goat farming training : ಕುರಿ ಅಥವಾ ಮೇಕೆ ಸಾಕಾಣಿಕೆ ಮಾಡುವ ಕುರಿತು ಯೋಜನೆ ಮಾಡುತ್ತಿರುವ ಜನರಿಗೆ ಇಲ್ಲಿದೆ ಒಳ್ಳೆಯ ಅವಕಾಶ. ಇಂದು ಮತ್ತು ನಾಳೆ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ. ಎಲ್ಲಿ ತಿಳಿಯಿರಿ
sheep and goat breeding training : ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ, ದಾವಣಗೆರೆ ನಗರದ ಪಶು ಆಸ್ಪತ್ರೆ ಅವರಣದಲ್ಲಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ, ಜುಲೈ 3 ಮತ್ತು 4 ರಂದು 25 ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ.
ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೊ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ಜೆರಾಕ್ಸ್ ತರಬೇಕು.
ತರಬೇತಿಯಲ್ಲಿ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ಸಂಪರ್ಕಿಸಬಹುದೆಂದು ಮುಖ್ಯ ಪಶು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಗತ್ಯ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಕೊರತೆ ಇಲ್ಲ: ಕೃಷಿ ಸಚಿವ ಚೆಲುವರಾಯಸ್ವಾಮಿ
ರಾಜ್ಯದಲ್ಲಿ ರೈತರಿಗೆ ಅಗತ್ಯವಿರುವ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಕೊರತೆ ಇಲ್ಲ. ಆದ್ದರಿಂದ ರೈತರು ಯಾವುದೇ ಕಾರಣಕ್ಕೂ ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ರೈತರಿಗೆ ಸಮಸ್ಯೆಯಾಗದಂತೆ ಸರಿಯಾದ ಸಮಯಕ್ಕೆ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳನ್ನು ಪೂರೈಕೆ ಮಾಡಲಾಗುತ್ತದೆ.
ಮಳೆಯಾಗಿರುವ ಪ್ರದೇಶದ ರೈತರಿಗೆ ಬೇಕಾಗುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ನೀಡಲಾಗುವುದು. ರೈತರು ಆತಂಕ ಪಡುವ ಅಗತ್ಯವಿಲ್ಲ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಮೈಸೂರಿನಲ್ಲಿ ತಿಳಿಸಿದ್ದಾರೆ
Share your comments