1. ಸುದ್ದಿಗಳು

HD Kumaraswamy ಬಾಣಲೆಯಿಂದ ಬೆಂಕಿಗೆ; ಎಚ್‌.ಡಿ ಕುಮಾರಸ್ವಾಮಿ ಹೀಗಂದಿದ್ದೇಕೆ ?

Hitesh
Hitesh
From the frying pan to the fire; Why did HD Kumaraswamy say this?

 ಕಳೆದ ಕೆಲವು ದಿನಗಳಿಂದ ಕಾಂಗ್ರೆಸ್ ಸರ್ಕಾರದ ಮೇಲೆ ಬೆಂಕಿಯುಂಡೆ ಸಿಡಿಸುತ್ತಿರುವ ಮಾಜಿ ಮುಖ್ಯಮಂತ್ರಿ (HD Kumaraswamy) ಕುಮಾರಸ್ವಾಮಿ ಅವರು ಇದೀಗ…  

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ!

ಇದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣನವರ ಹೊಸ ಹೇಳಿಕೆ.

ಇದೇ ಕೆಂಪಣ್ಣನವರ 40% ಆರೋಪವನ್ನೇ ಅಸ್ತ್ರ ಮಾಡಿಕೊಂಡು, ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ.

ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ.

ಇದು ಎಂಥಾ ಮನಃಸ್ಥಿತಿ? ಇದಕ್ಕೆ ಚಿಕಿತ್ಸೆ ಬೇಡವೇ? ಎಂದು ಖಾರವಾಗಿ ಅವರು ಪ್ರಶ್ನೆ ಮಾಡಿದ್ದಾರೆ.

ಈಗ ವಿಷಯಾಂತರ ಮಾಡಿ,  (HD Kumaraswamy ) ಕುಮಾರಸ್ವಾಮಿಯ ಟೀಕೆ, ಭಾಷೆ, ಅರೋಪ ಇಟ್ಟುಕೊಂಡು

ಅನುಕಂಪ ಗಿಟ್ಟಿಸಲು ಹೊರಟಿದ್ದೀರಿ! ಆದರೆ; ಅನುದಿನವೂ ವರ್ಗಾವಣೆ, ಕಮೀಷನ್ ದಂಧೆಯಲ್ಲಿ ಬೇಯುತ್ತಿರುವವರ

ಕರುಣಾಜನಕ ಕಥೆಗಳಿಗೆ ಕೊನೆ ಎಂದು? ನಿಮ್ಮ ಹಣದ ಹಪಾಹಪಿ, ಧನಪಿಶಾಚಿ ರಕ್ಕಸತನಕ್ಕೆ ಅಂತ್ಯ ಯಾವಾಗ?

ಎಂದು ಕುಮಾರಸ್ವಾಮಿ ಅವರು ಕೇಳಿದ್ದಾರೆ.

ಇಂಥ ಸುಲಿಗೆ ಮನಸ್ಥಿತಿಗೂ ಸೂಕ್ತ ಚಿಕಿತ್ಸೆ ಬೇಡವೇ Siddaramaiah ನವರೇ? ಸರಕಾರಿ ಉದ್ಯೋಗಿಗಳು,

ಅವರ ಕುಟುಂಬದವರ ಕಣ್ಣೀರಿನ ಶಾಪ ನಿಮಗೆ ತಟ್ಟದಿರುವುದೇ? ಮಾನಸಿಕ ಸ್ಥಿಮಿತತೆ ಎಂದರೆ ಸರಕಾರಿ

ಉದ್ಯೋಗಿಗಳನ್ನು ಕಾಸಿಗಾಗಿ ಎಡೆಬಿಡದೆ ಕಾಡುವುದೇ? ಅಥವಾ ಇದೇನಾ ಸಾಮಾಜಿಕ ನ್ಯಾಯ?

ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದಿದ್ದು.

ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ 'ಸಿದ್ದಕಲೆ' ನನಗಂತೂ ಗೊತ್ತಿಲ್ಲ.

ಒಂದೇ ಹುದ್ದೆಗೆ Chief Minister of Karnataka  ಕಚೇರಿಯ ಐದಾರು ಟಿಪ್ಪಣಿಗಳು

ನಡೆದಂತೆ ಎಲ್ಲವನ್ನೂ ನುಡಿಯುತ್ತಿವೆ' ಹಾಗೂ ಆಯ್ದ ಕಿಸೆಗಳನ್ನು ಭರ್ತಿ ತುಂಬುತ್ತಿವೆ!

ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತದ ಕಥೆ ಏನು? 136 ಸೀಟು ಎಂದು ಬೀಗುತ್ತಿದ್ದೀರಿ,

ಹಣದುಬ್ಬರದಂತೆ 'ಅತಿ ಉಬ್ಬರ'ವೂ ದೇಶಕ್ಕೆ ಒಳ್ಳೆಯದಲ್ಲ.

ಸಭ್ಯ ಭಾಷೆಯಲ್ಲೇ ತಮಗೆ ಹೇಳುತ್ತಿದ್ದೇನೆ. ಅರ್ಥವಾಗಿದೆ ಎಂದು ಭಾವಿಸುತ್ತೇನೆ ಎಂದು ಅವರು ಹೇಳಿದ್ದಾರೆ.  

Published On: 09 August 2023, 03:41 PM English Summary: From the frying pan to the fire; Why did HD Kumaraswamy say this?

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.