ಗಾಂಧಿ ಶಾಂತಿ ಪ್ರಶಸ್ತಿಯು (Gandhi Peace Prize) ಮಹಾತ್ಮಾ ಗಾಂಧಿಯವರ 125 ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಹಾತ್ಮ ಗಾಂಧಿಯವರು ಪ್ರತಿಪಾದಿಸಿದ ಆದರ್ಶಗಳಿಗೆ ಗೌರವವಾಗಿ 1995 ರಲ್ಲಿ ಭಾರತ ಸರ್ಕಾರವು ಸ್ಥಾಪಿಸಿದ ವಾರ್ಷಿಕ ಪ್ರಶಸ್ತಿಯಾಗಿದೆ . ಈ ಪ್ರಶಸ್ತಿಯು ರಾಷ್ಟ್ರೀಯತೆ, ಜನಾಂಗ, ಭಾಷೆ, ಜಾತಿ, ಮತ ಅಥವಾ ಲಿಂಗವನ್ನು ಲೆಕ್ಕಿಸದೆ ಎಲ್ಲಾ ವ್ಯಕ್ತಿಗಳಿಗೆ ಮುಕ್ತವಾಗಿದೆ. ಪ್ರಶಸ್ತಿಯು 1 ಕೋಟಿ ರೂ, ಪ್ರಮಾಣ ಮತ್ತು ಸೊಗಸಾದ ಸಾಂಪ್ರದಾಯಿಕ ಕರಕುಶಲ ಫಲಕ ಹೊಂದಿರುತ್ತದೆ.
ಗೌರವಾನ್ವಿತ ಪ್ರಧಾನ ಮಂತ್ರಿಯವರ ನೇತೃತ್ವದ ತೀರ್ಪುಗಾರರ ಸಮಿತಿಯು 18 ಜೂನ್ 2023 ರಂದು ಗೀತಾ ಪ್ರೆಸ್ ಅನ್ನು 2021 ರ ಗಾಂಧಿ ಶಾಂತಿ ಪ್ರಶಸ್ತಿಗೆ ಭಾಜನರಾಗಿ ಆಯ್ಕೆ ಮಾಡಲು ಸರ್ವಾನುಮತದಿಂದ ನಿರ್ಧರಿಸಿತು. 1923 ರಲ್ಲಿ ಸ್ಥಾಪನೆಯಾದ ಗೀತಾ ಪ್ರೆಸ್ ವಿಶ್ವದ ಅತಿದೊಡ್ಡ ಪ್ರಕಾಶಕರಲ್ಲಿ ಒಂದಾಗಿದೆ.
16.21 ಕೋಟಿ ಶ್ರೀಮದ್ ಭಗವದ್ಗೀತೆ ಸೇರಿದಂತೆ 14 ಭಾಷೆಗಳಲ್ಲಿ 41.7 ಕೋಟಿ ಪುಸ್ತಕಗಳನ್ನು ಪ್ರಕಟಿಸಿದೆ. ಸಂಸ್ಥೆಯು ಆದಾಯ ಉತ್ಪಾದನೆಗಾಗಿ ತನ್ನ ಪ್ರಕಟಣೆಗಳಲ್ಲಿನ ಜಾಹೀರಾತನ್ನು ಎಂದಿಗೂ ಅವಲಂಬಿಸಿಲ್ಲ. ಗೀತಾ ಪ್ರೆಸ್ ತನ್ನ ಸಂಯೋಜಿತ ಸಂಸ್ಥೆಗಳೊಂದಿಗೆ, ಜೀವನದ ಸುಧಾರಣೆ ಮತ್ತು ಎಲ್ಲರ ಯೋಗಕ್ಷೇಮಕ್ಕಾಗಿ ಶ್ರಮಿಸುತ್ತದೆ.
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಾಂತಿ ಮತ್ತು ಸಾಮಾಜಿಕ ಸಾಮರಸ್ಯದ ಗಾಂಧಿ ಆದರ್ಶಗಳನ್ನು ಪ್ರಚಾರ ಮಾಡುವಲ್ಲಿ ಗೀತಾ ಪ್ರೆಸ್ ಕೊಡುಗೆಯನ್ನು ಸ್ಮರಿಸಿದರು. ಗೀತಾ ಮುದ್ರಣಾಲಯ ಸ್ಥಾಪನೆಯಾಗಿ ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗಾಂಧಿ ಶಾಂತಿ ಪ್ರಶಸ್ತಿ ಪ್ರದಾನ ಮಾಡಿರುವುದು ಸಂಸ್ಥೆಯು ಸಮಾಜ ಸೇವೆಯಲ್ಲಿ ಮಾಡಿರುವ ಕಾರ್ಯವನ್ನು ಗುರುತಿಸಿದೆ ಎಂದು ಅವರು ಅಭಿಪ್ರಾಯಪಟ್ಟರು.
ಗಾಂಧಿ ಶಾಂತಿ ಪ್ರಶಸ್ತಿ 2021, ಮಾನವೀಯತೆಯ ಸಾಮೂಹಿಕ ಉನ್ನತಿಗೆ ಕೊಡುಗೆ ನೀಡುವಲ್ಲಿ ಗೀತಾ ಪ್ರೆಸ್‌ನ ಪ್ರಮುಖ ಮತ್ತು ಸಾಟಿಯಿಲ್ಲದ ಕೊಡುಗೆಯನ್ನು ಗುರುತಿಸುತ್ತದೆ. ಇದು ಗಾಂಧಿವಾದಿ ಜೀವನವನ್ನು ನಿಜವಾದ ಅರ್ಥದಲ್ಲಿ ನಿರೂಪಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಇತ್ತೀಚಿನ ಪ್ರಶಸ್ತಿ ಪುರಸ್ಕೃತರಲ್ಲಿ ಸುಲ್ತಾನ್ ಕಬೂಸ್ ಬಿನ್ ಸೈದ್ ಅಲ್ ಸೈದ್, ಒಮಾನ್ (2019) ಮತ್ತು ಬಾಂಗ್ಲಾದೇಶದ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ (2020) ಸೇರಿದ್ದಾರೆ.