News

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಸಿಹಿಸುದ್ದಿ.. ಯೋಜನೆ ಸೌಲಭ್ಯ ಪಡೆಯಲು ವಯೋಮಿತಿ ಹೆಚ್ಚಳ

26 September, 2022 9:57 AM IST By: Maltesh
Ganga Kalyan Increase in age limit for availing scheme facility

ಪ್ರಸ್ತುತ ವಿಧಾನ ಮಂಡಲ ಉಭಯ ಸದನಗಳ ಕಲಾಪ ನಡೆಯುತ್ತಿದ್ದು, ಹಲವು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರ ಮಧ್ಯೆ 'ಗಂಗಾ ಕಲ್ಯಾಣ' ಯೋಜನೆ ಫಲಾನುಭವಿಗಳಿಗೂ ಶುಭ ಸುದ್ದಿ ಸಿಕ್ಕಿದೆ.

ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಹರತಾಳು ಹಾಲಪ್ಪ ಅವರ ಪರವಾಗಿ ಎಂ.ಪಿ. ಕುಮಾರಸ್ವಾಮಿ ಕೇಳಿದ ಪ್ರಶ್ನೆಗೆ ಈ ಉತ್ತರ ನೀಡಿದ್ದು, ವಯೋಮಿತಿಯನ್ನು ಮತ್ತಷ್ಟು ವಿಸ್ತರಣೆ ಮಾಡಬೇಕು ಎಂಬ ಮನವಿ ಬಂದರೆ ಅದನ್ನು ಪರಿಶೀಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಉಭಯ ಮಂಡಳಗಳ ಅಧಿವೇಶನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಹಲಾವರು ಮಹತ್ತರ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ. ಇನ್ನು ಗಂಗಾ ಕಲ್ಯಾಣ ಯೋಜನೆಯ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ.

ಹಣದಿಂದ ನನ್ನ ನೆಮ್ಮದಿ ಪೂರ್ಣ ಹಾಳಾಗಿದೆ: ಕೇರಳ 25 ಕೋಟಿ ಲಾಟರಿ ಗೆದ್ದ ಅನೂಪ್‌

ಹೌದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಡಿಯ ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆ ಸೌಲಭ್ಯ ಪಡೆಯಲು ಫಲಾನುಭವಿಗಳ ವಯೋಮಿತಿಯನ್ನು ಈಗ ಗರಿಷ್ಠ 60 ವರ್ಷಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ವಯೋಮಿತಿಯನ್ನು ಮತ್ತಷ್ಟು ವಿಸ್ತರಣೆ ಮಾಡಬೇಕು ಎಂಬ ಮನವಿ ಬಂದರೆ ಅದನ್ನು ಪರಿಶೀಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ ಸಚಿವ ಕೋಟ ಶ್ರೀನಿವಾಸ್‌ ಪೂಜಾರಿ ಹೇಳಿದ್ದಾರೆ.

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2022 23ನೇ ಸಾಲಿಗೆ ರೈತರಿಗೆ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 20 ಕೊನೆ ದಿನ

ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ (Seva Sindhu Portal) ಮುಖಾಂತರ ಆಹ್ವಾನಿಸಲಾಗಿದ್ದು, ರೈತರು ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾಕೇಂದ್ರಗಳಲ್ಲಿ ಅ.20ರೊಳಗೆ ಆನ್ ಲೈನ ಮೂಲಕ ಸಲ್ಲಿಸಬಹುದು.

ಕೋಟ್ಯಾಂತರ ರೈತರಿಗೆ ಸಿಹಿಸುದ್ದಿ: ಇದೀಗ ಈ ಬ್ಯಾಂಕ್‌ನಿಂದ ರೈತರ ಖಾತೆಗೆ ನೇರವಾಗಿ ಸೇರಲಿದೆ 50 ಸಾವಿರ ರೂ

ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಈ ಕೆಳಕಂಡ ಅರ್ಹತೆಗಳನ್ನು ಹೊಂದಿರಬೇಕು

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಜಾತಿ ಸಮುದಾಯಗಳಿಗೆ ಸೇರಿದ ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದು ಹಾಲಿ ಜಮೀನುಗಳು ಋಷ್ಠಿಯಾಗಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿರಬಾರದು.

ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು.

ಅರ್ಜಿದಾರರ ವಯಸ್ಸು 18 ರಿಂದ 10 ವರ್ಷದ ಒಳಗಿರಬೇಕು.

ಸರ್ಕಾರದಿಂದ ಗುಡ್‌ನ್ಯೂಸ್‌: ಇನ್ಮುಂದೆ ಡ್ರೈವಿಂಗ್‌ ಲೈಸೆನ್ಸ್‌ ಪಡೆಯಲು RTOಗೆ ಹೋಗಬೇಕಿಲ್ಲ!

ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ, ಇಂದಿನ ಬೆಲೆ ಎಷ್ಟೇಂದು ಮನೆಯಲ್ಲಿ ಕುಳಿತು ತಿಳಿಯಿರಿ

ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/- ಹಾಗೂ ಪಟ್ಟಣ ಪದೇಶದವರಿಗೆ ರೂ.1,20,000/-ಗಳ ಒಳಗಿರಬೇಕು.

ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 12 ಎಕರೆ ಜಮೀನು ಹೊಂದಿರಬೇಕು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 01 ಎಕರೆ ಜಮೀನು ಹೊಂದಿರಬೇಕು.

ವೈಯಕ್ತಿಕ ಕೊಳವೆ ಬಾವಿ ಯೋಜನೆಯಲ್ಲಿ ಘಟಕ ವೆಚ್ಚ ರೂ.2.50 ಲಕ್ಷಗಳು, ಇದರಲ್ಲಿ ರೂ.2.00ಲಕ್ಷ ಸಹಾಯಧನ ಹಾಗೂ ರೂ.50,000/- ನಿಗಮದಿಂದ ಶೇ.4ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳಿಗೆ ವೈಯಕ್ತಿಕ ಕೊಳವೆ ಬಾವಿ ಘಟಕ ವೆಚ್ಚ ರೂ.4.00ಲಕ್ಷಗಳು ಇದರಲ್ಲಿ ರೂ.3.50ಲಕ್ಷ ಸಹಾಯಧನ ಹಾಗೂ ರೂ.50,000/- ನಿಗಮದಿಂದ ಶೇ.4ರ ಬಡ್ಡಿದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿದೆ.