೆ.
-----------
8. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮೋಡಕವಿದ ವಾತಾವರಣ, ತುಂತುರು ಮಳೆ, ವಿಪರೀತ ಚಳಿ ಇದೆ. ಹೀಗಾಗಿ, ಜನರಲ್ಲಿ ಶೀತ, ಜ್ವರ ಸೇರಿದಂತೆ ಸಾಮಾನ್ಯ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ. ಅಲ್ಲದೇ ಚಳಿ ವಾತಾವರಣ ಹಾಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾಂಡೌಸ್ ಚಂಡಮಾರುತದ ಅಬ್ಬರದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮತ್ತು ತುಂತುರು ಮಳೆಯಾಗುತ್ತಿದೆ. ಇದೀಗ ಡಿಸೆಂಬರ್ 15ರಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಹಲವೆಡೆ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
-----------
9. ಅಡಿಕೆ ಬೆಲೆ ಕುಸಿತವಾಗಿರುವುದರಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಹೀಗಾಗಿ, ಹೆಚ್ಚಿನ ಬೆಲೆ ನೀಡಿ ರೈತರಿಗೆ ನೆರವಾಗಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಲೋಕಸಭೆಯಲ್ಲಿ ಒತ್ತಾಯಿಸಿದ್ದಾರೆ. ಆಮದು ಅಡಿಕೆಗೆ ಹೆಚ್ಚಿನ ಸುಂಕ ವಿಧಿಸಬೇಕು ಹಾಗೂ ಎಲೆಚುಕ್ಕೆ ರೋಗಕ್ಕೆ ವೈಜ್ಞಾನಿಕ ಔಷಧಿ ಪರಿಚಯಿಸಬೇಕು. ಈ ಮೂಲಕ ರೈತರ ಹಿತ ಕಾಪಾಡಬೇಕು ಎಂದು ಒತ್ತಾಯಿಸಿದ್ದಾರೆ. ಕರ್ನಾಟಕ ಸೇರಿದಂತೆ ದೇಶದ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಅಡಿಕೆ ಬೆಳೆಯಲಾಗುತ್ತಿದೆ. ಕರ್ನಾಟಕದ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿ ಸೇರಿದಂತೆ 16 ಜಿಲ್ಲೆಗಳಲ್ಲಿ ಅಡಿಕೆ ಬೆಳೆಯಲಾಗುತ್ತದೆ. ಅಲ್ಲದೇ ಕರ್ನಾಟಕದಲ್ಲಿ ಸುಮಾರು 10 ಲಕ್ಷ ಕುಟುಂಬಗಳು ಅಡಿಕೆ ಕೃಷಿಯನ್ನು ಅವಲಂಬಿಸಿವೆ. ಇದೀಗ ಅಡಿಕೆಯಲ್ಲಿ ಕಾಣಿಸಿಕೊಂಡಿರುವ ರೋಗ ಅವರನ್ನು ತೀವ್ರ ಸಂಕಷ್ಟಕ್ಕೆ ದೂಡಿದೆ ಎಂದರು.
-----------
10. ಇಶಾ ಯೋಗ ಫೌಂಡೇಷನ್‌ನ ಮಣ್ಣು ಉಳಿಸಿ ಆಂದೋಲನ ಮತ್ತು ಕಾವೇರಿ ಕರೆ ಆಂದೋಲನವನ್ನು ತಮಿಳುನಾಡು ಕೃಷಿ ವಿಶ್ವವಿದ್ಯಾಲಯದ ತರಬೇತಿ ಕಾರ್ಯಕ್ರಮದ ಭಾಗವಾಗಿ ಭಾರತದಾದ್ಯಂತದ ಕೃಷಿ ಮತ್ತು ಸಂಬಂಧಿತ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಕಾರ್ಯಾಗಾರ ನಡೆಯಿತು. ಸೆಮ್ಮೇಡುವಿನ ಇಶಾ ನ್ಯಾಚುರಲ್ ಫಾರ್ಮ್‌ನಲ್ಲಿ ಮಣ್ಣು ಉಳಿಸಿ ಆಂದೋಲನ ಮತ್ತು ಕಾವೇರಿ ಕರೆ ಆಂದೋಲನದ ವಿವಿಧ ಅಂಶಗಳ ಕುರಿತು ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು.
-----------