News

ಹೈನುಗಾರಿಕೆಗೆ ಉಚಿತ ತರಬೇತಿ ನೀಡಲು ರೈತರಿಂದ ಅರ್ಜಿ ಆಹ್ವಾನ

04 November, 2020 8:54 AM IST By:

ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೆನರಾ ಬ್ಯಾಂಕ್ ನ ಎ.ಡಿ.ಪೈ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ 10ದಿನ ಉಚಿತ ಹೈನುಗಾರಿಕೆ ತರಬೇತಿಯನ್ನು ಆಯೋಜಿಸಲಾಗಿದೆ.

ಆಸಕ್ತಿಯುಳ್ಳವರು ಕನಿಷ್ಠ 7 ನೇ ತರಗತಿಯವರೆಗೆ ವಿದ್ಯಾಭ್ಯಾಸ ಪಡೆದಿರಬೇಕು. 18 ರಿಂದ 45 ವಯೋಮಾನದವರಿರಬೇಕು.

ತರಬೇತಿ ಅವಧಿಯಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯವಿರುತ್ತದೆ. ತರಬೇತಿಯ ಉದ್ದೇಶ ಯುವತಿಯರು ಸ್ವ-ಉದ್ಯೋಗದ ಮೂಲಕ ಆರ್ಥಿಕ ಸಬಲತೆ ಸಾಧಿಸುವುದಾರುತ್ತದೆ.

ಇದನ್ನೂ ಓದಿ...ಸೊಸೈಟಿಗೆ ಹಾಕಿದ ಹಾಲಿನ ಲೆಕ್ಕ ಇನ್ನೂ ಪಕ್ಕಾ- ಕ್ಷಣಾರ್ಧದಲ್ಲಿ ವರ್ಷದ ಮಾಹಿತಿಯೂ ಸಿಗುತ್ತದೆ ಮೈ ಎಂಪಿಸಿಎಸ್ ಆ್ಯಪ್ ನಲ್ಲಿ

ಆಸಕ್ತರು ತಮ್ಮ ಇತ್ತೀಚಿನ 3 ಭಾವಚಿತ್ರಗಳು, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪಾನ್ ಕಾರ್ಡ್, ಹಾಗೂ ಅಂಕ ಪಟ್ಟಿಯ ನಕಲು ಪ್ರತಿಯೊಂದಿಗೆ ನೇರವಾಗಿ ಅಭ್ಯರ್ಥಿಗಳು ಅರ್ಜಿಗಳನ್ನು ಕೆಳಗಿನ ವಿಳಾಸಕ್ಕೆ ಸಲ್ಲಿಸಿ ತಮ್ಮ ಹೆಸರನ್ನು ತರಬೇತಗೆ ನೊಂದಾಯಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ಎ.ಡಿ.ಪೈ ಅಭಿವೃದ್ಧಿ ಸಂಸ್ಥೆ ಬೆಂಗಳೂರು –ಮೈಸೂರು ಹೆದ್ದಾರಿ ಯ ವಾಜರಹಳ್ಳಿ, ಬಿಡದಿ ಹೋಬಳಿ, ರಾಮನಗರ ಅಥವಾ ತರಬೇತಿ ಸಂಯೋಜಕರು ಮೊ. 9591752123 ಗೆ ಸಂಪರ್ಕಿಸಬಹುದು.

ಇದನ್ನೂ ಓದಿ.... ಪಶುಪಾಲಕರಿಗೆ ಸಂತಸದ ಸುದ್ದಿ: ಕುರಿ ಸಾಕಾಣಿಕೆ, ಹೈನುಗಾರಿಕೆ ಮಾಡಬೇಕೇ ಈ ಉಚಿತ ಸಹಾಯವಾಣಿಗೆ ಕರೆ ಮಾಡಿ