News

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹಕ್ಕಾಗಿ ಅರ್ಜಿ ಆಹ್ವಾನ

30 December, 2020 1:48 PM IST By:
ಸಾಂದರ್ಭಿಕ ಚಿತ್ರ

ಆರ್ಥಿಕವಾಗಿ ಹಿಂದುಳಿದವರಿಗಾಗಿ ಹಾಗೂ ದುಂಧುವೆಚ್ಚ ತಡೆಯುವುದಕ್ಕಾಗಿ ಧರ್ಮಸ್ಥಳ ಕ್ಷೇತ್ರದಲ್ಲಿ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.

ಹೌದು ಧರ್ಮಸ್ಥಳ ಕ್ಷೇತ್ರದಲ್ಲಿ 2021ರ ಏಪ್ರಿಲ್ 29ರ ಸಂಜೆ ಗಂಟೆ 6.48ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 49ನೇ ವರ್ಷದ ಉಚಿತ ಸಾಮೂಹಿಕ ವಿವಾಹ ನಡೆಯಲಿದೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ ನೀಡಲಾಗುವುದು. ಮದುವೆಯ ಎಲ್ಲಾ ವೆಚ್ಚವನ್ನು ಕ್ಷೇತ್ರದ ವತಿಯಿಂದ ಭರಿಸಲಾಗುತ್ತದೆ. ಎರಡನೇ ವಿವಾಹಕ್ಕೆ ಅವಕಾಶವಿಲ್ಲ.

ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದಲೇ ಭರಿಸುತ್ತದೆ. ವರದಕ್ಷಿಣಿ ಹಾಗೂ ಮದುವೆಯ ದುಂದುವೆಚ್ಚ ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಉಚಿತ ಸಾಮೂಹಿಕ ವಿವಾಹ ಆರಂಭಿಸಿದ್ದರು. ಈ ತನಕ ಒಟ್ಟು 12,262 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದಾರೆ.

ಸಾಮೂಹಿಕ ವಿವಾಹದಲ್ಲಿ ಮದುವೆ ಯಾಗಲಿಚ್ಛಿಸುವವರು ಏ.25ರೊಳಗೆ ಸ್ವವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ 08256-266644/ 9663464648 ಸಂಪರ್ಕಿಸಬಹುದು.