News

ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಎಚ್ಚರಿಕೆ

19 June, 2020 3:08 PM IST By:

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕೆಲ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಗೆ ಜೀವಕಳೆ ಬಂದಿದೆ.  ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಜೂನ್‌ 23ರವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಮೂರರಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ವಿವಿಧ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಮುಂದಿನ 24 ಗಂಟೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಜು.22ರಿಂದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗದ ವಿವಿಧ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.