1. ಸುದ್ದಿಗಳು

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: BBMPಯಿಂದ ಶೇ.5ರಷ್ಟು ಆಸ್ತಿ ತೆರಿಗೆ ವಿನಾಯ್ತಿ ಅವಧಿ ವಿಸ್ತರಣೆ!

Kalmesh T
Kalmesh T
Good news: 5% property tax exemption period extended by BBMP!

5% property tax exemption period extended by BBMP: ಬೆಂಗಳೂರಿನ ನಿವಾಸಿಗಳಿಗೆ ಸಿಹಿಸುದ್ದಿ. ಕಳೆದ ತಿಂಗಳು ಶೇ.5ರಷ್ಟು ತೆರಿಗೆ ವಿನಾಯ್ತಿ ಅವಧಿ ವಿಸ್ತರಣೆಗೆ ಸಲ್ಲಿಸಿದ್ದ ಮನವಿಯನ್ನು ಬಿಬಿಎಂಪಿ ಪರಿಗಣಿಸಿ ಒಪ್ಪಿಗೆ ಸೂಚಿಸಿದೆ.

Income Tax Exemptions: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (Bruhat Bengaluru Mahanagara Palike) ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಹಾಗೂ ಪಾಲಿಕೆಯ ಆರ್ಥಿಕ ದೃಷ್ಟಿಯಿಂದ 2023-24ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇ 5%ರಷ್ಟು ಆಸ್ತಿ ತೆರಿಗೆ ಪಾವತಿಯ ವಿನಾಯಿತಿಯನ್ನು ಜೂನ್‌ 30ರ ವರೆಗೆ ವಿಸ್ತರಿಸಿ ಆದೇಶ ಮಾಡಲಾಗಿದೆ. ಈಗಾಗಲೇ ಒಂದು ತಿಂಗಳ ಅವಧಿಗೆ ಆಸ್ತಿ ತೆರಿಗೆ ಪಾವತಿಯ ಮೇಲೆ ವಿನಾಯ್ತಿಯನ್ನು ನೀಡಲಾಗಿತ್ತು.

ಬೆಂಗಳೂರು ಮಹಾನಗರ ಪಾಲಿಕೆಯ (BBMP) ಮುಖ್ಯಆಯುಕ್ತರಾದ ತುಷಾರ್ ಗಿರಿನಾಥ್ ಅವರಿಗೆ ಶೇ.5ರಷ್ಟು ಆಸ್ತಿ ತೆರಿಗೆ ವಿನಾಯ್ತಿ ಅವಧಿಯನ್ನು ವಿಸ್ತರಿಸಲು ಮಾಜಿ ಆಡಳಿತ ಪಕ್ಷದ ನಾಯಕ ಎಂ. ಶಿವರಾಜು ಅವರು, ಮಾಜಿ ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ಅವರು, ಮಾಜಿ ಮಹಾನಗರ ಪಾಲಿಕೆ ಸದಸ್ಯ ಮೋಹನ್ ಕುಮಾರ್ ಅವರು ಕಳೆದ ತಿಂಗಳು ಮನವಿ ಸಲ್ಲಿಸಿದ್ದರು.

ಬಿಬಿಎಂಪಿ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಪ್ರತಿ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸುವ ತೆರಿಗೆದಾರರಿಗೆ ಶೇ.5 ರಷ್ಟು ರಿಯಾಯಿತಿ (5% property tax exemption)ಅನ್ನು ನೀಡಲಾಗುತ್ತಿತ್ತು. ಆದರೆ, 2023-24ನೇ ಸಾಲಿನಲ್ಲಿ, ಏಪ್ರಿಲ್ ತಿಂಗಳಿನಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಿದ ತೆರಿಗೆದಾರರಿಗೆ ಮಾತ್ರ ಶೇ.5 ರಷ್ಟು ರಿಯಾಯಿತಿಯನ್ನು ನೀಡಲಾಗಿರುತ್ತದೆ.

ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ ಪ್ರಕ್ರಿಯೆ ಕೆಲಸಗಳು ಚಾಲ್ತಿಯಲ್ಲಿದ್ದ ಕಾರಣ ಕಂದಾಯ ವಿಭಾಗದ ಎಲ್ಲಾ ಸಿಬ್ಬಂದಿ ಚುನಾವಣಾ ಕೆಲಸ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದು, ಹಲವಾರು ತೆರಿಗೆದಾರರು ನಿಗದಿತ ಸಮಯದಲ್ಲಿ ಆಸ್ತಿ ತೆರಿಗೆಯನ್ನು ಪಾವತಿಸಲು ಸಾಧ್ಯವಾಗಿರುವುದಿಲ್ಲ ಎಂದು ಬಿಬಿಎಂಪಿಯ ಮುಖ್ಯ ಆಯುಕ್ತರಿಗೆ ನೀಡಿರುವ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. 

Published On: 06 June 2023, 05:07 PM English Summary: Good news: 5% property tax exemption period extended by BBMP!

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.